Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.59.53 ಲಕ್ಷ ನಿವ್ವಳ ಲಾಭ*
  • *ಡಾ.ರೇಷ್ಮಾಗೆ ಪಿಎಚ್‌ ಡಿ ಪದವಿ*
  • *ಸೆ.20ರಿಂದ ದುಬಾರೆ ಸಾಕಾನೆ ಶಿಬಿರ ಪುನರಾರಂಭ : ನಿಯಮ ಪಾಲನೆ ಖಡ್ಡಾಯ*
  • *ಸುಂಟಿಕೊಪ್ಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಆಚರಣೆ*
  • *ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನ : ಸೆ.19 ಮತ್ತು 20 ರಂದು ವಿಶೇಷ ಕಾರ್ಯಕ್ರಮ*
  • *ತೊರೆನೂರಿನಲ್ಲಿ ವಿಶ್ವಕರ್ಮ ಜಯಂತೋತ್ಸವ : ಮೆರವಣಿಗೆ*
  • *ಕರಾವಳಿ ಅಭಿವೃದ್ಧಿಗೆ ರಾಜ್ಯ ಸರ್ಕಾರ 32,612 ಕೋಟಿ ರೂ ಅನುಮೋದನೆ : ತುಳು ಎರಡನೇ ಅಧಿಕೃತ ಭಾಷೆ : ಸಚಿವ ಸಂಪುಟ ನಿರ್ಣಯ*
  • *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ : ಹಿರಿಯ ನಾಗರಿಕರನ್ನು ಗೌರವ ಮತ್ತು ಪ್ರೀತಿಯಿಂದ ನೋಡಿಕೊಳ್ಳಿ: ಶುಭ*
  • *2131ನೇ ಮಧ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ*
  • *ಸೆ. 20ರಂದು ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರಾವಳಿ ಅಭಿವೃದ್ಧಿಗೆ ರಾಜ್ಯ ಸರ್ಕಾರ 32,612 ಕೋಟಿ ರೂ ಅನುಮೋದನೆ : ತುಳು ಎರಡನೇ ಅಧಿಕೃತ ಭಾಷೆ : ಸಚಿವ ಸಂಪುಟ ನಿರ್ಣಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರಾವಳಿ ಅಭಿವೃದ್ಧಿಗೆ ರಾಜ್ಯ ಸರ್ಕಾರ 32,612 ಕೋಟಿ ರೂ ಅನುಮೋದನೆ : ತುಳು ಎರಡನೇ ಅಧಿಕೃತ ಭಾಷೆ : ಸಚಿವ ಸಂಪುಟ ನಿರ್ಣಯ*

