
ಪೊನ್ನಂಪೇಟೆ ಸೆ.21 NEWS DESK : ಸಾಯಿ ಶಂಕರ್ ಕಾಲೇಜಿನಲ್ಲಿ ನಡೆದ ಪೊನ್ನಂಪೇಟೆ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಸರ್ವದೈವತ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ಗೌಡ ತರಬೇತಿ ನೀಡಿದ್ದರು.









