ಮಡಿಕೇರಿ, NEWS DESK ಸೆ.5 : ಮಡಿಕೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹತ್ತು ದೇವಾಲಯಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಶಾಸಕರ ಅನುದಾನದಡಿ ಶಾಸಕ ಡಾ.ಮಂತರ್ ಗೌಡ ಅವರು ತಲಾ ರೂ.5 ಲಕ್ಷದಂತೆ ಅನುದಾನ ನೀಡಿದ್ದಾರೆ. ಎರಡು ದೇವಾಲಯಗಳಲ್ಲಿ ಕಾಮಗಾರಿ ಆರಂಭಕ್ಕೆ ಪೂಜಾ ಕಾರ್ಯಕ್ರಮ ನಡೆಯಿತು.
ಶ್ರೀ ಚೌಡೇಶ್ವರಿ ದೇವಾಲಯ ಹಾಗೂ ಶ್ರೀ ಕೋದಂಡರಾಮ ದೇವಾಲಯದಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ವಿಶೇಷ ಪೂಜೆ ಸಲ್ಲಿಸಿದರು.
ಶಾಸಕರ ಅನುದಾನದಡಿ ಕ್ಷೇತ್ರದ ಒಟ್ಟು ಹತ್ತು ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಾಕಿ ಇರುವ ಎಂಟು ದೇವಾಲಯಗಳಿಗೂ ಭೇಟಿ ನೀಡಿ ಕಾಮಗಾರಿಗಾಗಿ ಪೂಜೆಯಲ್ಲಿ ಪಾಲ್ಗೊಳ್ಳುವುದಾಗಿ ಶಾಸಕರು ತಿಳಿಸಿದರು.
ದೇವಾಲಯ ಸಮಿತಿಯ ಪ್ರಮುಖರು, ಮೂಡ ಹಾಗೂ ನಗರಸಭೆಯ ಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಮತ್ತಿತರರು ಹಾಜರಿದ್ದರು.








