ಬಾಳೆಲೆ, NEWS DESK ಸೆ.15: ಬಾಳೆಲೆ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನಡೆದ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಸರ್ವದೈವತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.
ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ದೈಹಿಕ ಶಿಕ್ಷಕ ಪ್ರಮೋದ್ ಗೌಡ ಅವರು ತರಬೇತಿ ನೀಡಿದ್ದರು.







