
ಮಡಿಕೇರಿ, ಸೆ.10 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಥೆಗಾರ್ತಿ ಕೊಡಗಿನ ಗೌರಮ್ಮ ಅವರ ಹೆಸರಿನಲ್ಲಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ‘ಗೌರಮ್ಮ ದತ್ತಿ ಕಥಾ ಸ್ಪರ್ಧೆ’ಯನ್ನು ಸೆ.12ರಂದು ಮಡಿಕೇರಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಆರಂಭವಾಗಲಿದೆ. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸುವುದು ಹಾಗೂ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕೊಡಗು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.









