ಭಾಗಮಂಡಲ, NEWS DESK ಸೆ.10: ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳು ನಾಪೋಕ್ಲುವಿನಲ್ಲಿ ನಡೆದ ಜಿಲ್ಲಾ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರೌಢಶಾಲಾ ವಿಭಾಗದ ಬಾಲಕರ ತಂಡ ದ್ವಿತೀಯ ಸ್ಥಾನ, ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದೆ. ಪ್ರಾಥಮಿಕ ವಿಭಾಗದಲ್ಲಿ ಬಾಲಕರ ತಂಡ ದ್ವಿತೀಯ ಸ್ಥಾನ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿದೆ.
ಈ ಮೂಲಕ ಶಾಲೆಯ ವಿದ್ಯಾರ್ಥಿಗಳು ಮಂಡ್ಯದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಲೋಕೇಶ್, ನಿಲಯ ಪಾಲಕರಾದ ದೀಪಕ್ ಕೆ.ಕೆ. ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಪವನ್ ಸಾಗರ್ ಸಂತಸ ವ್ಯಕ್ತಪಡಿಸಿ, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.








