ವಿರಾಜಪೇಟೆ, NEWS DESK ಸೆ.19:ವಿರಾಜಪೇಟೆಯ ಕರಾಟೆ ಸ್ಕೂಲ್ ಗೇಮ್ಸ್ ವತಿಯಿಂದ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಗಮನಾರ್ಹ ಸಾಧನೆ ಮಾಡಿದ್ದಾರೆ. ತಮ್ಮ ಶಿಸ್ತು, ಧೈರ್ಯ, ಆತ್ಮವಿಶ್ವಾಸ ಹಾಗೂ ನಿರಂತರ ಪರಿಶ್ರಮದ ಮೂಲಕ ಸ್ಪರ್ಧೆಯಲ್ಲಿ ಮಿಂಚಿದ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
U-17 ಬಾಲಕಿಯರ ವಿಭಾಗದಲ್ಲಿ ರ್ಣಾಂಡ ಕೃತಿಕಾ ಅಕ್ಕಮ್ಮ ಎಸ್. ಅವರು 48 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
U-17 ಬಾಲಕರ ವಿಭಾಗದಲ್ಲಿ ತಾತಂಡ ದಕ್ಷ್ ಬೋಜಣ್ಣ ಟಿ. ಅವರು 54 ಕೆ.ಜಿ. ಒಳಗಿನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
U-14 ಬಾಲಕರ ವಿಭಾಗದಲ್ಲಿ ರ್ಣಾಂಡ ಸನತ್ ಮುತ್ತಣ್ಣ ಎಸ್. ಅವರು 35 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯ ಹಿಂದೆ ಅವರ ಕಠಿಣ ಪರಿಶ್ರಮದ ಜೊತೆಗೆ ಕಾವೇರಿ ಶಾಲೆಯ ಕರಾಟೆ ಮಾಸ್ಟರ್ ಶ್ರೀಮಾನ್ ಗೌತಮ್ ಸೋಮಣ್ಣ ಪಿ. ಅವರ ನಿರಂತರ ತರಬೇತಿ, ಮಾರ್ಗದರ್ಶನ ಹಾಗೂ ಪ್ರೋತ್ಸಾಹವೂ ಪ್ರಮುಖ ಪಾತ್ರ ವಹಿಸಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾವೇರಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮಾನ್ ಸುದೇಶ್ ಬಿ.ಎಸ್., ಕಾರ್ಯದರ್ಶಿಯಾದ ಶ್ರೀಮಾನ್ ವಿನೋದ್ ಪಿ.ಎನ್., ಮುಖ್ಯ ಶಿಕ್ಷಕಿಯಾದ ಶ್ರೀಮತಿ ಪಾರ್ವತಿ ಪಿ.ಯು., ಸಂಯೋಜಕಿಯಾದ ಶ್ರೀಮತಿ ಅಮೃತ ಅರ್ಜುನ್, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ಪೋಷಕರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳ ಈ ಸಾಧನೆ ಕಾವೇರಿ ಶಾಲೆಯ ಕ್ರೀಡಾ ಕ್ಷೇತ್ರಕ್ಕೆ ಮತ್ತೊಂದು ಹೆಮ್ಮೆಯ ಗರಿ ಮೂಡಿಸಿದೆ. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ, ತಮ್ಮ ಪ್ರತಿಭೆ ಹಾಗೂ ಪರಿಶ್ರಮದ ಮೂಲಕ ಶಾಲೆಯ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಎಲ್ಲರೂ ಶುಭ ಹಾರೈಸಿದ್ದಾರೆ.







