ಮಡಿಕೇರಿ, NEWS DESK ಸೆ.17: ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಕ್ರೀಡಾಕೂಟದಲ್ಲಿ ಸರ್ವದೈವತ ಪ್ರಾಥಮಿಕ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
ತಂಡದ ವಿಶ್ಮಿತ್, ತೇಜಸ್ ಹಾಗೂ ದೈವಿಕ್ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಅದೇ ರೀತಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ತಂಡಗಳು ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಲಿತೇಶ್.ಕೆ, ಸಾಫನ್, ಲಿಪಿಕಾ.ಕೆ ಹಾಗೂ ಧೃತಿ ರಾಜ್ಯ ಮಟ್ಟದಲ್ಲಿ ಸ್ಪರ್ಧಿಸಲಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿದೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕರಾದ ಪ್ರಮೋದ್ ಗೌಡ ಹಾಗೂ ಯೋಗೇಶ್ ತರಬೇತಿ ನೀಡಿರುತ್ತಾರೆ.








