Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*
  • *ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*
  • *ಮಲ್ಲಳ್ಳಿ ಜಲಪಾತದಲ್ಲಿ SIR-2026 ಕುರಿತು ಜಾಗೃತಿ ಜಾಥಾ*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗಾಡ್ರೆಜ್ ಹಾಗೂ ಟ್ರ್ಯಾಕ್ ಶೂಟ್ ವಿತರಣೆ*
  • *ಸೋಮವಾರಪೇಟೆಯಲ್ಲಿ ತಾಲೂಕು ಮಟ್ಟದ ಸ್ಕೌಟ್ ಮತ್ತು ಗೈಡ್ಸ್ ಮಹಾಸಭೆ*
  • *ರೋಟರಿ ಮಿಸ್ಟಿ ಹಿಲ್ಸ್‌ನಿಂದ ನಾಲ್ವರು ಶಿಕ್ಷಕರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ; ನವತಂತ್ರಜ್ಞಾನಗಳ ಕಾಲಘಟ್ಟದಲ್ಲಿ ಪಾಠ ಹೇಳುವುದೇ ಶಿಕ್ಷಕರಿಗೆ ದೊಡ್ಡ ಸವಾಲು: ಸುಜಾತ ತಳವಾರ್*
  • *ಪರಿಸರ ಸಂರಕ್ಷಣೆ ಸಂದೇಶ ಸಾರಿದ ರೋಟರಿ ವುಡ್ಸ್ ಬೈಕ್ ಜಾಥಾ*
  • *ಜನ-ಜಾನುವಾರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಬಾಲ್ ಬ್ಯಾಡ್ಮಿಂಟನ್‌ : ವಿಭಾಗ ಮಟ್ಟಕ್ಕೆ ಸರ್ವದೈವತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು*
  • *ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಮೌಲ್ಯ, ಧ್ಯಾನ ಹಾಗೂ ರಾಜಯೋಗದ ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಸಂಸ್ಕೃತಿ, ಪರಂಪರೆ ಉಳಿಸುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಸಂಸ್ಕೃತಿ, ಪರಂಪರೆ ಉಳಿಸುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು*

ಸೆಪ್ಟೆಂಬರ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ, NEWS DESK ಸೆ.17: ಭಾರತದ ಹಿಂದೂತ್ವದ ಪರಂಪರೆ, ಸಂಸ್ಕೃತಿ ಹಾಗೂ ಆಚಾರ–ವಿಚಾರಗಳನ್ನು ಪೀಳಿಗೆಯಿಂದ ಪೀಳಿಗೆಗೆ ಕೊಂಡೊಯ್ಯುವುದೇ ನಿಜವಾದ ದೇಶಭಕ್ತಿಯ ಭಾಗವಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿಲನ್ ಗಣಪತಿ ಅಭಿಪ್ರಾಯಪಟ್ಟರು.

ಗೋಣಿಕೊಪ್ಪದ ಉಮಾಮಹೇಶ್ವರಿ ಬಡಾವಣೆಯ ಪ್ರಸನ್ನ ಗಣಪತಿ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ 15ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಮೂರನೇ ದಿನ ನಡೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮಕ್ಕೆ ಡೋಲಕ್ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಗಣೇಶೋತ್ಸವವು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಜನರನ್ನು ಒಗ್ಗೂಡಿಸುವ ಉದ್ದೇಶದಿಂದ ರೂಪುಗೊಂಡ ಪ್ರಮುಖ ಆಚರಣೆಯಾಗಿದೆ. ಇದರ ಹಿಂದಿರುವ ಇತಿಹಾಸ, ಉದ್ದೇಶ ಹಾಗೂ ಮಹತ್ವವನ್ನು ಯುವ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಹಿರಿಯರ ಮೇಲಿದೆ. ಮಕ್ಕಳಲ್ಲಿ ಭಕ್ತಿ, ದಯೆ, ಮಾನವೀಯತೆ ಹಾಗೂ ದೇಶಪ್ರೇಮದ ಭಾವನೆಗಳನ್ನು ಬೆಳೆಸುವ ಕೆಲಸ ಕುಟುಂಬದಿಂದಲೇ ಆರಂಭವಾಗಬೇಕು ಎಂದು ಹೇಳಿದರು.

