Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೈಸೂರು, NEWS DESK ಸೆ.09 : ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪ ಅವರ ‘ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿಗಳನ್ನು ಬುಧವಾರ ಬಿಡುಗಡೆಗೊಳಿಸಲಾಯಿತು. ತನ್ಮೂಲಕ ಅಭಿಮನ್ಯುವಿಗೆ ಅಕ್ಷರ ತೇರಿನ ಬೀಳ್ಕೊಡಿಗೆ ನೀಡಲಾಯಿತು.
ಮೈಸೂರು ಕಲ್ಚರಲ್‌ ಅಸೋಸಿಯೇಷನ್‌, ಕರ್ನಾಟಕ ಅರಣ್ಯ ಇಲಾಖೆ ವನ್ಯಜೀವಿ ವಿಭಾಗ ವತಿಯಿಂದ ಮೈಸೂರಿನ ನಜರ್‌ ಬಾದ್‌ ನಲ್ಲಿರುವ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್‌ ಪ್ರಭುಗೌಡ, ನಗರ ಕೇಂದ್ರ ಗ್ರಂಥಾಲಯ ಉಪ ನಿರ್ದೇಶಕ ಬಿ. ಮಂಜುನಾಥ್‌ ಪುಸ್ತಕಗಳನ್ನು ಬಿಡುಗಡೆಗೊಳಿಸಿದರು.
ಖ್ಯಾತ ವನ್ಯಜೀವಿ ಛಾಯಾಗ್ರಾಹಕ ಕೃಪಾಕರ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಪ್ರಾಣಿಗಳ ನಡವಳಿಕೆ ಬಗ್ಗೆ ಬರೆಯುವುದೇ ಒಂದು ಭಾವನಾತ್ಮಕ ಹಾಗೂ ಬಹು ದೀರ್ಘವಾದ ಪ್ರತಿಕ್ರಿಯೆಯಾಗಿದೆ. ಏಕೆಂದರೆ ನನ್ನ ವಿದೇಶಿ ಸ್ನೇಹಿತರೊಬ್ಬರು ಒಂದು ಪಕ್ಷಿಯ ಬಗ್ಗೆ 50 ವರ್ಷ ಅಧ್ಯಯನ ಮಾಡಿ ಅವುಗಳ ವರ್ತನೆಯ ಬಗ್ಗೆ ದಾಖಲಿಸಿದರು. ಆದರೂ ಅದು ಪೂರ್ಣಗೊಳ್ಳಲಿಲ್ಲ. ಇಂತಹ ಗಂಭೀರವಾದ ವಿಚಾರಗಳನ್ನು ಇಟ್ಟುಕೊಂಡು ರಮೇಶ್‌ ಉತ್ತಪ್ಪ ಅವರು ಕೃತಿ ರಚಿಸಿದ್ದಾರೆ. ಅದರಲ್ಲಿಯೂ ಆನೆಗಳ ವರ್ತನೆ, ಮನುಷ್ಯರು ಅವುಗಳೊಟ್ಟಿಗೆ ಹೇಗೆ ನಡೆದುಕೊಳ್ಳಬೇಕು ಎಂಬ ಅಂಶಗಳನ್ನು ತಿಳಿಸಿದ್ದಾರೆ ಎಂದರು.
ರಮೇಶ್‌ ಉತ್ತಪ್ಪ ಅವರ ಎರಡೂ ಕೃತಿಗಳ ರಚನೆಯೇ ಒಂದು ಭಾವನಾತ್ಮಕ ಪ್ರತಿಕ್ರಿಯೆ ಆಗಿದೆ. ಅದರ ಮೂಲಕ ಜನರಿಗೆ ಪ್ರಾಣಿಗಳ ಮೇಲಿನ ಪ್ರೀತಿ ಹೆಚ್ಚಾಗುವುದಾದರೆ ಸಂತೋಷ ಎಂದು ಅಭಿನಂದಿಸಿರು.
