Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗಣ್ಯರಿಂದ ಗೌರವ ನಮನ*
  • *ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ :  ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಸೋಮಖಶೇಖರ್*
  • *ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*
  • ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*
  • *ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*
  • *ಕೊಡಗಿನಲ್ಲಿ ಧ್ವನಿವರ್ಧಕಗಳಿಗೆ ‘ಪ್ರೆಶರ್ ಮಿಡ್’ ಬಳಕೆ ನಿಷೇಧ*
  • *ಟೀಮ್ ಅರ್ಜುನ ನೂತನ ಅಧ್ಯಕ್ಷರಾಗಿ ಕೆ.ಎ. ಮಹಮ್ಮದ್ ಆಲಿ ಆಯ್ಕೆ*
  • *ಬಸ್ ಡಿಕ್ಕಿ: 6 ವರ್ಷದ ಬಾಲಕಿ ಮೃತ*
  • *ಕಂಬಿಬಾಣೆಯಲ್ಲಿ ಸೆ.13ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ*
  • *ಮಡಿಕೇರಿ ಯುವ ದಸರಾ ನೃತ್ಯ ಸ್ಪರ್ಧೆಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ :  ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಸೋಮಖಶೇಖರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ :  ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಸೋಮಖಶೇಖರ್*

ಸೆಪ್ಟೆಂಬರ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಸೆ.11 NEWS DESK : ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದು, ಕಳೆದ 30 ವರ್ಷಗಳಲ್ಲಿ ಗಮನಿಸಿದಾಗ ಈ ಬಾರಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ತುಂಬಾ ಕಡಿಮೆಯಾಗಿದೆ. ಆದ್ದರಿಂದ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಎಲ್ಲೆಡೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕರೆ ನೀಡಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆ, ಕೊಡಗು ವೃತ್ತ ಮಡಿಕೇರಿ ವತಿಯಿಂದ ನಗರದ ಅರಣ್ಯ ಭವನದ ಆವರಣದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಹಿನ್ನೆಲೆ ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಸಂರಕ್ಷಿಸುವ ಸಂದರ್ಭದಲ್ಲಿ ಪ್ರಾಣ ತ್ಯಾಗ ಮಾಡಿದ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚ ಇರಿಸಿ, ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ಮಲೆನಾಡು ಭಾಗದಲ್ಲಿ ಸೆಪ್ಟೆಂಬರ್ ತಿಂಗಳಲ್ಲೂ ಸಹ ಮಳೆಯಾಗುತ್ತಿತ್ತು. ಆದರೆ ಈಗ ಮಳೆ ಇಲ್ಲದಂತಾಗಿ, ಬೇಸಿಗೆ ವಾತಾವರಣ ಕಾಣುತ್ತಿದೆ. ಆದ್ದರಿಂದ ಪರಿಸರ ಮತ್ತು ಅರಣ್ಯ ಸಂರಕ್ಷಣೆಗೆ ಹಿಂದಿಗಿಂತ ಇಂದು ಹೆಚ್ಚಿನ ಒತ್ತು ನೀಡುವುದು ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಅವರು ಪ್ರತಿಪಾದಿಸಿದರು. ನದಿ, ತೊರೆ, ಹಳ್ಳ-ಕೊಳ್ಳ, ಬಾವಿ ಹಾಗೂ ಬೋರ್‍ವೆಲ್‍ಗಳು ಸಹ ನೀರು ಕ್ಷೀಣಿಸುತ್ತಿದೆ. ಮಳೆ- ಬೆಳೆ ಇಲ್ಲದೆ ಇಂದಿನ ಪರಿಸ್ಥಿತಿ ನೋಡಿದರೆ ಆತಂಕವಾಗುತ್ತಿದೆ ಎಂದರು. ಭೂಮಿಯ ಮೇಲಿನ ಪರಿಸರ, ಹವಾಮಾನ ಬದಲಾವಣೆಯನ್ನು ಗಮನಿಸಿದಾಗ ಮುಂದಿನ ದಿನಗಳಲ್ಲಿ ಊಹಿಸಿಕೊಳ್ಳುವುದು, ಕಷ್ಟ ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ‘ಪರಿಸರ ಮತ್ತು ಹವಾಮಾನ ವೈಪರೀತ್ಯಕ್ಕೆ ಕಾರಣಗಳೇನು ಎಂಬ ಬಗ್ಗೆ ಪ್ರತಿಯೊಬ್ಬರೂ ಅವಲೋಕನ ಮಾಡಬೇಕು. ಒಂದು ಕಡೆ ಜಗತ್ತು ಒಂದು ಹಳ್ಳಿಯಾಗಿ, ತಾಂತ್ರಿಕವಾಗಿ ವೇಗವಾಗಿ ಓಡುತ್ತಿದೆ. ಆದರೆ ಹವಾಮಾನ ವೈಪರೀತ್ಯದಿಂದ ಮಳೆ-ಬೆಳೆ ಕಡಿಮೆಯಾದರೆ ಬದುಕು ಹೇಗೆ ಎಂಬ ಬಗ್ಗೆ ಚಿಂತಿಸಬೇಕಿದೆ. ಆದ್ದರಿಂದ ಕಾಡನ್ನು ಉಳಿಸುವುದರ ಜೊತೆಗೆ ಎಲ್ಲೆಡೆ ಗಿಡ ಮರಗಳನ್ನು ಬೆಳೆಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸಲಹೆ ಮಾಡಿದರು.’ ‘ನಾವು ಅರಣ್ಯದೊಳಗೆ ಸಪಾರಿಗೆ ಹೋಗಿ ವನ್ಯಪ್ರಾಣಿ ವೀಕ್ಷಿಸುಲು ಬಯಸುತ್ತೇವೆ, ಆದರೆ ಅದೇ ವನ್ಯ ಪ್ರಾಣಿಗಳು ಊರಿಗೆ ಬಂದಾಗ ಪಟಾಕಿ ಸಿಡಿಸಿ ಓಡಿಸುತ್ತೇವೆ. ಈ ನಾಗರಿಕ ಮನೋಭಾವ ಬದಲಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.’ ಅರಣ್ಯದಲ್ಲಿ ಪ್ರಾಣಿಗಳಿಗೂ ಸಹ ಬದುಕುವ ಹಕ್ಕು ಇದೆ. ಆದ್ದರಿಂದ ಅರಣ್ಯವನ್ನು ಅತಿಕ್ರಮಣ ಮಾಡದೆ ಪರಿಸರಕ್ಕೆ ಪೂರಕವಾಗಿ ಅರಣ್ಯ ಹಾಗೂ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಕಾಡನ್ನು ಸಂರಕ್ಷಿಸುವಲ್ಲಿ ಇಲಾಖೆಯಲ್ಲಿ ದುಡಿಯುತ್ತಿರುವ ವಾಚರ್, ಗಾರ್ಡ್‍ಗಳು ಸೇರಿದಂತೆ ಎಲ್ಲಾ ಹಂತದ ಸಿಬ್ಬಂದಿಗಳ ಕಾರ್ಯ ಅತ್ಯಂತ ಶ್ಲಾಘನೀಯ ಎಂದರು. ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಣಿ ಅವರು ಮಾತನಾಡಿ ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಅರಣ್ಯ ಸಂರಕ್ಷಣೆಗೆ ಎಲ್ಲರೂ ಸಹ ಕೈಜೋಡಿಸಬೇಕು ಎಂದು ಕೋರಿದರು. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಆನೆಗಳು ಹಾಗೂ ಹುಲಿಗಳು, ಜೊತೆಗೆ ಜಿಂಕೆ, ಕಡವೆ, ಹೀಗೆ ವನ್ಯ ಪ್ರಾಣಿಗಳು ವಾಸಿಸುತ್ತಿದ್ದು, ಕಾಡನ್ನು ಸಂರಕ್ಷಿಸಿದರೆ ವನ್ಯ ಪ್ರಾಣಿಗಳು ಸಹ ಬದುಕಲು ಸಾಧ್ಯ. ಆ ನಿಟ್ಟಿನಲ್ಲಿ ಪರಿಸರ, ಜನಜೀವನ ಎಲ್ಲವೂ ಸಹ ಸಮತೋಲನ ಕಾಣಬಹುದು ಎಂದರು. ಅರಣ್ಯ ಸಂರಕ್ಷಣೆಯಲ್ಲಿ ಸ್ಥಳೀಯರ ಜೊತೆ ಬೆರೆತು ಕರ್ತವ್ಯ ನಿರ್ವಹಿಸಲು ಶ್ರಮಿಸಲಾಗುತ್ತಿದೆ. ಆದರೂ ಸಹ ಹಲವು ಎಡರು ತೊಡರುಗಳನ್ನು ಎದುರಿಸಿ ಕಾಡು ಸಂರಕ್ಷಣೆಯತ್ತ ಹೆಚ್ಚಿನ ಗಮನಹರಿಸಲಾಗಿದೆ ಎಂದು ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ವಿವರಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಅಭಿಷೇಕ್ ಅವರು 1966 ರಿಂದ ಇಲ್ಲಿಯವರೆಗೆ ಅರಣ್ಯ ಸಂರಕ್ಷಣೆ ಕರ್ತವ್ಯ ಸಂದರ್ಭದಲ್ಲಿ ಹುತಾತ್ಮರಾದ ಅರಣ್ಯ ರಕ್ಷಕ 65 ಮಂದಿ ಹೆಸರನ್ನು ಓದಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗಣ್ಯರಿಂದ ಗೌರವ ನಮನ*

