Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*
  • *ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*
  • *ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*
  • *ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*
  • *ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ*
  • *ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*
  • *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
  • *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
  • *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*

ಸೆಪ್ಟೆಂಬರ್ 16, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ.16: ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳನ್ನು ಸ್ಮರಿಸುವ ಉದ್ದೇಶದಿಂದ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ವನ್ನು ಸೆ.17ರಿಂದ ಅ.17ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ತಿಂಗಳ ಅವಧಿಯಲ್ಲಿ ವಿವಿಧ ಸಾಮಾಜಿಕ ಹಾಗೂ ಜನಪರ ಸೇವಾ ಚಟುವಟಿಕೆಗಳನ್ನು ಆಯೋಜಿಸಲಾಗುವುದು. ಪಕ್ಷದ ಕಾರ್ಯಕರ್ತರು, ವಿವಿಧ ಮೋರ್ಚಾಗಳು ಹಾಗೂ ಘಟಕಗಳ ಸಹಯೋಗದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.

ನರೇಂದ್ರ ಮೋದಿ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿ ಹಾಗೂ ದೇಶದ ಪ್ರಧಾನಮಂತ್ರಿಯಾಗಿ 25 ವರ್ಷಗಳ ಕಾಲ ಭ್ರಷ್ಟಾಚಾರ ಮುಕ್ತವಾದ ಮಾದರಿ ಆಡಳಿತವನ್ನು ನೀಡಿದ್ದಾರೆ. ವಿಶ್ವ ಮಟ್ಟದಲ್ಲಿ ಭಾರತದ ಗೌರವವನ್ನು ಎತ್ತಿ ಹಿಡಿದ ಮೋದಿ ಅವರ ಜನಪರ ಕಾಳಜಿಯ ಕಾರ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಅಭಿಯಾನವನ್ನು ನಡೆಸಲಾಗುತ್ತಿದೆ. ಆ ಮೂಲಕ ‘2047ರ ವಿಕಸಿತ ಭಾರತ’ ಸಂಕಲ್ಪಕ್ಕೆ ಶಕ್ತಿ ತುಂಬಲಾಗುವುದು.

ಅಭಿಯಾನದ ಮೊದಲ ದಿನವಾದ ಸೆ.17ರಂದು ‘ಆಶೀರ್ವಾದ ದೀಪ’ ಕಾರ್ಯಕ್ರಮದಡಿ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಮಾತ್ರವಲ್ಲದೆ ಜಿಲ್ಲೆಯ ಪ್ರತಿಯೊಬ್ಬ ನಿವಾಸಿಯ ಮನೆಯಲ್ಲೂ ಸಂಜೆ ವೇಳೆ ನರೇಂದ್ರ ಮೋದಿ ಅವರ ಆರೋಗ್ಯ ಮತ್ತು ಆಯುಷ್ಯ ವೃದ್ಧಿಗಾಗಿ ದೀಪ ಬೆಳಗಲು ಕರೆ ನೀಡಲಾಗುವುದು ಎಂದು ತಿಳಿಸಿದರು.

ಅಭಿಯಾನದ ಅಂಗವಾಗಿ ಪ್ರತಿದಿನ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಲಿವೆ. ಅಗತ್ಯವಿರುವವರಿಗೆ ನೆರವಾಗುವ ನಿಟ್ಟಿನಲ್ಲಿ ರಕ್ತದಾನ ಶಿಬಿರ ನಡೆಸಲಾಗುವುದು. ಅನಾಥಾಶ್ರಮ ಹಾಗೂ ವೃದ್ಧಾಶ್ರಮಗಳಿಗೆ ಭೇಟಿ ನೀಡಿ ಅಗತ್ಯ ಸಹಾಯ ಒದಗಿಸಲಾಗುವುದು. ಪರಿಸರ ಸಂರಕ್ಷಣೆಗಾಗಿ ವಿವಿಧೆಡೆ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಸಾರ್ವಜನಿಕ ಸ್ಥಳಗಳು, ರಸ್ತೆ, ಶಾಲೆಗಳು ಹಾಗೂ ಪ್ರಮುಖ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಗುವುದು.

ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಜಾಗೃತಿ ಮೂಡಿಸಲಾಗುವುದು. ‘ಒಂದು ಗ್ರಾಮ ದತ್ತು’ ಸೇವಾ ಕಾರ್ಯಕ್ರಮದಡಿ ಗ್ರಾಮಗಳ ಅಗತ್ಯಗಳನ್ನು ಗುರುತಿಸಿ ವಿವಿಧ ಸೇವಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು. ಯೋಗ ಮತ್ತು ಧ್ಯಾನ, ಆರೋಗ್ಯಕರ ಜೀವನಶೈಲಿ ಹಾಗೂ ಮಾನಸಿಕ ಕ್ಷೇಮದ ಕುರಿತು ಜಾಗೃತಿ ಮೂಡಿಸಲಾಗುವುದು. ಪ್ಲಾಸ್ಟಿಕ್ ಮುಕ್ತ ಜಾಗೃತಿಯಡಿ ಏಕಬಳಕೆ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಕುರಿತು ಜನರಿಗೆ ಮನವರಿಕೆ ಮಾಡಿಕೊಡಲಾಗುವುದು. ಮಹಿಳೆಯರ ಆರೋಗ್ಯ, ವೈಯಕ್ತಿಕ ಸ್ವಚ್ಛತೆ ಹಾಗೂ ಆರೋಗ್ಯಕರ ಜೀವನಶೈಲಿ ಕುರಿತು ಜಾಗೃತಿ ಮೂಡಿಸಲಾಗುವುದು.

ಅಗತ್ಯವಿರುವ ವಿದ್ಯಾರ್ಥಿಗಳಿಗೆ ಪುಸ್ತಕ, ಕಲಿಕಾ ಸಾಮಗ್ರಿ ಹಾಗೂ ಶೈಕ್ಷಣಿಕ ನೆರವು ಒದಗಿಸಲಾಗುವುದು. ಯುವಜನರಿಗೆ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳ ಕುರಿತು ಮಾರ್ಗದರ್ಶನ ನೀಡಲಾಗುವುದು. ಹಿರಿಯರಿಗೆ ಡಿಜಿಟಲ್ ಸಾಕ್ಷರತೆ ಕಾರ್ಯಕ್ರಮದಡಿ ಮೊಬೈಲ್, ಡಿಜಿಟಲ್ ಸೇವೆಗಳು ಹಾಗೂ ಆನ್‌ಲೈನ್ ಸೌಲಭ್ಯಗಳ ಸುರಕ್ಷಿತ ಬಳಕೆಯ ಕುರಿತು ತರಬೇತಿ ನೀಡಲಾಗುವುದು.

‘ಮಾದಕ ವಸ್ತು ಮುಕ್ತ ಭಾರತ’ ಜಾಗೃತಿ ಅಭಿಯಾನದಡಿ ಯುವಜನರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಗುವುದು. ಪೌಷ್ಟಿಕತೆ ಮತ್ತು ರಕ್ತಹೀನತೆ ಜಾಗೃತಿ ಕಾರ್ಯಕ್ರಮದಡಿ ಪೌಷ್ಟಿಕ ಆಹಾರ, ಆರೋಗ್ಯಕರ ಜೀವನಶೈಲಿ ಹಾಗೂ ರಕ್ತಹೀನತೆ ತಡೆ ಕುರಿತು ಅರಿವು ನೀಡಲಾಗುವುದು.

