Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್

ಸೆಪ್ಟೆಂಬರ್ 11, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ, NEWS DESK ಸೆ.11: ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗು ಜಿಲ್ಲೆಯ ಕೊಡುಗೆ ಅಪಾರವಾಗಿದ್ದು, ಜಿಲ್ಲೆಯ ಕವಿಗಳು ಮತ್ತು ಸಾಹಿತಿಗಳ ಸಾಹಿತ್ಯದಲ್ಲಿ ಪಶ್ಚಿಮಘಟ್ಟದ ಪ್ರಕೃತಿ, ಪರಿಸರ, ಜೀವನದಿ ಕಾವೇರಿ, ಜನಪದ, ಸಂಸ್ಕೃತಿ ಹಾಗೂ ಪರಂಪರೆಗೆ ಪ್ರಮುಖ ಸ್ಥಾನ ದೊರೆತಿದೆ ಎಂದು ಚಿಂತಕ ಹಾಗೂ ನಿವೃತ್ತ ಕಲಾ ಶಿಕ್ಷಕ ಉ.ರಾ. ನಾಗೇಶ್ ಹೇಳಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ.ಸಾ.ಪ.), ಕುಶಾಲನಗರ ತಾಲ್ಲೂಕು ಕ.ಸಾ.ಪ. ಘಟಕ ಹಾಗೂ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ತ್ರಿವೇಣಿ ತ್ರಿಭಾಷಾ ಸಂಘದ ಸಂಯುಕ್ತಾಶ್ರಯದಲ್ಲಿ ‘ಕನ್ನಡ ಸಾಹಿತ್ಯದಲ್ಲಿ ಕೊಡಗು’ ಎಂಬ ವಿಷಯ ಕುರಿತು ಆಯೋಜಿಸಿದ್ದ ಕೆ.ಟಿ. ಸುಬ್ಬರಾವ್ ಅವರ ವಾರ್ಷಿಕ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೊಡಗಿನಲ್ಲಿ ಕನ್ನಡ ಸಾಹಿತ್ಯದ ಬೆಳವಣಿಗೆ ಕುರಿತು ಮಾತನಾಡಿದ ಅವರು, ಜಿಲ್ಲೆ ಕಂಡ ಹೆಸರಾಂತ ಕಥೆಗಾರ್ತಿ ಕೊಡಗಿನ ಗೌರಮ್ಮ, ಹಿರಿಯ ಕವಿ ಹರದಾಸ ಅಪ್ಪಚ್ಚು ಕವಿ, ಕವಿ ಪಂಜೆ ಮಂಗೇಶರಾಯರು, ಸಾಹಿತಿ ಭಾರತೀಸುತ ಸೇರಿದಂತೆ ಇಂದಿನ ಹೊಸ ತಲೆಮಾರಿನ ಉದಯೋನ್ಮುಖ ಸಾಹಿತಿಗಳ ಸಾಹಿತ್ಯ ರಚನೆ ಹಾಗೂ ಬೆಳವಣಿಗೆಗೆ ಕೊಡಗಿನ ಪ್ರಾಕೃತಿಕ ಸೌಂದರ್ಯ ಸ್ಪೂರ್ತಿ ಮತ್ತು ಚೈತನ್ಯ ನೀಡಿದೆ ಎಂದರು.

ಕೊಡಗಿನ ನೆಲ, ಜಲ, ಪ್ರಾಕೃತಿಕ ಸನ್ನಿವೇಶ ಹಾಗೂ ಕೊಡವ ಕಲೆ, ಸಂಸ್ಕೃತಿ ಮತ್ತು ಪರಂಪರೆಗಳು ಸಾಹಿತ್ಯದಲ್ಲಿ ಪ್ರತಿಬಿಂಬಿತವಾಗಿವೆ. ವಿಶೇಷವಾಗಿ ಹುತ್ತರಿ ಹಾಡುಗಳಲ್ಲಿ ಕೊಡಗಿನ ಪ್ರಾಕೃತಿಕ ಸನ್ನಿವೇಶಗಳನ್ನು ಚೆನ್ನಾಗಿ ಬಿಂಬಿಸುವ ಮೂಲಕ ಕೊಡಗಿನ ಶೌರ್ಯವನ್ನು ಚಿತ್ರಿಸಲಾಗಿದೆ ಎಂದು ಉ.ರಾ. ನಾಗೇಶ್ ಹೇಳಿದರು.

ಪಶ್ಚಿಮಘಟ್ಟದ ಜೀವನದಿ ಕಾವೇರಿ ಹಾಗೂ ಕೊಡಗಿನ ಪ್ರಕೃತಿ ಸೌಂದರ್ಯವೇ ಜಿಲ್ಲೆಯ ಸಾಹಿತಿಗಳು ಮತ್ತು ಕವಿಗಳಿಗೆ ಸಾಹಿತ್ಯ ರಚನೆಗೆ ಪ್ರೇರಣೆ ಹಾಗೂ ಸ್ಪೂರ್ತಿ ನೀಡಿದೆ ಎಂದರು.

