Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*
  • *ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*
  • *ಮಲ್ಲಳ್ಳಿ ಜಲಪಾತದಲ್ಲಿ SIR-2026 ಕುರಿತು ಜಾಗೃತಿ ಜಾಥಾ*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗಾಡ್ರೆಜ್ ಹಾಗೂ ಟ್ರ್ಯಾಕ್ ಶೂಟ್ ವಿತರಣೆ*
  • *ಸೋಮವಾರಪೇಟೆಯಲ್ಲಿ ತಾಲೂಕು ಮಟ್ಟದ ಸ್ಕೌಟ್ ಮತ್ತು ಗೈಡ್ಸ್ ಮಹಾಸಭೆ*
  • *ರೋಟರಿ ಮಿಸ್ಟಿ ಹಿಲ್ಸ್‌ನಿಂದ ನಾಲ್ವರು ಶಿಕ್ಷಕರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ; ನವತಂತ್ರಜ್ಞಾನಗಳ ಕಾಲಘಟ್ಟದಲ್ಲಿ ಪಾಠ ಹೇಳುವುದೇ ಶಿಕ್ಷಕರಿಗೆ ದೊಡ್ಡ ಸವಾಲು: ಸುಜಾತ ತಳವಾರ್*
  • *ಪರಿಸರ ಸಂರಕ್ಷಣೆ ಸಂದೇಶ ಸಾರಿದ ರೋಟರಿ ವುಡ್ಸ್ ಬೈಕ್ ಜಾಥಾ*
  • *ಜನ-ಜಾನುವಾರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಬಾಲ್ ಬ್ಯಾಡ್ಮಿಂಟನ್‌ : ವಿಭಾಗ ಮಟ್ಟಕ್ಕೆ ಸರ್ವದೈವತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು*
  • *ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಮೌಲ್ಯ, ಧ್ಯಾನ ಹಾಗೂ ರಾಜಯೋಗದ ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ದಸರಾ : ಅ.21ರಂದು ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವದ ಶೋಭಾಯಾತ್ರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ದಸರಾ : ಅ.21ರಂದು ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವದ ಶೋಭಾಯಾತ್ರೆ*