ಮಹಿಳೆಯರು ಕುಟುಂಬ ಮತ್ತು ಸಮಾಜದ ಪ್ರಮುಖ ಶಕ್ತಿಯಾಗಿದ್ದಾರೆ. ಅವರ ತಾಳ್ಮೆ, ಕೌಟುಂಬಿಕ ನಿರ್ವಹಣೆ, ಜವಾಬ್ದಾರಿತನ ಹಾಗೂ ಸಾಮಾಜಿಕ ಕಾಳಜಿಯು ಸಮಾಜವನ್ನು ಶಾಂತಿಯುತವಾಗಿ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ತಾಯಿ ನಗುಮುಖದಿಂದ ಇದ್ದಾಗ ಮಾತ್ರ ಕುಟುಂಬದಲ್ಲಿ ನೆಮ್ಮದಿ ನೆಲೆಸಲು ಸಾಧ್ಯ ಎಂದರು.

ಗೋಣಿಕೊಪ್ಪ ರೋಟರಿ ಸಂಸ್ಥೆ ಅಧ್ಯಕ್ಷ ಪ್ರಮೋದ್ ಕಾಮತ್ ಮಾತನಾಡಿ, ಹಿರಿಯರು ಮತ್ತು ಯುವಕರನ್ನು ಒಂದೇ ವೇದಿಕೆಗೆ ಕರೆತಂದು ಭೇದಭಾವ ಮರೆಸಿ ಪರಸ್ಪರ ಪ್ರೀತಿ, ಸೌಹಾರ್ದ ಹಾಗೂ ಒಗ್ಗಟ್ಟನ್ನು ಬೆಳೆಸುವ ಕಾರ್ಯಕ್ರಮವೇ ಗಣೇಶೋತ್ಸವವಾಗಿದೆ. ಇದರ ಮಹತ್ವವನ್ನು ಪ್ರತಿಯೊಬ್ಬರೂ ಅರಿತು ಆಚರಿಸಿದಾಗ ಮಾತ್ರ ಉತ್ಸವಕ್ಕೆ ನಿಜವಾದ ಅರ್ಥ ದೊರೆಯುತ್ತದೆ ಎಂದರು.

ಗೋಣಿಕೊಪ್ಪ ಅಪರಾಧ ವಿಭಾಗದ ಠಾಣಾಧಿಕಾರಿ ವೆಂಕಟೇಶ್ ಮಾತನಾಡಿ, ಹಿಂದೂ ಧರ್ಮದಲ್ಲಿ ಮಹಿಳೆಯರಿಗೆ ವಿಶಿಷ್ಟ ಸ್ಥಾನಮಾನವಿದೆ. ಕುಟುಂಬದ ಶಕ್ತಿಯಾಗಿರುವ ಮಹಿಳೆಯರು ಮಕ್ಕಳಿಗೆ ಸಂಸ್ಕೃತಿ, ಪರಂಪರೆ ಹಾಗೂ ಧಾರ್ಮಿಕ ಆಚರಣೆಗಳ ಕುರಿತು ತಿಳಿವಳಿಕೆ ನೀಡಿದಾಗ ಮಾತ್ರ ನಮ್ಮ ಸಂಪ್ರದಾಯಗಳು ಮುಂದಿನ ಪೀಳಿಗೆಗೂ ಜೀವಂತವಾಗಿ ಸಾಗಲು ಸಾಧ್ಯ ಎಂದರು.

ಪತ್ರಕರ್ತ ಹಾಗೂ ಗಾಯಕ ಚೆನ್ನನಾಯಕ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜತೆಗೆ ದೇಶದ ಐತಿಹಾಸಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ವಿಚಾರಗಳ ಅರಿವು ಮೂಡಿಸಬೇಕು. ಭಾರತೀಯ ಸಂಸ್ಕೃತಿ, ಆಚಾರ–ವಿಚಾರ ಮತ್ತು ಪರಂಪರೆಯನ್ನು ಉಳಿಸುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಕುಟುಂಬದ ಜವಾಬ್ದಾರಿಯೊಂದಿಗೆ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಮೂಲಕ ಸಮಾಜವನ್ನು ಮತ್ತಷ್ಟು ಸದೃಢಗೊಳಿಸಬಹುದು ಎಂದರು.

ಕಾರ್ಯಕ್ರಮದಲ್ಲಿ ದಾನಿಗಳಾದ ಗೀತಾ ನಾಗರಾಜ್, ಪ್ರಸನ್ನ ಯುವಕ ಸಂಘದ ಅಧ್ಯಕ್ಷ ಜಗದೀಶ್ ಜೋಡುಬೀಟಿ, ಸ್ವಚ್ಛತಾ ಸಮಿತಿ ಸಂಚಾಲಕ ರಾಘವೇಂದ್ರ ಆರ್., ವೇದಿಕೆ ಸಮಿತಿ ಸಂಚಾಲಕ ಮುಕೇಶ್ ಉಪಸ್ಥಿತರಿದ್ದರು.