ಸೆಪ್ಟೆಂಬರ್ 18, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಂಗಳೂರು.ಸೆ.18 NEWS DESK : ತುಳು ಭಾಷೆಗೆ 2 ಸಾವಿರ ವರ್ಷಗಳ ಇತಿಹಾಸವಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತುಳುಭಾಷೆ ಮಾತನಾಡುತ್ತಾರೆ. ಹಾಗಾಗಿ ಈ ಎರಡು ಜಿಲ್ಲೆಗೆ ಅನ್ವಯವಾಗುವಂತೆ ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯಾಗಿ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ.
ನಗರದ ಪ್ರಜಾಸೌಧ ಕಟ್ಟಡದ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದ್ದು, ಈ ಹಿನ್ನೆಲೆ ಸಾವಜನಿಕರಿಂದ ಅಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು. ಈ ಸಂಬಂಧ ಸಾವಜನಿಕರು ಒಂದು ತಿಂಗಳಲ್ಲಿ ಅಭಿಪ್ರಾಯ ನೀಡಬಹುದಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.
ಜಿಲ್ಲೆಗೊಂದು ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು ಎಂಬುದು ಸರಕಾರದ ಉದ್ದೇಶವಾಗಿದೆ. ಆ ದಿಸೆಯಲ್ಲಿ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ಗುರುತಿಸಿರುವ ಜಾಗದಲ್ಲಿ ಸರಕಾರಿ ವೈದ್ಯಕೀಯ ಕಾಲೇಜು, ಬೋಧನಾ ಆಸ್ಪತ್ರೆ, ಹಾಸ್ಟೆಲ್‌ ಮತ್ತಿತರ ಮೂಲಭೂತ ಸೌಲಭ್ಯ ಒಳಗೊಂಡಂತೆ 549.79 ಕೋ.ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ತಿಳಿಸಿದರು. ಕರಾವಳಿ, ಮಲೆನಾಡು ಭಾಗದಲ್ಲಿ ಕರ್ನಾಟಕ ಪ್ರವಾಸೋದ್ಯಮ ನೀತಿ 2026 ಜಾರಿಗೊಳಿಸಲು ಸಚಿವ ಸಂಪುಟ ಅನುಮೋದನೆ ನೀಡಿದ್ದು, ಹೊಸ ಪ್ರವಾಸೋದ್ಯಮ ನೀತಿಯಿಂದ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಇದರಿಂದ ಮೂಲ ಸೌಲಭ್ಯ ಅಭಿವೃದ್ಧಿಗೆ ಒಳಿತಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದರು. ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪ್ರವಾಸೋದ್ಯಮ ಮಂಡಳಿ ಸ್ಥಾಪಿಸಲಾಗುವುದು. ಇದಕ್ಕಾಗಿ 500 ಕೋಟಿ ರೂ ಅನುದಾನ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಪ್ರಕಟಿಸಿದರು. ದಕ್ಷಿಣ ಕನ್ನಡದಲ್ಲಿ ಮೀನುಗಾರಿಕಾ ಕಾಲೇಜು ಇದ್ದು, 60 ಮಂದಿ ವ್ಯಾಸಂಗ ಮಾಡಲು ಅವಕಾಶವಿದೆ. ಇನ್ನೂ 200 ಮಂದಿ ವ್ಯಾಸಂಗ ಮಾಡಲು ಅವಕಾಶ ಮಾಡಲಾಗುವುದು ಜೊತೆಗೆ ಮೀನುಗಾರಿಕಾ ವಿಶ್ವವಿದ್ಯಾನಿಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಪ್ರಕಟಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಿದ್ವಾಯಿ ಮತ್ತು ಜಯದೇವ ಆಸ್ಪತ್ರೆ ಆರಂಭಿಸಬೇಕು ಎಂಬ ಬೇಡಿಕೆ ಇದ್ದು, ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಸಮಗ್ರ ಕರ್ನಾಟಕ -ಸಮೃದ್ಧಿ ಕರ್ನಾಟಕ ಆಗಬೇಕು ಎಂಬುವುದು ಸರಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಧಾರ್ಮಿವಾಗಿ ಶ್ರೀಮಂತಿಕೆ ಹೊಂದಿವೆ. ಬ್ಯಾಂಕ್ ಗಳ ಉದಯಕ್ಕೆ ಕಾರಣವಾಗಿವೆ. ಶಿಕ್ಷಣ ಮತ್ತು ಆರೋಗ್ಯ ಕ್ಚೇತ್ರದಲ್ಲಿ ಮುಂದೆ ಇದ್ದು, ಬಂದರು ಅಭಿವೃದ್ಧಿಗೂ ಸಹ ಮತ್ತಷ್ಟು ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ನುಡಿದರು. ಕರಾವಳಿ ಅಭಿವೃದ್ಧಿಗೆ ಚೇಂಬರ್ ಆಫ್ ಕಾಮರ್ಸ್ ಮೀನುಗಾರರು, ಕೈಗಾರಿಕೋದ್ಯಮಿಗಳು ಸೇರಿದಂತೆ ಹಲವರು ಹಲವು ಸಲಹೆ ನೀಡಿದ್ದಾರೆ. ಅವುಗಳನ್ನು ಪರಿಗಣಿಸಲಾಗುವುದು. ಒಟ್ಟಾರೆ ಇಂದಿನ ಸಚಿವ ಸಂಪುಟದಲ್ಲಿ ಕರಾವಳಿ ಭಾಗದ ಅಭಿವೃದ್ಧಿಗೆ 32,612 ಕೋ.ರೂ ಅನುಮೋದನೆ ನೀಡಿದ್ದು, ಇದರಲ್ಲಿ ಗ್ರಾಮೀಣಾಭಿವೃದ್ಧಿ 16 ಸಾವಿರ ಕೋಟಿ ರೂ ಮತ್ತು ಮೂಲಸೌಲಭ್ಯ ಅಭಿವೃದ್ಧಿಗೆ 16 ಸಾವಿರ ಕೋಟಿ ರೂ ಒಳಗೊಂಡಿದೆ ಎಂದು ಮುಖ್ಯಮಂತ್ರಿ ವಿವರಿಸಿದರು. ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಮಾತನಾಡಿ, ಇದೊಂದು ಐತಿಹಾಸಿಕ ಸಂಪುಟ ಸಭೆಯಾಗಿದ್ದು, ಮೂಲ ಸೌಲಭ್ಯ ಬಂದರು ಒಳನಾಡು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ಪಾಲಕ, ಅರಣ್ಯ ರಕ್ಷಕ, ಅರಣ್ಯ ವೀಕ್ಷಕ ನೇಮಕಾತಿಯಲ್ಲಿ ಆದಿವಾಸಿ ಬುಡಕಟ್ಟು ಸಮಾಜದವರಿಗೆ ಶೇ.30 ರಷ್ಟು ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಅವರು ಹೇಳಿದರು. ಸೋಲಿಗ, ಜೇನುಕುರುಬ, ಕಾಡುಕುರುಬ, ಬೆಟ್ಟಕುರುಬ, ಪಣಿಯ, ಎರವ, ಕುಡಿಯ, ಮಲೆಕುಡಿಯ, ಹಲಸರು, ಸಿದ್ದಿ, ಕೊರಗರು ಮತ್ತಿತರ ಬುಡಕಟ್ಟು ಜನಾಂಗಗಳಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿ ವಿಶೇಷ ಪ್ರಾಧಾನ್ಯತೆ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದೊಂದು ಐತಿಹಾಸಿಕ ದಾಖಲೆ ಎಂದು ಉಪ ಮುಖ್ಯಮಂತ್ರಿ ಅವರು ವರ್ಣಿಸಿದರು. ಸಚಿವರಾದ ಯು.ಟಿ. ಖಾದರ್, ರಿಜ್ವಾನ್ ಅರ್ಷದ್, ವಿಜಯಾನಂದ್ ಕಾಶಪ್ಪನವರ್, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.59.53 ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 19, 2026