ಅಪರ ಜಿಲ್ಲಾಧಿ ಕಾರಿ ಆರ್‌.ಐಶ್ವರ್ಯ ಅವರು ಅಭಿಮನ್ಯುವಿನ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ಮಾತನಾಡಿ, “ಪ್ರಾಣಿಗಳಿಗೆ ಸಾಹಿತ್ಯದ ಮೂಲಕ ಅಭಿನಂದಿಸುವ ಪ್ರಪಂಚದಲ್ಲಿಯೇ ವಿಶಿಷ್ಟ ಕೃತಿ ಇದಾಗಿದೆ. ಪ್ರಾಣಿಗಳೊಂದಿಗೆ ಸಂಯಮದಿಂದ ವರ್ತಿಸಬೇಕು. ಮೌನ ಸಂವಹನ ಮಾಡಬೇಕು. ದೂರದಿಂದಲೇ ನೋಡಿ ಪ್ರಾಣಿಗಳ ಸೌಖ್ಯ ಬಯಸಬೇಕು ಎಂದು ಕೃತಿಯ ಮೂಲಕ ತಿಳಿಸಿಕೊಡಲಾಗಿದೆ,” ಎಂದು ತಿಳಿಸಿದರು.
“ಲೇಖಕರು ಕಥೆ ಹೇಳುವುದು ಸಹಜ. ಆದರೆ, ಅಭಿಮನ್ಯು ಆನೆಯನ್ನು ಮುಖ್ಯವಾಗಿ ಇಟ್ಟುಕೊಂಡು ಆತನ ಮೂಲಕವೇ ಆತನ ವಿಶಿಷ್ಟ ಕಾರ್ಯಗಳಮನ್ನು ಹೇಳಿಸುವ ಸಾಹಿತ್ಯದ ಕಾರ್ಯ ವಿಶೇಷವಾಗಿದೆ. ಪ್ರಾಣಿಗಳು ಬಹಳ ಸೂಕ್ಷ್ಮ ಜೀವಿಗಳು. ಹಾಗಾಗಿ ಅವುಗಳೊಂದಿಗೆ ಮೌನದಿಂದಲೇ ಮಾತನಾಡಬೇಕು. ದೂರದಲ್ಲೇ ನಿಂತು ಅವಗಳ ಸೌಖ್ಯ ಬಯಸಬೇಕು ಎಂಬ ಅಂಶವನ್ನು ರಮೇಶ್‌ ಉತ್ತಪ್ಪ ಅವರು ಕೃತಿಯ ಮೂಲಕ ತಿಳಿಸಿದ್ದಾರೆ,” ಎಂದರು.
ವನ್ಯಜೀವಿ ವಿಭಾಗದ ಡಿಸಿಎಫ್‌ ಡಾ.ಐ.ಬಿ.ಪ್ರಭುಗೌಡ ಮಾತನಾಡಿ, ಅಭಿಮನ್ಯು ವಿನ ಬಗ್ಗೆ ಪುಸ್ತಕ ಬರೆದಿದ್ದೇವೆ ಎಂದಾಗ ಅದರ ಹುಟ್ಟು ಮತ್ತು ಬೆಳವಣಿಗೆಗಳ ಬಗ್ಗೆ ಇರಬಹುದು ಎಂದುಕೊಂಡೇ. ಆದರೆ, ಓದಿದಾಗ ಇದೊಂದು ಭಾವನಾತ್ಮಕ ಕವಿತೆಗಳ ಸಮಾಗಮ ಎಂದು ತಿಳಿಯಿತು. ಅಭಿಮನ್ಯು ಕಾರ್ಯಚರಣೆಗಳಿದರೆ ವೀರಾವೇಶದಿಂದ ಹೋರಾಡಿ ರೈತರ ಜಮೀನುಗಳಿಗೆ ನುಗ್ಗಿ ಹಾವಳಿ ಎಬ್ಬಿಸುವ ಆನೆಗಳನ್ನು ತಹಬದಿಗೆ ತರುತ್ತಾನೆ. ಅದೇ ರೀತಿ ದಸರಾ ಮಹೋತ್ಸವಕ್ಕೆ ಕರೆತಂದರೆ ತನ್ನಷ್ಟು ಸಂಯಮದವ ಯಾರೂ ಇಲ್ಲ ಎಂಬಂತೆ ಲಕ್ಷಾಂತರ ಜನರ ನಡುವೆ ಅಂಬಾರಿ ಹಿತ್ತು ಜಂಬೂಸವಾರಿ ಹೊತ್ತು ಸೈ ಎನಿಸಿಕೊಳ್ಳುತ್ತಾನೆ. ಈ ರೀತಿ ಎರಡು ವೈರದ್ಯಗಳನ್ನು ಹೊಂದಿ ಅವುಗಳನ್ನು ಕರಾರುವಕ್ಕಾಗಿ ನಿಭಾಯಿಸುವ ಗುಣವನ್ನು ಹೊಂದಿರುವ ಈ ರೀತಿಯ ಪ್ರಾಣಿಯನ್ನು ನೋಡಿಯೇ ಇಲ್ಲ ಎಂದು ಸ್ಮರಿಸಿದರು.