ಸೆಪ್ಟೆಂಬರ್ 11, 2026

*ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*

ಸೆಪ್ಟೆಂಬರ್ 11, 2026

ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*

ಸೆಪ್ಟೆಂಬರ್ 11, 2026

*ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ :  ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಸೋಮಖಶೇಖರ್*

ಸೆಪ್ಟೆಂಬರ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.11 NEWS DESK : ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದು, ಕಳೆದ 30 ವರ್ಷಗಳಲ್ಲಿ ಗಮನಿಸಿದಾಗ ಈ…

*ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*

ಸೆಪ್ಟೆಂಬರ್ 11, 2026

ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*

ಸೆಪ್ಟೆಂಬರ್ 11, 2026

*ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*

ಸೆಪ್ಟೆಂಬರ್ 11, 2026

*ಕೊಡಗಿನಲ್ಲಿ ಧ್ವನಿವರ್ಧಕಗಳಿಗೆ ‘ಪ್ರೆಶರ್ ಮಿಡ್’ ಬಳಕೆ ನಿಷೇಧ*

ಸೆಪ್ಟೆಂಬರ್ 11, 2026

*ಟೀಮ್ ಅರ್ಜುನ ನೂತನ ಅಧ್ಯಕ್ಷರಾಗಿ ಕೆ.ಎ. ಮಹಮ್ಮದ್ ಆಲಿ ಆಯ್ಕೆ*

ಸೆಪ್ಟೆಂಬರ್ 11, 2026

*ಬಸ್ ಡಿಕ್ಕಿ: 6 ವರ್ಷದ ಬಾಲಕಿ ಮೃತ*

ಸೆಪ್ಟೆಂಬರ್ 11, 2026

*ಕಂಬಿಬಾಣೆಯಲ್ಲಿ ಸೆ.13ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ*

ಸೆಪ್ಟೆಂಬರ್ 11, 2026

*ಮಡಿಕೇರಿ ಯುವ ದಸರಾ ನೃತ್ಯ ಸ್ಪರ್ಧೆಗೆ ಅರ್ಜಿ ಆಹ್ವಾನ*

ಸೆಪ್ಟೆಂಬರ್ 11, 2026

*ಮಡಿಕೇರಿ ದಸರಾ ಸಮಿತಿ ಕಚೇರಿ ಉದ್ಘಾಟನೆ – ಲೋಗೋ ಅನಾವರಣ*

ಸೆಪ್ಟೆಂಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.