*ಡಾ.ರೇಷ್ಮಾಗೆ ಪಿಎಚ್‌ ಡಿ ಪದವಿ*

ಸೆಪ್ಟೆಂಬರ್ 19, 2026

*ಸೆ.20ರಿಂದ ದುಬಾರೆ ಸಾಕಾನೆ ಶಿಬಿರ ಪುನರಾರಂಭ : ನಿಯಮ ಪಾಲನೆ ಖಡ್ಡಾಯ*

ಸೆಪ್ಟೆಂಬರ್ 19, 2026

*ಡಾ.ರೇಷ್ಮಾಗೆ ಪಿಎಚ್‌ ಡಿ ಪದವಿ*

ಸೆಪ್ಟೆಂಬರ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.19 : ಬೆಂಗಳೂರಿನ ಎಚ್.ಎಸ್.ಆರ್. ಲೇಔಟ್ ನ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನ ಇಂಗ್ಲೀಷ್…

*ಸೆ.20ರಿಂದ ದುಬಾರೆ ಸಾಕಾನೆ ಶಿಬಿರ ಪುನರಾರಂಭ : ನಿಯಮ ಪಾಲನೆ ಖಡ್ಡಾಯ*

ಸೆಪ್ಟೆಂಬರ್ 19, 2026

*ಸುಂಟಿಕೊಪ್ಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಆಚರಣೆ*

ಸೆಪ್ಟೆಂಬರ್ 18, 2026

*ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನ : ಸೆ.19 ಮತ್ತು 20 ರಂದು ವಿಶೇಷ ಕಾರ್ಯಕ್ರಮ*

ಸೆಪ್ಟೆಂಬರ್ 18, 2026

*ತೊರೆನೂರಿನಲ್ಲಿ ವಿಶ್ವಕರ್ಮ ಜಯಂತೋತ್ಸವ : ಮೆರವಣಿಗೆ*

ಸೆಪ್ಟೆಂಬರ್ 18, 2026

*ಕರಾವಳಿ ಅಭಿವೃದ್ಧಿಗೆ ರಾಜ್ಯ ಸರ್ಕಾರ 32,612 ಕೋಟಿ ರೂ ಅನುಮೋದನೆ : ತುಳು ಎರಡನೇ ಅಧಿಕೃತ ಭಾಷೆ : ಸಚಿವ ಸಂಪುಟ ನಿರ್ಣಯ*

ಸೆಪ್ಟೆಂಬರ್ 18, 2026

*ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ : ಹಿರಿಯ ನಾಗರಿಕರನ್ನು ಗೌರವ ಮತ್ತು ಪ್ರೀತಿಯಿಂದ ನೋಡಿಕೊಳ್ಳಿ: ಶುಭ*

ಸೆಪ್ಟೆಂಬರ್ 18, 2026

*2131ನೇ ಮಧ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ*

ಸೆಪ್ಟೆಂಬರ್ 18, 2026

*ಸೆ. 20ರಂದು ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 18, 2026

*ವಿದ್ಯಾರ್ಥಿ ಜೀವನ ನಾಯಕತ್ವ ಗುಣ ಬೆಳೆಸಿಕೊಳ್ಳಲು ಮಹತ್ತರ ಸಮಯ: ಎಸ್.ಐ. ಮುನೀರ್ ಅಹಮದ್; ಮಡಿಕೇರಿಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ*

ಸೆಪ್ಟೆಂಬರ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.