ಸಂಚಾರ ನಿಯಮ ಪಾಲನೆ, ಹೆಲ್ಮೆಟ್ ಹಾಗೂ ಸೀಟ್‌ಬೆಲ್ಟ್ ಬಳಕೆ ಸೇರಿದಂತೆ ಸುರಕ್ಷಿತ ವಾಹನ ಚಾಲನೆ ಹಾಗೂ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲಾಗುವುದು. ನೀರು ಸಂರಕ್ಷಣೆ ಮತ್ತು ಜಲಮೂಲ ಸ್ವಚ್ಛತೆ, ಕೆರೆ, ಬಾವಿ, ಹಳ್ಳ-ಹೊಳೆ ಸೇರಿದಂತೆ ಸ್ಥಳೀಯ ಜಲಮೂಲಗಳ ಸಂರಕ್ಷಣೆ ಮತ್ತು ಸ್ವಚ್ಛತಾ ಕಾರ್ಯಗಳಿಗೆ ಒತ್ತು ನೀಡಲಾಗುವುದು.

ಹೀಗೆ ಸುಮಾರು 25 ಕಾರ್ಯಕ್ರಮಗಳನ್ನು ಜಿಲ್ಲಾ ವ್ಯಾಪಿ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ ರವಿ ಕಾಳಪ್ಪ, ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಕರೆ ನೀಡಿದರು.

ವಂದೇ ಮಾತರಂ ಪ್ರತಿಭಟನೆ

ಸ್ವಾತಂತ್ರ್ಯ ಹೋರಾಟಕ್ಕೆ ಪ್ರೇರಣೆ ನೀಡಿದ ‘ವಂದೇ ಮಾತರಂ’ ಗೀತೆಯನ್ನು ರಾಷ್ಟ್ರಗೀತೆಗೆ ಸಮಾನವಾಗಿ ಹಾಡುವುದನ್ನು ಕಡ್ಡಾಯಗೊಳಿಸಿದ್ದರೂ, ರಾಜ್ಯ ಕಾಂಗ್ರೆಸ್ ಸರ್ಕಾರ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಆದೇಶ ಹೊರಡಿಸಿರುವುದನ್ನು ವಿರೋಧಿಸಿ ಜಿಲ್ಲೆಯ ಐದು ತಾಲ್ಲೂಕು ಕೇಂದ್ರಗಳಲ್ಲಿ ಜಾಥಾ ನಡೆಸಲಾಗುವುದು. ತಹಶೀಲ್ದಾರರಿಗೆ ಮನವಿ ಸಲ್ಲಿಸುವ ಮೂಲಕ ಕಾಂಗ್ರೆಸ್ ಸರ್ಕಾರದ ನಿಲುವನ್ನು ಖಂಡಿಸಲಾಗುವುದು. ಜಾಥಾದ ದಿನವನ್ನು ಮುಂದೆ ನಿಗದಿಪಡಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರಕ್ಕೆ ಒಕ್ಕೂಟ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ. ಇದೇ ಕಾರಣಕ್ಕೆ ರಾಷ್ಟ್ರಪತಿಗಳ ಅಂಕಿತವಾಗಿದ್ದರೂ ‘ವಂದೇ ಮಾತರಂ’ ಗೀತೆಗೆ ಕತ್ತರಿ ಹಾಕಲಾಗಿದೆ ಎಂದು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಹಾಗೂ ಮಹಿಳಾ ಬಿಜೆಪಿ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*

ಸೆಪ್ಟೆಂಬರ್ 16, 2026

*ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 16, 2026

*ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*

ಸೆಪ್ಟೆಂಬರ್ 16, 2026

*ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ಸೆ.15: ದೊಡ್ಡಮಳ್ತೆ ಗ್ರಾಮದ ಹೊನ್ನಮ್ಮನಕೆರೆ ಕ್ಷೇತ್ರದಲ್ಲಿ ಸ್ವರ್ಣಗೌರಿ ಉತ್ಸವದ ಅಂಗವಾಗಿ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮವು…

*ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*

ಸೆಪ್ಟೆಂಬರ್ 16, 2026

*ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*

ಸೆಪ್ಟೆಂಬರ್ 16, 2026

*ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*

ಸೆಪ್ಟೆಂಬರ್ 16, 2026

*ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ*

ಸೆಪ್ಟೆಂಬರ್ 16, 2026

*ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*

ಸೆಪ್ಟೆಂಬರ್ 16, 2026

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.