ವಸಂತ ಮತ್ತು ಅಭಿಮನ್ಯುವಿನ ನಡುವೆ ಅವಿನಾಭಾವ ಸಂಬಂಧವಿದೆ. ಅದಕ್ಕಾಗಿಯೇ ಅವರಿಬ್ಬರ ಕೆಲಸ ಇಷ್ಟು ಯಶಸ್ವಿಯಾಗಿದೆ. ವಸಂತನಿಗೆ ಮತ್ತೊಂದು ಆನೆ ಕೊಡುತ್ತೇವೆ. ಆತ ಅದನ್ನೂ ಪಳಗಿಸಿ ತನ್ನ ಎಂದಿನ ಕೆಲಸವನ್ನು ಮುಂದುವರಿಸಲು ಅವಕಾಶ ಮಾಡಿಕೊಡುತ್ತೇವೆ ಎಂದರು.
ಬಳಿಕ ಮೈಸೂರು ಕಲ್ಚರಲ್‌ ಅಸೋಸಿಯೇಷನ್‌ ಅಧ್ಯಕ್ಷ ಎ.ಪಿ. ನಾಗೇಶ್‌, ಕಾರ್ಯದರ್ಶಿ ಮಹದೇವ್‌ ಅಭಿಮನ್ಯು ಮಾವುತ ವಸಂತ ಅವರಿಗೆ ಸನ್ಮಾನಿಸಿದರು. ಇದೇ ವೇಳೆ ಮಾವುತ ವಸಂತ ಮಾತನಾಡಿ, ಕರ್ನಾಟಕದ ಎಲ್ಲಾ ಕಡೆ ಕೆಲಸ ಮಾಡಿರುವ ಅಭಿಮನ್ಯು ಆನೆಯ ಬಗ್ಗೆ ರಮೇಶ್‌ ಉತ್ತಪ್ಪ ಅವರು ಪುಸ್ತಕ ಬರೆದಿದ್ದಾರೆ. ಆ ಪುಸ್ತಕಗಳನ್ನು ಎಲ್ಲರೂ ಓದಬೇಕು. ಆನೆಗಳನ್ನು ಪಳಗಿಸುವುದು ಅಷ್ಟು ಸುಲಭವಲ್ಲ. ಎಲ್ಲರೂ ದಸರಾಗೆ ಬರಬೇಕು. ಆನೆಗಳನ್ನು ಹಾಗೂ ತಾಯಿ ಚಾಮುಂಡೇಶ್ವರಿಯನ್ನು ನೋಡಬೇಕು ಎಂದರು.
ಸಾರ್ವಜನಿಕ ಗ್ರಂಥಾಲಯ ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕ ಮಂಜುನಾಥ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್‌, ಕೃತಿಗಳ ಕರ್ತೃ ಐತಿಚಂಡ ರಮೇಶ್‌ ಉತ್ತಪ್ಪ ಹಾಗೂ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.