ಕೊಡಗಿನಲ್ಲಿ ಸಾಹಿತ್ಯದ ಬೆಳವಣಿಗೆಗೆ ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ಕನ್ನಡಪರ ಮನಸ್ಸುಗಳು ಜತೆಗೂಡಿ ಶ್ರಮಿಸುತ್ತಿವೆ. ಜಿಲ್ಲೆಯ ಸಾಹಿತಿಗಳಲ್ಲದೆ, ಹೊರಗಿನಿಂದ ಜಿಲ್ಲೆಗೆ ಬಂದ ಅನೇಕ ಕವಿಗಳು ಹಾಗೂ ಸಾಹಿತಿಗಳೂ ಉತ್ತಮ ಸಾಹಿತ್ಯ ರಚನೆಯ ಮೂಲಕ ಕನ್ನಡ ಭಾಷೆಯ ಬೆಳವಣಿಗೆಗೆ ಕಾರಣೀಭೂತರಾಗಿದ್ದಾರೆ ಎಂದು ಅವರು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಜಿ. ಪ್ರೇಮಕುಮಾರ್, ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ಪ್ರತಿಯೊಬ್ಬರೂ ತಮ್ಮನ್ನು ತೊಡಗಿಸಿಕೊಂಡಾಗ ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಪರಂಪರೆಯನ್ನು ಬೆಳೆಸಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾದ ಎಸ್.ಜಿ. ನಾಗರತ್ನ ಮಾತನಾಡಿ, ಇಂತಹ ಸಾಹಿತ್ಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಕಲೆ, ಸಂಸ್ಕೃತಿ ಹಾಗೂ ಸಾಹಿತ್ಯ ಕ್ಷೇತ್ರದ ಬಗ್ಗೆ ಅಭಿರುಚಿ ಬೆಳೆಸುವುದರೊಂದಿಗೆ ಕನ್ನಡ ನಾಡು-ನುಡಿಯ ಬೆಳವಣಿಗೆಗೆ ತಮ್ಮನ್ನು ತೊಡಗಿಸಿಕೊಳ್ಳಲು ಪ್ರೇರಣೆ ನೀಡುತ್ತವೆ ಎಂದರು.

ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಮಾತನಾಡಿ, ಕನ್ನಡ ಸಾಹಿತ್ಯವು ಮಕ್ಕಳಲ್ಲಿ ಭಾಷಾ ಜ್ಞಾನ, ಬರವಣಿಗೆ ಕೌಶಲ್ಯ, ನೈತಿಕತೆ ಹಾಗೂ ಕಲ್ಪನಾ ಶಕ್ತಿಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೆ, ಉತ್ತಮ ನಡವಳಿಕೆಯನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದರು.

ಮಹಿಳಾ ಬರಹಗಾರ್ತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಮಾತನಾಡಿ, ವಿದ್ಯಾರ್ಥಿಗಳು ಕೊಡಗಿನ ಸಾಹಿತಿಗಳ ಕುರಿತು ಹೆಚ್ಚಿನ ಜ್ಞಾನವನ್ನು ಬೆಳೆಸಿಕೊಂಡು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ನಾಗೇಶ್ ಮಾತನಾಡಿ, ಇಂತಹ ಉಪನ್ಯಾಸ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿಯೊಂದಿಗೆ ಭಾಷಾ ಪ್ರೇಮವನ್ನು ಬೆಳೆಸಲು ನೆರವಾಗುತ್ತವೆ ಎಂದರು.

ಪ್ರೌಢಶಾಲಾ ವಿಭಾಗದ ಎಸ್.ಡಿ.ಎಂ.ಸಿ. ಅಧ್ಯಕ್ಷ ಎಸ್.ಜೆ. ರವಿಕಿರಣ್, ತಾಲ್ಲೂಕು ಕ.ಸಾ.ಪ. ಸಮಿತಿ ಸದಸ್ಯ ಎಂ.ಎನ್. ಕಾಳಪ್ಪ, ಕಸಾಪ ಸದಸ್ಯರಾದ ಸೂದನ ರತ್ನಾವತಿ, ಲೀಲಾಕುಮಾರಿ ತೊಡಿಕಾನ, ಶಿಕ್ಷಕಿಯರಾದ ಕೆ.ಆರ್. ದೇವಕಿ, ಬಿ.ಬಿ. ಹೇಮಲತಾ, ಎನ್.ಜಿ. ನಂದಿನಿ ಹಾಗೂ ಎಂ.ಪಿ. ರಶ್ಮಿ ಇದ್ದರು. ವಿದ್ಯಾರ್ಥಿನಿ ದುರ್ಗಾ ಪರಮೇಶ್ವರಿ ಹಾಗೂ ತಂಡದ ಸದಸ್ಯರು ಗೀತೆ ಹಾಡಿದರು. ಪ್ರೌಢಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಚಿತ್ರ 1: ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಿದ್ದ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮದಲ್ಲಿ ಚಿಂತಕ ಉ.ರಾ. ನಾಗೇಶ್ ಉಪನ್ಯಾಸ ನೀಡಿದರು. ಉಪ ಪ್ರಾಂಶುಪಾಲರಾದ ಎಸ್.ಜಿ. ನಾಗರತ್ನ, ಟಿ.ಜಿ. ಪ್ರೇಮಕುಮಾರ್, ಕೆ.ಎಸ್. ನಾಗೇಶ್, ಫ್ಯಾನ್ಸಿ ಮುತ್ತಣ್ಣ, ರವಿಕಿರಣ್, ಎಂ.ಎನ್. ಚಂದ್ರಮೋಹನ್ ಹಾಗೂ ಕೆ.ವಿ. ಉಮೇಶ್ ಇದ್ದಾರೆ.

