
ಮಡಿಕೇರಿ, ಸೆ.7 NEWS DESK : ಇತ್ತೀಚೆಗೆ ನಿಧನರಾದ ಚೌರೀರ ದಿ.ಕಾವೇರಿ ಪೂವಯ್ಯ ಅವರ ಜ್ಞಾಪಕಾರ್ಥ ಅವರ ಸಹೋದರ ಮೇಜರ್ ಬಿ.ಎ.ನಂಜಪ್ಪ ಹಾಗೂ ಸಹೋದರಿಯರು ಸೆ.12 ರಂದು ನಗರದ ಭಾರತೀಯ ವಿದ್ಯಾ ಭವನ ಸಭಾಂಗಣದಲ್ಲಿ ಮಡಿಕೇರಿಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ವಂದೇ ಮಾತರಂ ಹಾಡಿನ ಸ್ಪರ್ಧೆಯನ್ನು ಆಯೋಜಿಸಿದ್ದಾರೆ. ಕಾರ್ಯಕ್ರಮ ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು, ಶಕ್ತಿ ಪತ್ರಿಕೆ ಸಲಹಾ ಸಂಪಾದಕರಾದ ಬಿ.ಜಿ.ಅನಂತ ಶಯನ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕಾವೇರಿ ಪೂವಯ್ಯ ಅವರು ಬಾಂಬೆ, ಪೂನಾ, ಬೆಂಗಳೂರಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದು ಮಡಿಕೇರಿಯ ಜನರಲ್ ತಿಮ್ಮಯ್ಯ ಶಾಲೆ, ಸಂತ ಜೋಸೆಫರ ಶಾಲೆಯಲ್ಲೂ ಕಾರ್ಯ ನಿರ್ವಹಿಸಿದ್ದಾರೆ. ಸಂತಜೋಸೆಫರ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಏಳೆಂಟು ವರ್ಷ ಕೆಲಸ ಮಾಡಿದ್ದು, ಬಹಳಷ್ಟು ವಿದ್ಯಾರ್ಥಿಗಳಿಗೆ ಗಣಿತ ಹಾಗೂ ಸಂಗೀತ ಶಿಕ್ಷಣವನ್ನು ನೀಡಿದ್ದಾರೆ ಎಂದು ಕಾರ್ಯಕ್ರಮ ಸಂಚಾಲಕಿ ಶೋಭಾ ಸುಬ್ಬಯ್ಯ ತಿಳಿಸಿದ್ದಾರೆ.