ಸೆಪ್ಟೆಂಬರ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ.17 : ಇತಿಹಾಸ ಪ್ರಸಿದ್ಧ ಮಡಿಕೇರಿ ದಸರಾ ಜನೋತ್ಸವದ ಧಾರ್ಮಿಕ ಆಕರ್ಷಣೆಯಾದ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವದ ಶೋಭಾಯಾತ್ರೆ ವಿಜಯದಶಮಿಯ ದಿನವಾದ ಅ.21ರಂದು ನಡೆಯಲಿದೆ ಎಂದು ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ಸಮಿತಿಯ ಗೌರವಾಧ್ಯಕ್ಷ ಜಿ.ವಿ.ರವಿಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಸ್ಥಾನದಲ್ಲಿ ಸೆ.16ರಂದು ಸಂಪ್ರದಾಯದAತೆ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನಾಲ್ಕು ಶಕ್ತಿ ದೇವತೆಗಳ ದೇವಸ್ಥಾನಗಳ ಅರ್ಚಕರು, ಗೌಳಿ ಸಮುದಾಯದ ಪ್ರಮುಖರು ಹಾಗೂ ಆಡಳಿತ ಮಂಡಳಿ ಸದಸ್ಯರು ಕರಗೋತ್ಸವದ ಶೋಭಾಯಾತ್ರೆಯ ಕುರಿತು ಚರ್ಚಿಸಿ ಈ ನಿರ್ಣಯ ಕೈಗೊಂಡಿದ್ದಾರೆ ಎಂದರು.
ಸಭೆಯ ನಿರ್ಣಯದಂತೆ ಮಹಾಲಯ ಅಮಾವಾಸ್ಯೆಯ ಮರುದಿನವಾದ ಅ.11ರಂದು ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ಕಂಚಿಕಾಮಾಕ್ಷಿಯಮ್ಮ, ಶ್ರೀ ದಂಡಿನ ಮಾರಿಯಮ್ಮ ಹಾಗೂ ಶ್ರೀ ಕೋಟೆ ಮಾರಿಯಮ್ಮ ದೇವಸ್ಥಾನಗಳಿಂದ ಸಂಪ್ರದಾಯದAತೆ ಕರಗಗಳು ಆರಂಭಗೊಳ್ಳಲಿವೆ. ಬಳಿಕ ಆಯುಧಪೂಜೆಯ ಮರುದಿನವಾದ ವಿಜಯದಶಮಿಯ ಅ.21ರಂದು ರಾತ್ರಿ ನಾಲ್ಕು ಕರಗಗಳ ಶೋಭಾಯಾತ್ರೆ ನಡೆಯಲಿದ್ದು, ಬನ್ನಿಮಂಟಪದ ಪಂಪ್ ಕೆರೆಗೆ ತೆರಳಿ ಬನ್ನಿ ಕಡಿಯುವ ಸಾಂಪ್ರದಾಯಿಕ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಕರಗೋತ್ಸವದ ದಿನವನ್ನು ನಾಲ್ಕು ಶಕ್ತಿ ದೇವತೆಗಳ ದೇವಸ್ಥಾನಗಳ ಪದಾಧಿಕಾರಿಗಳು ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಸ್ಥಾನದಲ್ಲಿ ಸಭೆ ಸೇರಿ ಚರ್ಚಿಸಿ ನಿಗದಿಪಡಿಸುವುದು ಹಿಂದಿನಿAದಲೂ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದೆ. ಅದರಂತೆ ಇದೀಗ ಅ.21ರಂದು ಕರಗೋತ್ಸವ ನಡೆಸಲು ನಿರ್ಧರಿಸಲಾಗಿದ್ದು, ಈ ಕುರಿತು ಯಾವುದೇ ಗೊಂದಲವಿಲ್ಲ ಎಂದು ಜಿ.ವಿ.ರವಿಕುಮಾರ್ ಸ್ಪಷ್ಟಪಡಿಸಿದರು.
ಶ್ರೀ ಕಂಚಿಕಾಮಾಕ್ಷಿ ದೇವಾಲಯ ಸಮಿತಿಯ ಗೌರವಾಧ್ಯಕ್ಷ ಹಾಗೂ ಶ್ರೀ ದಂಡಿನ ಮಾರಿಯಮ್ಮ ದೇವಸ್ಥಾನದ ಅರ್ಚಕ ಪಿ.ಎ.ಲೋಕನಾಥ್ ಮಾತನಾಡಿ, ನಾಲ್ಕು ಶಕ್ತಿ ದೇವತೆಗಳ ದೇವಸ್ಥಾನಗಳಲ್ಲಿ ಅನಾದಿ ಕಾಲದಿಂದ ಪೂಜೆ-ಪುನಸ್ಕಾರಗಳನ್ನು ನಡೆಸಿಕೊಂಡು ಬಂದಿರುವ ಗೌಳಿ ಸಮುದಾಯದ ಪ್ರಮುಖರು, ಅರ್ಚಕರು ಹಾಗೂ ದೇವಸ್ಥಾನ ಸಮಿತಿಯವರು ಒಗ್ಗೂಡಿ ಕರಗೋತ್ಸವದ ಆಚರಣೆ ಕುರಿತು ನಿರ್ಣಯ ಕೈಗೊಂಡಿದ್ದಾರೆ ಎಂದರು.
ಸಮಿತಿ ಖಜಾಂಚಿ ಜಿ.ಸಿ.ರಮೇಶ್ ಮಾತನಾಡಿ, ಎಲ್ಲಾ ಶಕ್ತಿ ದೇವತೆಗಳ ದೇವಸ್ಥಾನಗಳ ಪ್ರಮುಖರು ಹಾಗೂ ಸಮುದಾಯದ ಹಿರಿಯರ ಒಮ್ಮತದೊಂದಿಗೆ ಕರಗೋತ್ಸವದ ದಿನಾಂಕವನ್ನು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಸಮಿತಿ ಉಪಾಧ್ಯಕ್ಷ ಜಿ.ಸಿ.ಜಗದೀಶ್ ಮಾತನಾಡಿ, ಪ್ರತಿವರ್ಷ ವಿಜಯದಶಮಿಯಂದು ಮೈಸೂರು ದಸರಾ ಜಂಬೂಸವಾರಿಯ ಬಳಿಕ ಮಡಿಕೇರಿಯಲ್ಲಿ ರಾತ್ರಿ ಕರಗಗಳ ಶೋಭಾಯಾತ್ರೆ ನಡೆಯುತ್ತದೆ. ಹಿಂದಿನಿAದ ನಡೆದುಕೊಂಡು ಬಂದ ಸಂಪ್ರದಾಯದAತೆ ಈ ಬಾರಿಯೂ ಅ.21ರಂದು ರಾತ್ರಿ ಶೋಭಾಯಾತ್ರೆ ನಡೆಯಲಿದ್ದು, ಪಂಪ್ ಕೆರೆಗೆ ತೆರಳಿ ಬನ್ನಿ ಕಡಿಯುವ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.
ಕರಗೋತ್ಸವಕ್ಕೆ ಚಾಲನೆ ನೀಡುವ ಬನ್ನಿಮಂಟಪದ ಪಂಪ್ ಕೆರೆ ಮುಖದ್ವಾರದಲ್ಲಿ ಗೋಪುರ ನಿರ್ಮಿಸಲಾಗುತ್ತಿದ್ದು, ಅದರಲ್ಲಿ ನಾಲ್ಕು ಶಕ್ತಿ ದೇವತೆಗಳ ಮುಖಗಳನ್ನು ಅಳವಡಿಸಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಜಿ.ಸಿ.ಜಗದೀಶ್ ತಿಳಿಸಿದರು.
ಇತ್ತೀಚೆಗೆ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಅ.20ರಂದು ದಶಮಂಟಪಗಳ ಮೆರವಣಿಗೆ ನಡೆಸುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಮಿತಿ ಪ್ರಮುಖರು, ಕರಗೋತ್ಸವದ ದಿನಾಂಕವನ್ನು ಸಂಪ್ರದಾಯದAತೆ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಸ್ಥಾನದಲ್ಲಿ ಸಭೆ ಸೇರಿ ನಿರ್ಧರಿಸಲಾಗುತ್ತದೆ. ಕುಂದುರುಮೊಟ್ಟೆ ದೇವಸ್ಥಾನದಲ್ಲಿ ನಡೆದ ಸಭೆಯ ಕುರಿತು ತಮ್ಮಲ್ಲಿ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಜಿ.ಎಲ್.ದಾಸ್ ಹಾಗೂ ಗೌರವಾಧ್ಯಕ್ಷ ಜಿ.ಜಿ.ಬಾಲಕೃಷ್ಣ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*