ಚಿತ್ರ 2: ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಿದ್ದ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮವನ್ನು ಉಪ ಪ್ರಾಂಶುಪಾಲರಾದ ಎಸ್.ಜಿ. ನಾಗರತ್ನ ಉದ್ಘಾಟಿಸಿದರು. ಚಿಂತಕ ಉ.ರಾ. ನಾಗೇಶ್, ಟಿ.ಜಿ. ಪ್ರೇಮಕುಮಾರ್, ಕೆ.ಎಸ್. ನಾಗೇಶ್, ಫ್ಯಾನ್ಸಿ ಮುತ್ತಣ್ಣ, ರವಿಕಿರಣ್, ಎಂ.ಎನ್. ಚಂದ್ರಮೋಹನ್ ಹಾಗೂ ಕೆ.ವಿ. ಉಮೇಶ್ ಇದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ; ಪಥಸಂಚಲನದಲ್ಲಿ ಪಾಲ್ಗೊಂಡ ನೂರಾರು ಗಣವೇಷಧಾರಿ ಹಿಂದೂ ಬಾಂಧವರು

ನವೆಂಬರ್ 1, 2026

ಪಾಲಿಬೆಟ್ಟದಲ್ಲಿ ಬೀದಿ ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಅಭಿಯಾನ: 56 ನಾಯಿಗಳಿಗೆ ಲಸಿಕೆ

ನವೆಂಬರ್ 1, 2026

ಕೊಡಗು ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ

ನವೆಂಬರ್ 1, 2026

ಪಾಲಿಬೆಟ್ಟದಲ್ಲಿ ಬೀದಿ ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಅಭಿಯಾನ: 56 ನಾಯಿಗಳಿಗೆ ಲಸಿಕೆ

ನವೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ನ.1: ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ಪಶುಪಾಲನಾ ಇಲಾಖೆಯ ಪಾಲಿಬೆಟ್ಟ ಪಶುಪಾಲನಾ ಕೇಂದ್ರದ ವತಿಯಿಂದ ಬೀದಿ…

ಕೊಡಗು ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ

ನವೆಂಬರ್ 1, 2026

ಮಡಿಕೇರಿ ನಗರಸಭೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ವಿಶ್ವಮಾನವ ಉದ್ಯಾನವನದಲ್ಲಿ ಕೊಡಗು ಹಿತರಕ್ಷಣಾ ವೇದಿಕೆಯಿಂದ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಸುಂಟಿಕೊಪ್ಪದಲ್ಲಿ ಆರ್‌ಎಸ್‌ಎಸ್‌ನಿಂದ ವಿಜಯದಶಮಿ ಪಥಸಂಚಲನ

ನವೆಂಬರ್ 1, 2026

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾವೇರಿ ತೀರ್ಥೋದ್ಭವದ ಪ್ರಸಾದ ವಿತರಣೆ

ಅಕ್ಟೋಬರ್ 31, 2026

ಭರತನಾಟ್ಯ ಪರೀಕ್ಷೆ : ವಿರಾಜಪೇಟೆ ‘ನಾಟ್ಯಾಂಜಲಿ ನೃತ್ಯ ಸಂಸ್ಥೆ’ಗೆ ಶೇ.100 ಫಲಿತಾಂಶ

ಅಕ್ಟೋಬರ್ 31, 2026

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

ಅಕ್ಟೋಬರ್ 31, 2026

ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‍ಕೋಟ್ ಸಮಾರಂಭ

ಅಕ್ಟೋಬರ್ 31, 2026

ಪೊನ್ನಂಪೇಟೆಯಲ್ಲಿ ನ್ಯಾಯಾಲಯದ ಉದ್ಘಾಟನೆ : ನ್ಯಾಯಾಂಗ ವ್ಯವಸ್ಥೆ ಬಲಯುತವಾಗಿದ್ದಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.