Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೇಕಲ್ ಆಯುರ್ವೇದ ಪಂಚಕರ್ಮ ಮತ್ತು ಬಾಣಂತಿ ಆರೈಕೆ ಕೇಂದ್ರ ಉದ್ಘಾಟನೆ*
  • *ವಾರಾಂತ್ಯದ ಪಾರ್ಟಿ ಹೆಸರಿನಲ್ಲಿ ಹಣ ವಸೂಲಿ : ಕೊಡಗು ಪೊಲೀಸರ ಎಚ್ಚರಿಕೆ*
  • *ಆತ ಜಗ್ಗಬಾರದು…. ಕುಗ್ಗಬಾರದು ಎಂದಾದರೆ…. ತಡಮಾಡದೆ ಜಗ್ಗನ ನೆರವಿಗೆ ಮುಂದಾಗಿ… ಪ್ಲೀಸ್…*
  • *ವಿರಾಜಪೇಟೆಯಲ್ಲಿ ಭರತನಾಟ್ಯ ವಿದ್ಯಾರ್ಥಿನಿಯರಿಗೆ ಪವಿತ್ರ ಗೆಜ್ಜೆ ಪೂಜೆ*
  • *ಶ್ರೀ ಬಸವೇಶ್ವರ ದೇವಾಲಯದಲ್ಲಿ ‘ವಾಯ್ಸ್ ಆಫ್ ವಿರಾಜಪೇಟೆ’ ಗಾಯನ ಸ್ಪರ್ಧೆ*
  • *ಪಂಜರಪೇಟೆಯಲ್ಲಿ ದೇವಾಲಯದ ಮಾದರಿಯ ವಿಶಿಷ್ಟ ಗಣಪತಿ ಮಂಟಪ: ಆಕರ್ಷಕ ಕಾರಂಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ಸೆ.19 ರಂದು ರಾಷ್ಟ್ರೀಯ ಲೋಕ ಅದಾಲತ್*
  • *ಪೌಷ್ಟಿಕ ಆಹಾರ ಸೇವನೆ ಹಾಗೂ ಮಾತೃ ವಂದನಾ ಯೋಜನೆ ಸದುಪಯೋಗಕ್ಕೆ ಸುಮಂಗಲ ಜಿ. ಹಿರೇಮನಿ ಕರೆ*
  • *ಕೊಡವ ಸಂಸ್ಕೃತಿಯ ಜೀವಂತಿಕೆಗೆ ಕೃಷಿಯೇ ಮೂಲ : ಮಹೇಶ್ ನಾಚಯ್ಯ*
  • *ಶ್ರೀ ಭಗವಾನ್ ವಿಶ್ವಕರ್ಮರ ಆರಾಧನೆಗೆ ಆದ್ಯತೆ ನೀಡಿ : ಹೆಚ್.ಬಿ.ಲಿಂಗಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಲ್ಯಾಂಡ್ ಸ್ವಾಯತ್ತ ಪ್ರದೇಶ ಬೇಡಿಕೆಗೆ ವೀರಶೈವ ಮಹಾಸಭಾ ವಿರೋಧ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಲ್ಯಾಂಡ್ ಸ್ವಾಯತ್ತ ಪ್ರದೇಶ ಬೇಡಿಕೆಗೆ ವೀರಶೈವ ಮಹಾಸಭಾ ವಿರೋಧ*

