Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.5 NEWS DESK : ಕೊಡಗು ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ ಮಂಡಿ ಸಮಸ್ಯೆಯ ಪರಿಹಾರಕ್ಕಾಗಿ ರೋಬೋಟಿಕ್ ಸಜ೯ರಿ ಸೌಲಭ್ಯ ದೊರಕಲಿದೆ. ಇದಕ್ಕಾಗಿ 3 ಕೋಟಿ ರು. ವೆಚ್ಚದ ರೋಬೋಟಿಕ್ ಉಪಕರಣಕ್ಕಾಗಿ ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿದ೯ಶಕ ಡಾ.ಎ.ಜಿ. ಲೋಕೇಶ್ ತಿಳಿಸಿದ್ದಾರೆ. ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕನಾ೯ಟಕ ಆರ್ಥೋಪೆಡಿಕ್ ಅಸೋಸಿಯೇಷನ್’ ಹಾಗೂ ಸಂಸ್ಥೆಯ ಕೀಲು ಮತ್ತು ಮೂಳೆ ವಿಭಾಗ’ದ ವತಿಯಿಂದ ಇದೇ ಮೊದಲ ಬಾರಿಗೆ ಆಯೋಜಿಸಲಾಗಿದ್ದ ಮಧ್ಯವಾರ್ಷಿಕ ರಾಜ್ಯಮಟ್ಟದ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಬಾರಿಯ ಸಮ್ಮೇಳನವು ಮಂಡಿ ಚಿಪ್ಪು ಮತ್ತು ಕೀಲು ಸಮಸ್ಯೆಗಳ ಸಂಪೂರ್ಣ ಅಧ್ಯಯನ ಎಂಬ ಶೀರ್ಷಿಕೆಯಡಿ ನಡೆಯಲಿದ್ದು, ಮಂಡಿ ಕೀಲು ನುಣುಪು ಸಮಸ್ಯೆಗಳು, ದಿನನಿತ್ಯದ ನಡಿಗೆ ಹಾಗೂ ಕಾರ್ಯಚಟುವಟಿಕೆಗಳಲ್ಲಿ ಎದುರಾಗುವ ತೊಂದರೆಗಳು, ಕ್ರೀಡಾಪಟುಗಳ ಮಂಡಿ ಗಾಯಗಳು ಸುಧಾರಿತ ಕೀಲು ಬದಲಿ ಶಸ್ತ್ರಚಿಕಿತ್ಸೆಗಳು ಕೀಲು ತಪಾಸಣೆ ಸೇರಿದಂತೆ ನಾನಾ ಜಟಿಲ ಸಮಸ್ಯೆಗಳ ಕುರಿತು ರಾಜ್ಯದ ವಿವಿಧ ಭಾಗಗಳ ತಜ್ಞ ವೈದ್ಯರಿಂದ ಉಪನ್ಯಾಸ, ವಾದ-ಮಂಡನೆ ಹಾಗೂ ಸಂವಾದಗಳು ಎರಡು ದಿನಗಳ ಕಾಲ ನಡೆಯಲಿದೆ ಎಂದು ಡಾ. ಲೋಕೇಶ್ ಮಾಹಿತಿ ನೀಡಿದರು. 2016 ರಲ್ಲಿ ಪ್ರಾರಂಭವಾದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಇದೀಗ 10 ವಷ೯ಗಳನ್ನು ಪೂರೈಸಿದ್ದು, ಶೀಘ್ರಗತಿಯಲ್ಲಿ ಅಭಿವೖದ್ದಿ ಹೊಂದುತ್ತಿದೆ. ಪ್ರಸ್ತುತ 650 ಹಾಸಿಗೆಗಳ ಸೌಲಭ್ಯವಿರುವ ಜಿಲ್ಲಾ ಸಕಾ೯ರಿ ಆಸ್ಪತ್ರೆಯನ್ನು ಈ ವಷಾ೯ಂತ್ಯದೊಳಗಾಗಿ 800 ಹಾಸಿಗೆಗಳ ಸೌಲಭ್ಯಗಳಿಗೆ ಉನ್ನತ ದಜೆ೯ಗೇರಿಸಲಾಗುತ್ತದೆ ಎಂದು ಮಾಹಿತಿ ನೀಡಿದ ಡಾ.ಲೋಕೇಶ್, 3 ಕೋಟಿ ರುಪಾಯಿ ವೆಚ್ಚದಲ್ಲಿ ಮಂಡಿನೋವಿನ ಶಸ್ತ್ರಚಿಕಿತ್ಸೆಗಾಗಿ ರೋಬೋಟಿಕ್ ಸಜ೯ರಿ ಸೌಲಭ್ಯ ಕಲ್ಪಿಸಲಾಗುತ್ತದೆ. ಕೊಡಗು ಆರೋಗ್ಯ ಕ್ಷೇತ್ರದಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ ಎಂದು ತಿಳಿಸಿದರು. ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ಸಚ್ಚಿದನಾಂದ ರೈ ಮಾತನಾಡಿ, ಪ್ರತೀ ವಷ೯ವೂ ರಾಜ್ಯದ ವಿವಿಧ ಮೆಡಿಕಲ್ ಕಾಲೇಜುಗಳಿಂದ 300 ಕ್ಕೂ ಅಧಿಕ ಮೂಳೆ ಮತ್ತು ಕೀಲು ವೈದ್ಯರು ವೈದ್ಯಕೀಯ ಕ್ಷೇತ್ರ ಪ್ರವೇಶಿಸುತ್ತಿದ್ದಾರೆ. ಇಂಥವರಿಗೆ ಈ ಕ್ಷೇತ್ರದಲ್ಲಿನ ಆಧುನಿಕ ಸೌಲಭ್ಯಗಳ ಮಾಹಿತಿ ನೀಡಬೇಕಾಗುತ್ತದೆ ಎಂದರು. ಇದೇ ಮೊದಲ ಬಾರಿಗೆ ಅಸೋಸಿಯೇಷನ್ ವತಿಯಿಂದ ಅಧ೯ವಾಷಿ೯ಕ ಸಮ್ಮೇಳನ ಆಯೋಜಿಸಲಾಗುತ್ತಿದೆ. ರಾಜ್ಯದ ವಿವಿಧ ಬಾಗಗಳಿಂದ 250 ಕ್ಕೂ ಹೆಚ್ಚು ಕೀಲು ಮತ್ತು ಮೂಳೆ ವಿಭಾಗದ ತಜ್ಞ ವೈದ್ಯರು ಭಾಗವಹಿಸಿದ್ದಾರೆ ಎಂದೂ ಡಾ. ಸಚ್ಚಿದಾನಂದ ತಿಳಿಸಿದರು. ಸಮ್ಮೇಳನದ ಆಯೋಜನಾ ಸಮಿತಿ ಜಂಟಿ ಸಂಚಾಲಕ ಡಾ. ವಿನಯ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕೀಲು ಮತ್ತು ಮೂಳೆ ವಿಭಾಗದ ಮುಖ್ಯಸ್ಥ ಡಾ. ಆನಂದ್ ಕುಮಾರ್ ಬಿ.ಎಸ್‌ , ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲ ಡಾ.. ವಿಶಾಲ್ ಕುಮಾರ್, ತಜ್ಞ ವೈದ್ಯ ಡಾ.ಸೋಮಶೇಖರ್, , ಕೆ.ಎಂ.ರೋಹಿಣಿ ಬಸವರಾಜ್, ಡಾ.ಬಿ.ವಿ. ಅಭಿನಂದನ್, ಡಾ. ಎಸ್.ಎಂ.ಧನಂಜಯ್ ಕುಮಾರ್ ಸ್ಮರಣ ಸಂಚಿಕೆಯ ಸಂಪಾದಕ ಡಾ. ಅವಿನಾಶ್ ಪಾಥ೯ಸಾರಥಿ , ಡಾ.ಮಂಜುನಾಥ್, ಡಾ.ಆತ್ಮಾನಂದ ಹೆಗಡೆ , ಡಾ. ಹರೀಶ್ ಮೂತಿ೯, ಡಾ.ಜಿ.ಭರತ್ ರಾಜ್, ಡಾ. ವಿನಯ್, ಡಾ.ರಾಕೇಶ್ ಕುಮಾರ್, , ಡಾ.ಬಿ.ಚಿದಾನಂದ ವೇದಿಕೆಯಲ್ಲಿದ್ದರು :: ವಿದ್ಯಾರತ್ನ ಪ್ರಶಸ್ತಿಯ ಗೌರವ ::  ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಸಮ್ಮೇಳನದಲ್ಲಿ ಕನಾ೯ಟಕದ ಪ್ರಮುಖ ಮೂಳೆ ಮತ್ತು ಕೀಲು ರೋಗ ತಜ್ಞರನ್ನು ವಿದ್ಯಾರತ್ನ ಪ್ರಶಸ್ತಿ ಮೂಲಕ ಗೌರವಿಸಿ ಸನ್ಮಾನಿಸಲಾಯಿತು. ಡಾ. ಶ್ರೀಧರ ಮೂತಿ೯, ಡಾ. ಬಿ.ಸೀತಾರಾಮ್ ರಾವ್, ಡಾ. ಸಚಿನ್ ಷಾ ಅವರನ್ನು ಪ್ರಶಸ್ತಿಯೊಂದಿಗೆ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.5 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವಿರಾಜಪೇಟೆ ಸೇವಾ ಕೇಂದ್ರದಲ್ಲಿ ಪಾವನ ಪರ್ವ ರಕ್ಷಾಬಂಧನ…

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.