ಚೆನ್ನನಾಯಕ ಮತ್ತು ಮುಸ್ತಫಾ ತಂಡದಿಂದ ಗಾಯನ ಕಾರ್ಯಕ್ರಮ ನಡೆಯಿತು. ಸ್ಥಳೀಯ ಮಹಿಳೆಯರು ಹಾಗೂ ಮಕ್ಕಳು ವಿವಿಧ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು. ಎಸ್‌ಐ ವೆಂಕಟೇಶ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಿ.ಎನ್. ಪ್ರಕಾಶ್ ಅವರು 90ರ ದಶಕದ ಜನಪ್ರಿಯ ಹಾಡುಗಳನ್ನು ಹಾಡಿ ಮನರಂಜಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಕೋಶಾಧಿಕಾರಿ ಅನ್ವಿತಾ, ಉಪಾಧ್ಯಕ್ಷರಾದ ಅನಿಲ್, ದಿಲೀಪ್, ಸದಸ್ಯರಾದ ಮುರುಳಿ, ಭರತ್, ಕೌಶಿಕ್, ಆಶಾ, ಚಂದ್ರಕಲಾ, ಲೀನಾ ರಾಘವೇಂದ್ರ, ಪ್ರಜ್ವಲ್, ಪುನೀತ್, ಅಜಿತಾ, ಸೌಜನ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*

ಸೆಪ್ಟೆಂಬರ್ 20, 2026

*ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*

ಸೆಪ್ಟೆಂಬರ್ 20, 2026

*ಮಲ್ಲಳ್ಳಿ ಜಲಪಾತದಲ್ಲಿ SIR-2026 ಕುರಿತು ಜಾಗೃತಿ ಜಾಥಾ*

ಸೆಪ್ಟೆಂಬರ್ 20, 2026

*ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*

ಸೆಪ್ಟೆಂಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.20: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 44ನೇ ವರ್ಷದ…

*ಮಲ್ಲಳ್ಳಿ ಜಲಪಾತದಲ್ಲಿ SIR-2026 ಕುರಿತು ಜಾಗೃತಿ ಜಾಥಾ*

ಸೆಪ್ಟೆಂಬರ್ 20, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗಾಡ್ರೆಜ್ ಹಾಗೂ ಟ್ರ್ಯಾಕ್ ಶೂಟ್ ವಿತರಣೆ*

ಸೆಪ್ಟೆಂಬರ್ 20, 2026

*ಸೋಮವಾರಪೇಟೆಯಲ್ಲಿ ತಾಲೂಕು ಮಟ್ಟದ ಸ್ಕೌಟ್ ಮತ್ತು ಗೈಡ್ಸ್ ಮಹಾಸಭೆ*

ಸೆಪ್ಟೆಂಬರ್ 20, 2026

*ರೋಟರಿ ಮಿಸ್ಟಿ ಹಿಲ್ಸ್‌ನಿಂದ ನಾಲ್ವರು ಶಿಕ್ಷಕರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ; ನವತಂತ್ರಜ್ಞಾನಗಳ ಕಾಲಘಟ್ಟದಲ್ಲಿ ಪಾಠ ಹೇಳುವುದೇ ಶಿಕ್ಷಕರಿಗೆ ದೊಡ್ಡ ಸವಾಲು: ಸುಜಾತ ತಳವಾರ್*

ಸೆಪ್ಟೆಂಬರ್ 20, 2026

*ಪರಿಸರ ಸಂರಕ್ಷಣೆ ಸಂದೇಶ ಸಾರಿದ ರೋಟರಿ ವುಡ್ಸ್ ಬೈಕ್ ಜಾಥಾ*

ಸೆಪ್ಟೆಂಬರ್ 20, 2026

*ಜನ-ಜಾನುವಾರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 19, 2026

*ಬಾಲ್ ಬ್ಯಾಡ್ಮಿಂಟನ್‌ : ವಿಭಾಗ ಮಟ್ಟಕ್ಕೆ ಸರ್ವದೈವತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು*

ಸೆಪ್ಟೆಂಬರ್ 19, 2026

*ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಮೌಲ್ಯ, ಧ್ಯಾನ ಹಾಗೂ ರಾಜಯೋಗದ ಅರಿವು*

ಸೆಪ್ಟೆಂಬರ್ 19, 2026

*ಕೊಡಗು ಸಹಕಾರ ಬ್ಯಾಂಕ್‍ಗೆ ರೂ.22.39 ಕೋಟಿ ನಿವ್ವಳ ಲಾಭ : ಶೇ.20 ಡಿವಿಡೆಂಟ್ ಘೋಷಣೆ*

ಸೆಪ್ಟೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.