ಸೆಪ್ಟೆಂಬರ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ.17: ಕೊಡಗಿನಲ್ಲಿ ಕೊಡವ ಸ್ವಾಯತ್ತ ಮಂಡಳಿ ಹಾಗೂ ‘ಕೊಡವ ಲ್ಯಾಂಡ್’ ಭೌಗೋಳಿಕ ಮತ್ತು ರಾಜಕೀಯ ಸ್ವಾಯತ್ತ ಪ್ರದೇಶ ರಚನೆಗೆ ಸಂಬಂಧಿಸಿದ ಬೇಡಿಕೆಯನ್ನು ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕ ತೀವ್ರವಾಗಿ ವಿರೋಧಿಸಿದೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಹೆಚ್.ವಿ. ಶಿವಪ್ಪ, ಸಿಎನ್‌ಸಿ ವತಿಯಿಂದ ಕೊಡವ ಸ್ವಾಯತ್ತ ಮಂಡಳಿ ಹಾಗೂ ‘ಕೊಡವ ಲ್ಯಾಂಡ್’ ಭೌಗೋಳಿಕ ಮತ್ತು ರಾಜಕೀಯ ಸ್ವಾಯತ್ತ ಪ್ರದೇಶ ರಚಿಸಿ, ಆಂತರಿಕ ಸ್ವಯಂ ನಿರ್ಣಯದ ಹಕ್ಕು ಮತ್ತು ಅಧಿಕಾರ ನೀಡಬೇಕೆಂಬ ಬೇಡಿಕೆ ಮುಂದಿಟ್ಟಿರುವುದನ್ನು ಉಲ್ಲೇಖಿಸಿದರು. ಈ ಬೇಡಿಕೆಗಳಿಗೆ ಕೊಡಗಿನಲ್ಲಿ ವಾಸವಿರುವ ವಿವಿಧ ಸಮುದಾಯಗಳಿಂದ ವಿರೋಧ ವ್ಯಕ್ತವಾಗಿದ್ದು, ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕವೂ ವಿರೋಧ ವ್ಯಕ್ತಪಡಿಸುತ್ತಿದೆ. ಈ ಸಂಬಂಧ ನ್ಯಾಯಾಲಯದಲ್ಲಿಯೂ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.

ಕೊಡಗಿನಲ್ಲಿ ನೂರಾರು ವರ್ಷಗಳಿಂದ ವಿವಿಧ ಸಮುದಾಯಗಳು ಶಾಂತಿ ಮತ್ತು ಸೌಹಾರ್ದತೆಯಿಂದ ಸಹಬಾಳ್ವೆ ನಡೆಸುತ್ತಿವೆ. ಒಂದು ಜನಾಂಗದ ಹಕ್ಕುಗಳನ್ನು ರಕ್ಷಿಸುವ ಹೆಸರಿನಲ್ಲಿ ಇತರೆ ಸಮುದಾಯಗಳಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗಬಾರದು. ಕೊಡಗು ಜಿಲ್ಲೆಯಲ್ಲಿ ವಾಸಿಸುವ ಎಲ್ಲಾ ಜನಾಂಗದವರಿಗೂ ಸಮಾನ ಹಕ್ಕುಗಳಿವೆ. ಸಿಎನ್‌ಸಿಯ ಬೇಡಿಕೆ ಮುಂದಿನ ದಿನಗಳಲ್ಲಿ ಸಂಘರ್ಷಕ್ಕೆ ದಾರಿ ಮಾಡಿಕೊಡಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದರು.

ವೀರಶೈವ ಮಹಾಸಭಾದ ಹೋರಾಟ ಯಾವುದೇ ಒಂದು ಸಮುದಾಯದ ವಿರುದ್ಧವಲ್ಲ. ಕೊಡವ ಸಮುದಾಯ, ಕೊಡವರ ಸಂಸ್ಕೃತಿ, ಆಚಾರ, ವಿಚಾರ ಹಾಗೂ ಸಾಹಿತ್ಯವನ್ನು ಗೌರವಿಸುತ್ತೇವೆ. ಎಲ್ಲಾ ಸಮುದಾಯಗಳ ಹಕ್ಕು, ಸುರಕ್ಷತೆ ಹಾಗೂ ಸೌಹಾರ್ದಯುತ ಸಹಬಾಳ್ವೆ ಉಳಿಯಬೇಕು ಎಂಬ ಉದ್ದೇಶದಿಂದ ಸಿಎನ್‌ಸಿ ಬೇಡಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದೇವೆ ಎಂದು ಹೆಚ್.ವಿ. ಶಿವಪ್ಪ ಸ್ಪಷ್ಟಪಡಿಸಿದರು.

