Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • **ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ**
  • *ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*
  • *ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*
  • *ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • **ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ**
  • *ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ*  
  • *ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
  • *ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*

ಸೆಪ್ಟೆಂಬರ್ 10, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ NEWS DESK ಸೆ.10 :  ಶಿಕ್ಷಕರ ದಿನಾಚರಣೆ ಅಂಗವಾಗಿ ಗೋಣಿಕೊಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ವತಿಯಿಂದ ಶಾಲೆಯ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಶಿಕ್ಷಕರಿಗೆ ವಿಶೇಷ ಗೌರವ ಸಲ್ಲಿಸುವ ಉದ್ದೇಶದಿಂದ ಶಾಲೆಯ ದ್ವಾರದಿಂದಲೇ ಭವ್ಯ ಸ್ವಾಗತ ಮೆರವಣಿಗೆ ಆಯೋಜಿಸಲಾಗಿತ್ತು. ಎಸ್‌ಡಿಎಂಸಿ ಸದಸ್ಯರು ಆರತಿ ತಟ್ಟೆ ಹಿಡಿದು ಮೆರವಣಿಗೆಯ ಮುಂಭಾಗದಲ್ಲಿ ಸಾಗಿದರು. ಶಾಲೆಯ ಲೀಡರ್ಸ್ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿ, ಶಿಕ್ಷಕರಿಗೆ ಪುಷ್ಪವೃಷ್ಟಿ ಸುರಿಸುತ್ತಾ ವೇದಿಕೆಯತ್ತ ಕರೆತಂದರು. ವೇದಿಕೆಯ ಮುಂಭಾಗದಲ್ಲಿ ಶಿಕ್ಷಕರಿಗೆ ಆರತಿ ಬೆಳಗಿ, ತಿಲಕ ಹಚ್ಚುವ ಮೂಲಕ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ಅಧ್ಯಕ್ಷತೆಯಲ್ಲಿ ಡಮರುಗ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಶಿಕ್ಷಕ ಹೆಚ್.ಕೆ. ಕುಮಾರ್ ಸೇರಿದಂತೆ ಶಿಕ್ಷಕರಾದ ಜೋಸ್ಲಿಯ, ಇಂದಿರಾ, ದಮಯಂತಿ, ಅನಿತಾಕುಮಾರಿ, ಯಸ್ವಿನಿ, ಅರ್ಷಿಯ, ಕ್ಲೆಮೆಂಟಿನ್, ಸಹನಾ, ಶಾರದಾ, ನಾಗರಾಜು, ಸ್ನೇಹ ಕಾವೇರಮ್ಮ, ಮಂಜುಳಾ, ಸಿದ್ದರಾಜು, ಪೂಜಾ ಹಾಗೂ ಪಾರ್ವತಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಮಾತನಾಡಿದ ಜಗದೀಶ್ ಜೋಡುಬೀಟಿ, “ಶಿಕ್ಷಕರು ಮನುಷ್ಯರನ್ನು ರೂಪಿಸುವ ಮೌನ ಶಿಲ್ಪಿಗಳು. ಅವರು ಕಟ್ಟುವುದು ಕಟ್ಟಡವಲ್ಲ, ಭವಿಷ್ಯ. ಅವರು ಬೆಳೆಸುವುದು ಬೆಳೆಯಲ್ಲ, ಪೀಳಿಗೆ. ಅವರು ಬಿತ್ತುವುದು ಕೇವಲ ಅಕ್ಷರವಲ್ಲ, ಆಲೋಚನೆ” ಎಂದು ಶಿಕ್ಷಕರ ಮಹತ್ವವನ್ನು ವಿವರಿಸಿದರು. ಸನ್ಮಾನ ಸ್ವೀಕರಿಸಿದ ಶಿಕ್ಷಕರು ಭಾವುಕರಾಗಿ ಮಾತನಾಡಿದರು. ಬಳಿಕ ಶಿಕ್ಷಕರಿಗಾಗಿ ನೀರು ತುಂಬಿಸುವುದು, ಸೇಬು ಕಚ್ಚುವುದು, ಮಡಕೆ ಒಡೆಯುವುದು, ಪಾಸಿಂಗ್ ದಿ ಬಾಲ್, ಮ್ಯೂಸಿಕಲ್ ಚೇರ್ ಸೇರಿದಂತೆ ವಿವಿಧ ಮನರಂಜನಾ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಶಿಕ್ಷಕರು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು. ನಂತರ ಶಿಕ್ಷಕರಿಗಾಗಿ ವಿಶೇಷ ಭೋಜನಕೂಟ ಏರ್ಪಡಿಸಲಾಗಿತ್ತು. ಎಸ್‌ಡಿಎಂಸಿ ಉಪಾಧ್ಯಕ್ಷೆ ದಿವ್ಯ ಪ್ರಾರ್ಥಿಸಿದರು. ಸದಸ್ಯೆ ಗೌರಿ ಸ್ವಾಗತಿಸಿದರು. ಸೌಮ್ಯ ವಂದನಾರ್ಪಣೆ ನೆರವೇರಿಸಿದರು. ಚಂದ್ರಕಲಾ ಕೆ.ಜಿ. ಕಾರ್ಯಕ್ರಮ ನಿರೂಪಿಸಿದರು. ಎಸ್‌ಡಿಎಂಸಿ ಸದಸ್ಯರಾದ ಅನಿತಾ, ಕೌಶರ್, ಮಂಜುಳ, ಮೀನ, ರಾಕೇಶ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

**ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ**

ಸೆಪ್ಟೆಂಬರ್ 10, 2026

*ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*

ಸೆಪ್ಟೆಂಬರ್ 10, 2026

*ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 10, 2026

*ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.10 : ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ…

*ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*

ಸೆಪ್ಟೆಂಬರ್ 10, 2026

*ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 10, 2026

**ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ**

ಸೆಪ್ಟೆಂಬರ್ 10, 2026

*ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ*  

ಸೆಪ್ಟೆಂಬರ್ 10, 2026

*ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*

ಸೆಪ್ಟೆಂಬರ್ 10, 2026

*ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*

ಸೆಪ್ಟೆಂಬರ್ 10, 2026

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.