Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*
  • *ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೈಸೂರು, NEWS DESK ಸೆ.05: ಅಂಬಾರಿ ಆನೆ ಅಭಿಮನ್ಯುವಿಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆತನಿಗೆ ಅಕ್ಷರ ತೇರಿನಲ್ಲಿ ಭಾವ ಪೂರ್ಣವಾಗಿ ಬೀಳ್ಕೊಡುವ ಹಾಗೂ ಹಿರಿಯ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಅಭಿನ್ಯುವಿನ ಕುರಿತು ಭಾವನಾತ್ಮಕವಾಗಿ ಬರೆದ ಎರಡು ಕೃತಿಗಳ ಬಿಡುಗಡೆ ಕಾರ್ಯಕ್ರಮ ಸೆಪ್ಟಂಬರ್ 9ನೇ ತಾರೀಕು ಬುಧವಾರ ಮೈಸೂರಿನಲ್ಲಿ ಆಯೋಜಿಸಲಾಗಿದೆ.
ಮೈಸೂರು ಕಲ್ಚರಲ್ ಅಸೋಸಿಯೇಷನ್, ಅರಣ್ಯ ಇಲಾಖೆಯ ಮೈಸೂರು ವನ್ಯಜೀವಿ ವಿಭಾಗ ಹಾಗೂ ನಗರ ಕೇಂದ್ರ ಗ್ರಂಥಾಲಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ಅಕ್ಷಿ ಪ್ರಕಾಶನಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ನಗರದ ಪೀಪಲ್ಸ್ ಪಾರ್ಕ್ನಲ್ಲಿರುವ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಐತಿಚಂಡ ರಮೇಶ್ ಉತ್ತಪ್ಪ ಅವರು ಕಳೆದ ಒಂದು ವರ್ಷದಿಂದ ಅಭಿಮನ್ಯುವಿನ ಕುರಿತು ಎರಡು ವಿಭಿನ್ನ ಕೃತಿಗಳನ್ನು ಬರೆದಿದ್ದಾರೆ. `ಮೌನದ ಮಹಾಪಯಣ, ಅಭಿಮನ್ಯುವಿಗೆ ಒಲವಿನ ಓಲೆ’ ಕೃತಿಯಲ್ಲಿ ಭಾವನಾತ್ಮವಾದ ಪತ್ರಗಳಿವೆ. ಅಭಿಮನ್ಯುವಿಗೆ ಪತ್ರಗಳ ಮೂಲಕ ಬೀಳ್ಕೊಡುವ ವಿಭಿನ್ನ ಪ್ರಯತ್ನವಾಗಿದೆ. ಲೇಖಕರ ಕಲ್ಪನೆಯಲ್ಲಿ ಅಭಿಮನ್ಯುವಿನೊಂದಿಗೆ ಒಡನಾಡಿದ ಆನೆಗಳು, ಮಾವುತರು, ಅಧಿಕಾರಿಗಳು, ಅಭಿಮಾನಿಗಳು ಪತ್ರ ಬರೆಯುತ್ತಾರೆ. ಕೊನೆಯಲ್ಲಿ ಅಭಿಮನ್ಯು ಕರುನಾಡ ಕನ್ನಡಿಗರಿಗೆ ಕೃತಜ್ಞತೆ ಅರ್ಪಿಸುವ ಪತ್ರವಿದೆ.
ಮತ್ತೊಂದು ಕೃತಿ `ಅಭಿಮನ್ಯುವಿಗೆ ಕಾವ್ಯಾರತಿ, ಅಂಬಾರಿ ವೀರನ ಅಕ್ಷರಗೌರವ’ ಕಾವ್ಯಮಾಲೆ. ಅಭಿಮನ್ಯುವಿನ ಕುರಿತು ಚಂಪೂ, ರಗಳೆ, ಲಾವಣಿ, ವಚನ, ಭಾವಗೀತೆ ಶೈಲಿಯಲ್ಲಿ ಕಾವ್ಯರಚಿಸಲಾಗಿದೆ. ಇದಂತೂ ಹೊಸ ಪ್ರಯತ್ನವಾಗಿದ್ದು, ಅಭಿಮನ್ಯುವಿಗೆ ವಿಭಿನ್ನ ರೀತಿಯಲ್ಲಿ ಬೀಳ್ಕೊಡುವ ಪ್ರಯತ್ನವಾಗಿದೆ.
ಅಂದು ಬೆಳಗ್ಗೆ 10.30ಕ್ಕೆ ಮೈಸೂರಿನ ಮಾಧ್ಯಮ ಮಿತ್ರರು ತೆಗೆದ ಅಭಿಮನ್ಯುವಿನ ವಿವಿಧ ಭಂಗಿಯ ಛಾಯಾಚಿತ್ರಗಳ ಪ್ರದರ್ಶನವನ್ನು ಅಪರ ಜಿಲ್ಲಾಧಿಕಾರಿ ಶ್ರೀಮತಿ ಆರ್. ಐಶ್ವರ್ಯ ಉದ್ಘಾಟಿಸಲಿದ್ದಾರೆ. ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಖ್ಯಾತ ವನ್ಯಜೀವಿ ತಜ್ಞರಾದ ಶ್ರೀ ಕೃಪಾಕರ ಸೇನಾನಿ ಅವರು ಉದ್ಘಾಟಿಸುತ್ತಾರೆ.
ಕೃತಿಗಳನ್ನು ವನ್ಯಜೀವಿ ವಿಭಾಗದ ಡಿಸಿಎಫ್ ಡಾ. ಐ.ಬಿ.ಪ್ರಭುಗೌಡ ಹಾಗೂ ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕ ಬಿ.ಮಂಜುನಾಥ್ ಬಿಡುಗಡೆ ಮಾಡಲಿದ್ದಾರೆ. ಮೈಸೂರು ಕಲ್ಚರಲ್ ಅಸೋಸಿಯೇಷನ್‌ನ ಅಧ್ಯಕ್ಷ ಎ.ಪಿ.ನಾಗೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಅಭಿಮನ್ಯುವಿನ ಮಾವುತ ವಸಂತ ಅವರನ್ನು ಮೈಸೂರು ಕಲ್ಚರಲ್ ಅಸೋಸಿಯೇಷನ್‌ನ ಕಾರ್ಯದರ್ಶಿ ಮಹದೇವ್ ಅವರು ಸನ್ಮಾನಿಸಲಿದ್ದಾರೆ. ಕೃತಿಗಳ ಲೇಖಕ ಐತಿಚಂಡ ರಮೇಶ್ ಉತ್ತಪ್ಪ ಅವರು ಉಪಸ್ಥಿತಿ ಇರಲಿದ್ದಾರೆ.
ಅಭಿಮನ್ಯುವಿನ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*

ಸೆಪ್ಟೆಂಬರ್ 5, 2026

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೈಸೂರು, NEWS DESK ಸೆ.05: ಅಂಬಾರಿ ಆನೆ ಅಭಿಮನ್ಯುವಿಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆತನಿಗೆ ಅಕ್ಷರ ತೇರಿನಲ್ಲಿ ಭಾವ…

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.