
ಗೋಣಿಕೊಪ್ಪ NEWS DESK ಸೆ.10: ಅರುವತೋಕ್ಲುವಿನ ಸರ್ವದೈವತ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪೊನ್ನಂಪೇಟೆ ತಾಲೂಕು ಮಟ್ಟದ ಥ್ರೋಬಾಲ್ ಕ್ರೀಡಾಕೂಟದಲ್ಲಿ ಸರ್ವದೈವತ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿವೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಕ ಪ್ರಮೋದ್ ಗೌಡ ತರಬೇತಿ ನೀಡಿರುತ್ತಾರೆ.