ಕೊಡವರಿಗೆ ಮಾತ್ರ ಪ್ರತ್ಯೇಕವಾಗಿ ಸ್ವಾಯತ್ತ ಮಂಡಳಿ ರಚನೆಯಾಗುವುದಕ್ಕೆ ನಮ್ಮ ವಿರೋಧವಿದೆ. ಜಿಲ್ಲೆಯಲ್ಲಿರುವ ಎಲ್ಲಾ ಜಾತಿ, ಜನಾಂಗದವರನ್ನು ಒಳಗೊಂಡ ಸ್ವಾಯತ್ತ ಮಂಡಳಿ ರಚನೆಯಾದರೆ ಯಾವುದೇ ಆಕ್ಷೇಪವಿಲ್ಲ. ಈ ಕ್ರಮದಿಂದ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕೊಡಗಿನಲ್ಲಿ ಸುಮಾರು 263 ವರ್ಷಗಳ ಕಾಲ ಆಳ್ವಿಕೆ ನಡೆಸಿದ ಹಾಲೇರಿ ರಾಜವಂಶಸ್ಥರು ಸರ್ವ ಜನಾಂಗದವರನ್ನು ಸಮಾನವಾಗಿ ಕಂಡಿದ್ದಾರೆ. ಎಲ್ಲಾ ಹಕ್ಕುಗಳನ್ನು ಸಮಾನವಾಗಿ ನೀಡಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲೂ ಸಮಾನ ಹಕ್ಕುಗಳ ಜಾರಿಯ ಅಗತ್ಯವಿದೆ ಎಂದು ತಿಳಿಸಿದರು.

ಮಹಾಸಭಾದ ಪ್ರಧಾನ ಕಾರ್ಯದರ್ಶಿ ಟಿ.ಎಸ್. ಶಾಂಭ ಶಿವಯ್ಯ ಮಾತನಾಡಿ, ಬಸವಣ್ಣನವರ ಕಾಲದಿಂದಲೂ ಸಮ ಸಮಾಜಕ್ಕೆ ಆದ್ಯತೆ ನೀಡಲಾಗಿದ್ದು, ಇದು ಮುಂದುವರಿಯಬೇಕು. ಹಾಲೇರಿ ಅರಸರ ಕುರಿತು ಸಿಎನ್‌ಸಿ ಅಸಂಬದ್ಧ ಹೇಳಿಕೆಗಳನ್ನು ನೀಡುವುದನ್ನು ಖಂಡಿಸುವುದಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶರಣ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಕೆ.ಎಸ್. ಮೂರ್ತಿ, ಮಹಾಸಭಾದ ಕುಶಾಲನಗರ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಶುಭ ಶೇಖರ್ ಹಾಗೂ ವೀರಶೈವ ನೌಕರರ ಸಂಘದ ಮಾಜಿ ಕಾರ್ಯದರ್ಶಿ ವಿರೂಪಾಕ್ಷ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೇಕಲ್ ಆಯುರ್ವೇದ ಪಂಚಕರ್ಮ ಮತ್ತು ಬಾಣಂತಿ ಆರೈಕೆ ಕೇಂದ್ರ ಉದ್ಘಾಟನೆ*