ಸೆಪ್ಟೆಂಬರ್ 20, 2026

*ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*

ಸೆಪ್ಟೆಂಬರ್ 20, 2026

*ಮಲ್ಲಳ್ಳಿ ಜಲಪಾತದಲ್ಲಿ SIR-2026 ಕುರಿತು ಜಾಗೃತಿ ಜಾಥಾ*

ಸೆಪ್ಟೆಂಬರ್ 20, 2026

*ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*

ಸೆಪ್ಟೆಂಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.20: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 44ನೇ ವರ್ಷದ…

*ಮಲ್ಲಳ್ಳಿ ಜಲಪಾತದಲ್ಲಿ SIR-2026 ಕುರಿತು ಜಾಗೃತಿ ಜಾಥಾ*

ಸೆಪ್ಟೆಂಬರ್ 20, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗಾಡ್ರೆಜ್ ಹಾಗೂ ಟ್ರ್ಯಾಕ್ ಶೂಟ್ ವಿತರಣೆ*

ಸೆಪ್ಟೆಂಬರ್ 20, 2026

*ಸೋಮವಾರಪೇಟೆಯಲ್ಲಿ ತಾಲೂಕು ಮಟ್ಟದ ಸ್ಕೌಟ್ ಮತ್ತು ಗೈಡ್ಸ್ ಮಹಾಸಭೆ*

ಸೆಪ್ಟೆಂಬರ್ 20, 2026

*ರೋಟರಿ ಮಿಸ್ಟಿ ಹಿಲ್ಸ್‌ನಿಂದ ನಾಲ್ವರು ಶಿಕ್ಷಕರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ; ನವತಂತ್ರಜ್ಞಾನಗಳ ಕಾಲಘಟ್ಟದಲ್ಲಿ ಪಾಠ ಹೇಳುವುದೇ ಶಿಕ್ಷಕರಿಗೆ ದೊಡ್ಡ ಸವಾಲು: ಸುಜಾತ ತಳವಾರ್*

ಸೆಪ್ಟೆಂಬರ್ 20, 2026

*ಪರಿಸರ ಸಂರಕ್ಷಣೆ ಸಂದೇಶ ಸಾರಿದ ರೋಟರಿ ವುಡ್ಸ್ ಬೈಕ್ ಜಾಥಾ*

ಸೆಪ್ಟೆಂಬರ್ 20, 2026

*ಜನ-ಜಾನುವಾರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 19, 2026

*ಬಾಲ್ ಬ್ಯಾಡ್ಮಿಂಟನ್‌ : ವಿಭಾಗ ಮಟ್ಟಕ್ಕೆ ಸರ್ವದೈವತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು*

ಸೆಪ್ಟೆಂಬರ್ 19, 2026

*ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಮೌಲ್ಯ, ಧ್ಯಾನ ಹಾಗೂ ರಾಜಯೋಗದ ಅರಿವು*

ಸೆಪ್ಟೆಂಬರ್ 19, 2026

*ಕೊಡಗು ಸಹಕಾರ ಬ್ಯಾಂಕ್‍ಗೆ ರೂ.22.39 ಕೋಟಿ ನಿವ್ವಳ ಲಾಭ : ಶೇ.20 ಡಿವಿಡೆಂಟ್ ಘೋಷಣೆ*

ಸೆಪ್ಟೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.