
ಸುoಟಿಕೊಪ್ಪ NEWS DESK ಸೆ.10 : ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕ ಮತ್ತು ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿüವೃದ್ಧಿ ಸಂಘ ಕೊಡಗು ಜಿಲ್ಲೆ ಸಂಯುಕ್ತಾಶ್ರಯದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಶೈಕ್ಷಣಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ.12 ರಂದು ಕುಶಾಲನಗರದ ಕೇರಳ ಸಮಾಜಂ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಶಕ್ತಿ ದಿನಪತ್ರಿಕೆ ಸಂಪಾದಕ ಜಿ.ಚಿದ್ವಿಲಾಸ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಬಿ.ಸಿ.ದಿನೇಶ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ., ಕೊಡಗು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಟಿ.ಜಿ.ಸತೀಶ್, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ವೇವ್ ಸಂಘಟನೆಯ ಸಂಚಾಲಕ ಕೆ.ಎ.ಲತೀಫ್, ಕೇರಳ ಸಮಾಜದ ಅಧ್ಯಕ್ಷ ಪಿ.ರವೀಂದ್ರನ್, ಕೊಡಗು ಪತ್ರಕರ್ತರ ಸಂಘದ ಖಜಾಂಚಿ ಹಾಗೂ ಕಾರ್ಯಕ್ರಮದ ಸಂಚಾಲಕ ಟಿ.ಕೆ.ಸಂತೋಷ್, ದತ್ತಿ ಪ್ರಶಸ್ತಿ ದಾನಿಗಳಾದ ಕೊರವಂಡ ವಸಂತಿ ಪೊನ್ನಪ್ಪ, ಕೊರವಂಡ ಪೊನ್ನಪ್ಪ ಪಾಲ್ಗೊಳ್ಳಲಿದ್ದಾರೆ. ಕುಶಾಲನಗರ ತಾಲೂಕು ಮಟ್ಟದಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿರುವ ಶಿರಂಗಾಲ ಸರಕಾರಿ ಪದವಿ ಪೂರ್ವ ಕಾಲೇಜಿನ ಬಿ.ಪಿ.ಪ್ರಣಯ್ ಅವರಿಗೆ ದತ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಎಂ.ಬಿ.ವಿನ್ಸೆoಟ್ ತಿಳಿಸಿದ್ದಾರೆ.