ಸೆಪ್ಟೆಂಬರ್ 18, 2026

*ವಾರಾಂತ್ಯದ ಪಾರ್ಟಿ ಹೆಸರಿನಲ್ಲಿ ಹಣ ವಸೂಲಿ : ಕೊಡಗು ಪೊಲೀಸರ ಎಚ್ಚರಿಕೆ*

ಸೆಪ್ಟೆಂಬರ್ 18, 2026

*ಆತ ಜಗ್ಗಬಾರದು…. ಕುಗ್ಗಬಾರದು ಎಂದಾದರೆ…. ತಡಮಾಡದೆ ಜಗ್ಗನ ನೆರವಿಗೆ ಮುಂದಾಗಿ… ಪ್ಲೀಸ್…*

ಸೆಪ್ಟೆಂಬರ್ 17, 2026

*ವಾರಾಂತ್ಯದ ಪಾರ್ಟಿ ಹೆಸರಿನಲ್ಲಿ ಹಣ ವಸೂಲಿ : ಕೊಡಗು ಪೊಲೀಸರ ಎಚ್ಚರಿಕೆ*

ಸೆಪ್ಟೆಂಬರ್ 18, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಸೆ.18 : ಹೊರ ಜಿಲ್ಲೆಗಳ ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳ ಮೂಲಕ “ವಾರಾಂತ್ಯದ ಪಾರ್ಟಿ” ಆಯೋಜಿಸುವುದಾಗಿ…

*ಆತ ಜಗ್ಗಬಾರದು…. ಕುಗ್ಗಬಾರದು ಎಂದಾದರೆ…. ತಡಮಾಡದೆ ಜಗ್ಗನ ನೆರವಿಗೆ ಮುಂದಾಗಿ… ಪ್ಲೀಸ್…*

ಸೆಪ್ಟೆಂಬರ್ 17, 2026

*ವಿರಾಜಪೇಟೆಯಲ್ಲಿ ಭರತನಾಟ್ಯ ವಿದ್ಯಾರ್ಥಿನಿಯರಿಗೆ ಪವಿತ್ರ ಗೆಜ್ಜೆ ಪೂಜೆ*

ಸೆಪ್ಟೆಂಬರ್ 17, 2026

*ಶ್ರೀ ಬಸವೇಶ್ವರ ದೇವಾಲಯದಲ್ಲಿ ‘ವಾಯ್ಸ್ ಆಫ್ ವಿರಾಜಪೇಟೆ’ ಗಾಯನ ಸ್ಪರ್ಧೆ*

ಸೆಪ್ಟೆಂಬರ್ 17, 2026

*ಪಂಜರಪೇಟೆಯಲ್ಲಿ ದೇವಾಲಯದ ಮಾದರಿಯ ವಿಶಿಷ್ಟ ಗಣಪತಿ ಮಂಟಪ: ಆಕರ್ಷಕ ಕಾರಂಜಿಗೆ ಸಾರ್ವಜನಿಕರ ಮೆಚ್ಚುಗೆ*

ಸೆಪ್ಟೆಂಬರ್ 17, 2026

*ಸೆ.19 ರಂದು ರಾಷ್ಟ್ರೀಯ ಲೋಕ ಅದಾಲತ್*

ಸೆಪ್ಟೆಂಬರ್ 17, 2026

*ಪೌಷ್ಟಿಕ ಆಹಾರ ಸೇವನೆ ಹಾಗೂ ಮಾತೃ ವಂದನಾ ಯೋಜನೆ ಸದುಪಯೋಗಕ್ಕೆ ಸುಮಂಗಲ ಜಿ. ಹಿರೇಮನಿ ಕರೆ*

ಸೆಪ್ಟೆಂಬರ್ 17, 2026

*ಕೊಡವ ಸಂಸ್ಕೃತಿಯ ಜೀವಂತಿಕೆಗೆ ಕೃಷಿಯೇ ಮೂಲ : ಮಹೇಶ್ ನಾಚಯ್ಯ*

ಸೆಪ್ಟೆಂಬರ್ 17, 2026

*ಶ್ರೀ ಭಗವಾನ್ ವಿಶ್ವಕರ್ಮರ ಆರಾಧನೆಗೆ ಆದ್ಯತೆ ನೀಡಿ : ಹೆಚ್.ಬಿ.ಲಿಂಗಮೂರ್ತಿ*

ಸೆಪ್ಟೆಂಬರ್ 17, 2026

*ಮೋದಿ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಶಿಬಿರ: 76 ಮಂದಿ ರಕ್ತದಾನ*

ಸೆಪ್ಟೆಂಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.