
ಸೋಮವಾರಪೇಟೆ NEWS DESK ಸೆ.9: ಕೊಡಗಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿರುವ ದೇವಸ್ಥಾನಗಳ ಅಭಿವೃದ್ಧಿ ಹಾಗೂ ಜೀರ್ಣೋದ್ಧಾರಕ್ಕೆ ಶಾಸಕ ಡಾ. ಮಂತರ್ ಗೌಡ ವಿಶೇಷ ಕಾಳಜಿ ವಹಿಸಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಶ್ರೀ ವೀರಭದ್ರೇಶ್ವರ ಸ್ವಾಮಿ, ಕನ್ನಂಬಾಡಿ ಅಮ್ಮ ಹಾಗೂ ಮಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನಗಳ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು 50 ಲಕ್ಷ ಅನುದಾನ ಒದಗಿಸುವಂತೆ ಶಾಸಕ ಡಾ. ಮಂತರ್ ಗೌಡ ಅವರು ಕರ್ನಾಟಕ ರಾಜ್ಯ ಸರ್ಕಾರದ ಮುಜರಾಯಿ ಇಲಾಖೆ ಸಚಿವ ಕೆ.ಎಸ್. ಬಸವಂತಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ದೇವಸ್ಥಾನಗಳ ಮೂಲಸೌಕರ್ಯ ಅಭಿವೃದ್ಧಿ, ಜೀರ್ಣೋದ್ಧಾರ ಹಾಗೂ ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪತ್ರದ ಮೂಲಕವೂ ಮನವಿ ಮಾಡಲಾಗಿದೆ. ಶಾಸಕರ ಈ ಪ್ರಯತ್ನದಿಂದ ದೇವಸ್ಥಾನಗಳ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಅಬ್ಬೂರುಕಟ್ಟೆ ವಲಯ ಕಾಂಗ್ರೆಸ್ ಅಧ್ಯಕ್ಷ ಲೋಕೇಶ್ ಹೊಸಳ್ಳಿ, ಮುಖಂಡರಾದ ಅರುಣ್ ಕೊತ್ನಳ್ಳಿ, ನೇಗಳ್ಳೆ-ಕರ್ಕಳ್ಳಿ ಬೂತ್ ಅಧ್ಯಕ್ಷರಾದ ಮೇಘ ಹಾಗೂ ಪರಮೇಶ್ ಉಪಸ್ಥಿತರಿದ್ದರು.









