Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*
  • *ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*
  • *ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*
  • *ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*
  • *ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*
  • *ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*
  • *ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*
  • *ಸೆ.12 ರಂದು ವಂದೇ ಮಾತರಂ ಸ್ಪರ್ಧೆ*
  • *ಮಲೇಷ್ಯಾ ಏಷ್ಯಾ ಕಪ್ ಟೇಕ್ವಾಂಡೋದಲ್ಲಿ ಕೊಡಗಿನ ಇಬ್ಬರು ಕ್ರೀಡಾಪಟುಗಳಿಗೆ ಪದಕ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 8, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ NEWS DESK ಸೆ.8 : ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರುವ ಮೂಲಭೂತ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಸುಂಟಿಕೊಪ್ಪ ವೇವ್ ಸಂಘಟನೆಯ ಸದಸ್ಯರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸತೀಶ್ ಅವರನ್ನು ಕಚೇರಿಯಲ್ಲಿ ಸೋಮವಾರ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು. ಸಂಸ್ಥೆಯ ಸಂಚಾಲಕ ಕೆ.ಎ. ಲತೀಫ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಸುಂಟಿಕೊಪ್ಪ ಪಟ್ಟಣದ ನಡುವೆ ರಾಷ್ಟ್ರೀಯ ಹೆದ್ದಾರಿ 275 ಹಾದುಹೋಗಿದ್ದು, ವಾರಾಂತ್ಯದ ರಜಾ ದಿನಗಳಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. 7ನೇ ಹೊಸಕೋಟೆಯಿಂದ ಜಿಲ್ಲಾ ಕೇಂದ್ರದವರೆಗೆ ರಸ್ತೆ ತಿರುವುಗಳಿಂದ ಕೂಡಿದ್ದು, ಈ ಹೆದ್ದಾರಿಯಲ್ಲಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿವೆ. ತುರ್ತು ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲು ವೈದ್ಯರು ಲಭ್ಯವಿಲ್ಲದ ಕಾರಣ ಅನೇಕ ಜೀವಗಳು ಮಾರ್ಗಮಧ್ಯೆ ಕಳೆದುಕೊಳ್ಳುವಂತಾಗಿದೆ ಎಂದು ಸಂಘಟನೆ ಆರೋಪಿಸಿದೆ. ಮಧ್ಯರಾತ್ರಿ ವೇಳೆ ಗ್ರಾಮಸ್ಥರಿಗೆ ಸಣ್ಣ ಪ್ರಮಾಣದಲ್ಲಿಯೂ ಆರೋಗ್ಯ ಸಮಸ್ಯೆ ಉಂಟಾದರೆ ದೂರದ ಮಡಿಕೇರಿ ಅಥವಾ ಕುಶಾಲನಗರದ ಆಸ್ಪತ್ರೆಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಆದ್ದರಿಂದ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಗಲು-ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಶಾಶ್ವತ ಆಡಳಿತ ವೈದ್ಯಾಧಿಕಾರಿಗಳನ್ನು ನೇಮಕ ಮಾಡಬೇಕೆಂದು ಆಗ್ರಹಿಸಲಾಯಿತು. ಅಲ್ಲದೆ, ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಕಾಡು ಗಿಡಗಂಟಿಗಳು ಬೆಳೆದು ನಿಂತಿದ್ದು, ಅವುಗಳನ್ನು ಸ್ವಚ್ಛಗೊಳಿಸಬೇಕು. ಆವರಣದಲ್ಲಿರುವ ಶಿಥಿಲಾವಸ್ಥೆಯಲ್ಲಿರುವ ಹಾಗೂ ಕುಸಿದು ಬಿದ್ದಿರುವ ವಸತಿಗೃಹಗಳ ಅವಶೇಷಗಳು ವಿಷಪೂರಿತ ಜಂತುಗಳ ಅವಾಸಸ್ಥಾನವಾಗಿದ್ದು, ಸುತ್ತಮುತ್ತಲಿನ ನಿವಾಸಿಗಳ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಅವುಗಳನ್ನು ನೆಲಸಮಗೊಳಿಸಬೇಕೆಂದು ಮನವಿ ಮಾಡಲಾಯಿತು. ಮನವಿಗೆ ಕೂಡಲೇ ಸ್ಪಂದಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸತೀಶ್ ಅವರು, ಮೂರು ದಿನಗಳಲ್ಲಿ ವೈದ್ಯರನ್ನು ನೇಮಕಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ, 10 ದಿನಗಳ ಒಳಗೆ ಆಸ್ಪತ್ರೆ ಆವರಣದಲ್ಲಿ ಬೆಳೆದು ನಿಂತಿರುವ ಕಾಡು ಗಿಡಗಂಟಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವುದಾಗಿ ತಿಳಿಸಿದರು. ಜನರ ಆರೋಗ್ಯವನ್ನು ಕಾಪಾಡುವ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಲೆದೋರಿರುವ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ವೇವ್ ಸಂಸ್ಥೆ ನಿರಂತರವಾಗಿ ಹೋರಾಟ ನಡೆಸಲಿದೆ ಎಂದು ಕೆ.ಎ. ಲತೀಫ್ ಹೇಳಿದರು. ಈ ಸಂದರ್ಭ ವಕೀಲ ಫರಾಝ್ ಉಸ್ಮಾನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*

ಸೆಪ್ಟೆಂಬರ್ 8, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 7, 2026

*ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*

ಸೆಪ್ಟೆಂಬರ್ 7, 2026

*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಸೆ.8 : ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರುವ ಮೂಲಭೂತ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಸುಂಟಿಕೊಪ್ಪ…

*ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 7, 2026

*ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*

ಸೆಪ್ಟೆಂಬರ್ 7, 2026

*ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*

ಸೆಪ್ಟೆಂಬರ್ 7, 2026

*ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 7, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*

ಸೆಪ್ಟೆಂಬರ್ 7, 2026

*ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*

ಸೆಪ್ಟೆಂಬರ್ 7, 2026

*ಸೆ.12 ರಂದು ವಂದೇ ಮಾತರಂ ಸ್ಪರ್ಧೆ*

ಸೆಪ್ಟೆಂಬರ್ 7, 2026

*ಮಲೇಷ್ಯಾ ಏಷ್ಯಾ ಕಪ್ ಟೇಕ್ವಾಂಡೋದಲ್ಲಿ ಕೊಡಗಿನ ಇಬ್ಬರು ಕ್ರೀಡಾಪಟುಗಳಿಗೆ ಪದಕ*

ಸೆಪ್ಟೆಂಬರ್ 7, 2026

*ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.