
ಮಡಿಕೇರಿ NEWS DESK ಸೆ.16 : ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ ಹೊದ್ದೂರು ಪಾಲೆಮಾಡುವಿನಲ್ಲಿ ನಡೆಯಿತು. ಟ್ರಸ್ಟ್ ನ ಅಧ್ಯಕ್ಷ ನವೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಟ್ರಸ್ಟ್ ನ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸುವುದು ಹಾಗೂ ಸಮಾಜದ ವಿವಿಧ ವರ್ಗಗಳ ಅಭಿವೃದ್ಧಿಗೆ ಕೈಜೋಡಿಸುವ ಕುರಿತು ಚರ್ಚಿಸಲಾಯಿತು. ಸದಸ್ಯರಿಗಾಗಿ ವಿವಿಧ ಮನೋರಂಜನಾ ಕ್ರೀಡೆಗಳು ಮತ್ತು ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭ 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಿ, ಶೈಕ್ಷಣಿಕ ಸಾಧನೆಗೆ ಪ್ರೋತ್ಸಾಹ ನೀಡಲಾಯಿತು. ಅಲ್ಲದೆ, ಟ್ರಸ್ಟ್ ನಲ್ಲಿ ನೂತನವಾಗಿ ಸದಸ್ಯತ್ವ ಪಡೆದವರಿಗೆ ಸದಸ್ಯತ್ವ ಪ್ರಮಾಣಪತ್ರ ವಿತರಿಸಲಾಯಿತು. ಟ್ರಸ್ಟ್ ನ ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗಾಗಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ಟ್ರಸ್ಟಿಗಳು, ಸದಸ್ಯರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.









