Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನ.26 ರಂದು ಸಿಎನ್‌ಸಿಯಿಂದ ಭಾರತೀಯ ಸಂವಿಧಾನ ದಿನ ಮತ್ತು ಕೊಡವ ನ್ಯಾಷನಲ್ ಡೇ ಆಚರಣೆ*
  • **ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ**
  • *ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*
  • *ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*
  • *ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • **ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ**
  • *ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ*  
  • *ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
  • *ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*

ಸೆಪ್ಟೆಂಬರ್ 10, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.10 : ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವುದರ ಜೊತೆಗೆ ತುಳು ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸುವ ಕುರಿತು ಸರ್ಕಾರ ತಕ್ಷಣ ನಿರ್ಧಾರ ಕೈಗೊಳ್ಳಬೇಕು ಎಂದು ವಿಶ್ವ ತುಳುವ ಮಹಾಸಭಾ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ಚುನಾವಣಾ ಪೂರ್ವದಲ್ಲಿ ರಾಜ್ಯ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ತುಳು ಭಾಷೆಗೆ ಎರಡನೇ ಭಾಷೆಯ ಸ್ಥಾನಮಾನ ನೀಡುವುದಾಗಿ ಹಾಗೂ ತುಳು ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ನೀಡಿರುವ ಮಹತ್ವದ ಆಶ್ವಾಸನೆಯನ್ನು ಈಡೇರಿಸಬೇಕು ಎಂದು ಕೊಡಗು ಜಿಲ್ಲಾ ತುಳು ಮಹಾಸಭಾ ಘಟಕದ ಅಧ್ಯಕ್ಷ ಬಿ.ಬಿ.ಐತಪ್ಪ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೀವ ಲೋಚನ ಹಾಗೂ ಜಿಲ್ಲಾ ಸಂಘಟನಾ ಸಂಚಾಲಕ ಪಿ.ಎಂ.ರವಿ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ತುಳು ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಸ್ವಂತ ಲಿಪಿ ಮತ್ತು ಕ್ಯಾಲೆಂಡರ್ ಹೊಂದಿರುವ ಶ್ರೀಮಂತ ಭಾಷೆಯಾಗಿದೆ. ಜಗತ್ತಿನಾದ್ಯಂತ ಎರಡು ಕೋಟಿಗೂ ಅಧಿಕ ತುಳು ಭಾಷಿಕರಿದ್ದು, ತುಳು ಕೇವಲ ಒಂದು ಭಾಷೆಯಲ್ಲ, ತುಳುವರ ಆಚಾರ-ವಿಚಾರ, ದೈವಾರಾಧನೆ ಮತ್ತು ಸಂಸ್ಕೃತಿಯ ಜೀವಾಳವಾಗಿದೆ. ತುಳುವಿಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಸಾಧ್ಯಾಸಾಧ್ಯತೆಗಳ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಈ ಹಿಂದೆ ಡಾ.ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಸಮಿತಿಯು ಸಮಗ್ರ ಅಧ್ಯಯನ ನಡೆಸಿ, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಕಾನೂನಾತ್ಮಕವಾಗಿ ಹಾಗೂ ಸಾಂವಿಧಾನಿಕವಾಗಿ ಯಾವುದೇ ಅಡೆತಡೆಗಳಿಲ್ಲ ಎಂಬ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆದ್ದರಿಂದ ಮಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವುದು ಹಾಗೂ ತುಳು ಅಭಿವೃದ್ಧಿ ಪ್ರಾಧಿಕಾರ ರಚಿಸುವ ಕುರಿತು ಸರ್ಕಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನ.26 ರಂದು ಸಿಎನ್‌ಸಿಯಿಂದ ಭಾರತೀಯ ಸಂವಿಧಾನ ದಿನ ಮತ್ತು ಕೊಡವ ನ್ಯಾಷನಲ್ ಡೇ ಆಚರಣೆ*

ಸೆಪ್ಟೆಂಬರ್ 10, 2026

**ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ**

ಸೆಪ್ಟೆಂಬರ್ 10, 2026

*ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*

ಸೆಪ್ಟೆಂಬರ್ 10, 2026

**ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ**

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.10 : ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ…

*ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*

ಸೆಪ್ಟೆಂಬರ್ 10, 2026

*ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*

ಸೆಪ್ಟೆಂಬರ್ 10, 2026

*ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 10, 2026

**ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ**

ಸೆಪ್ಟೆಂಬರ್ 10, 2026

*ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ*  

ಸೆಪ್ಟೆಂಬರ್ 10, 2026

*ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*

ಸೆಪ್ಟೆಂಬರ್ 10, 2026

*ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*

ಸೆಪ್ಟೆಂಬರ್ 10, 2026

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.