ಸೋಮವಾರಪೇಟೆ, NEWS DESK ಸೆ.20: SIR-2026 ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ಅರಿವು ಮೂಡಿಸುವ ಉದ್ದೇಶದಿಂದ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾನುವಾರ ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರವಾಸಿ ತಾಣವಾದ ಮಲ್ಲಳ್ಳಿ ಜಲಪಾತದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.
ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಾಥಾದಲ್ಲಿ ಮಲ್ಲಳ್ಳಿ ಜಲಪಾತಕ್ಕೆ ಆಗಮಿಸಿದ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ SIR-2026 ಕುರಿತು ಮಾಹಿತಿ ನೀಡಿ, ಅದರ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಪಂಚಾಯಿತಿ ಸಿಬ್ಬಂದಿ, ಸಾರ್ವಜನಿಕರು, ಪ್ರವಾಸಿಗರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.







