
ಮೂರ್ನಾಡು, ಸೆ.19 NEWS DESK : ಮೂರ್ನಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಸರ್ವದೈವತ ಪ್ರೌಢಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ತಂಡದ ನಾಲ್ವರು ವಿದ್ಯಾರ್ಥಿಗಳು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸರ್ವದೈವತ ಪ್ರೌಢಶಾಲೆಯ ಅಕ್ಷಿತ್, ಪವಿತ್ರನ್, ಮೊಹಮ್ಮದ್ ಅರಫತ್ ಹಾಗೂ ಚೇತನ್ ದೇವಸಿ ಅವರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ಗೌಡ ಅವರು ತರಬೇತಿ ನೀಡಿದ್ದರು.










