Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*
  • *ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*
  • *ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*
  • *ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*
  • *ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
  • *ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*
  • *ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*
  • **ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 
  • *ಮೂರು ದಿನ ಬ್ಯಾಂಕ್ ಮುಷ್ಕರ : ಸೇವೆಯಲ್ಲಿ ವ್ಯತ್ಯಯ*
  • *ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ. 23: ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಹಾಗೂ ಸರಳ ಜೀವನಶೈಲಿಯನ್ನು ರೂಢಿಸಿಕೊಳ್ಳುವ ಮೂಲಕ ಮಹಿಳೆಯರು ತಮ್ಮ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಬಹುದು ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ಎ.ಟಿ. ಸುಮುಖ್ ಹೇಳಿದರು.

ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ವುಡ್ಸ್ ವತಿಯಿಂದ ಮಡಿಕೇರಿ ಗೌಳಿಬೀದಿಯ ಅಂಗನವಾಡಿ ಕಾರ್ಯಕರ್ತೆಯರ ಸಹಯೋಗದಲ್ಲಿ ಆಯೋಜಿಸಿದ್ದ 5ನೇ ವರ್ಷದ ಪೋಷಣ್ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಹಿಳೆಯರು ಉತ್ತಮ ಪೌಷ್ಟಿಕಾಂಶ ಹೊಂದಿರುವ ಆಹಾರ ಸೇವನೆಯತ್ತ ಸದಾ ಗಮನ ಹರಿಸಬೇಕು. ಸಾಮಾನ್ಯವಾಗಿ ಮಹಿಳೆಯರು ತಮ್ಮ ಕುಟುಂಬ ಸದಸ್ಯರ ಆರೋಗ್ಯ ಮತ್ತು ಆಹಾರದ ಬಗ್ಗೆ ಕಾಳಜಿ ವಹಿಸುವ ಸಂದರ್ಭದಲ್ಲಿ ತಮ್ಮ ವೈಯಕ್ತಿಕ ಆರೋಗ್ಯ ಮತ್ತು ಆಹಾರದ ಬಗ್ಗೆ ನಿರ್ಲಕ್ಷ್ಯ ತೋರುತ್ತಾರೆ. ಇದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆಯೂ ಗಂಭೀರವಾಗಿ ಗಮನಹರಿಸಿ, ಸಮಯಕ್ಕೆ ಸರಿಯಾಗಿ ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದರು.

50 ವರ್ಷ ದಾಟಿದ ಮಹಿಳೆಯರು ಆಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ವಿಶೇಷವಾಗಿ ಕ್ಯಾನ್ಸರ್ ಸೇರಿದಂತೆ ಮಹಿಳೆಯರಿಗೆ ಸಂಬಂಧಿಸಿದ ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳುವುದು ಉತ್ತಮ. ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿದ ಹಲವು ತಪಾಸಣೆ ಮತ್ತು ಚಿಕಿತ್ಸಾ ಸೌಲಭ್ಯಗಳು ಲಭ್ಯವಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಸ್ತನ ಕ್ಯಾನ್ಸರ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರು ನಿಯಮಿತವಾಗಿ ಪ್ರಾಥಮಿಕ ತಪಾಸಣೆ ಮಾಡಿಸಿಕೊಳ್ಳಬೇಕು. ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿದಲ್ಲಿ ಸೂಕ್ತ ಚಿಕಿತ್ಸೆ ಮೂಲಕ ಕ್ಯಾನ್ಸರ್ ನಿಯಂತ್ರಿಸಲು ಸಾಧ್ಯವಿದೆ ಎಂದು ಹೇಳಿದರು. ಅಲ್ಲದೆ, ವೈದ್ಯರ ಸಲಹೆಯಿಲ್ಲದೆ ಅನಗತ್ಯವಾಗಿ ಮಾತ್ರೆಗಳನ್ನು ಸೇವಿಸದೆ, ಸೂಕ್ತ ತಪಾಸಣೆಯ ಬಳಿಕ ವೈದ್ಯರ ಮಾರ್ಗದರ್ಶನದಲ್ಲಿಯೇ ಔಷಧಿಗಳನ್ನು ಸೇವಿಸುವಂತೆ ಡಾ. ಸುಮುಖ್ ಸಲಹೆ ನೀಡಿದರು.

ರೋಟರಿ ಜಿಲ್ಲಾ ನಿರ್ದೇಶಕ ಅನಿಲ್ ಹೆಚ್.ಟಿ. ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವದ ಪೌಷ್ಟಿಕ ಆಹಾರ ಯೋಜನೆಯಾದ ಪೋಷಣ್ ಅಭಿಯಾನ ದೇಶಾದ್ಯಂತ 14 ಲಕ್ಷ ಅಂಗನವಾಡಿಗಳಲ್ಲಿ ಜಾರಿಯಲ್ಲಿದೆ. ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದರು.

ರೋಟರಿ ವುಡ್ಸ್ ಸಂಸ್ಥೆಯು ಕಳೆದ ಐದು ವರ್ಷಗಳಿಂದ ಪೋಷಣ್ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ. ಸಾರ್ವಜನಿಕರ ಉತ್ತಮ ಆರೋಗ್ಯಕ್ಕಾಗಿ ರೋಟರಿ ಸಂಸ್ಥೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು.

ರೋಟರಿ ನಿರ್ದೇಶಕ ಬಿ.ಜಿ. ಅನಂತಶಯನ ಮಾತನಾಡಿ, ಪುರಾತನ ಕಾಲದ ಆಹಾರ ಪದ್ಧತಿಯು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿತ್ತು. ಪೌಷ್ಟಿಕಾಂಶಯುಕ್ತ ಆಹಾರ ಸೇವನೆಯಿಂದಾಗಿ ಅಂದಿನ ಕಾಲದಲ್ಲಿ ಇಂದಿನಂತೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತಿರಲಿಲ್ಲ. ಆದ್ದರಿಂದ ಪೌಷ್ಟಿಕಾಂಶಭರಿತ ಆಹಾರ ಪದ್ಧತಿಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.

ರೋಟರಿ ವುಡ್ಸ್ ಅಧ್ಯಕ್ಷೆ ಪ್ರಮೀಳಾ ಶೆಟ್ಟಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರಲ್ಲಿ ಪೌಷ್ಟಿಕಾಂಶಯುಕ್ತ ಆಹಾರದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ರೋಟರಿ ವುಡ್ಸ್ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಪ್ರತಿವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪೌಷ್ಟಿಕಾಂಶಯುಕ್ತ ಆಹಾರಗಳನ್ನು ತಯಾರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದು ಸಂತಸದ ವಿಚಾರ ಎಂದರು.

ರೋಟರಿ ವುಡ್ಸ್ ಕಾರ್ಯದರ್ಶಿ ಸ್ಮಿತಾ ಚಂಗಪ್ಪ ವಂದಿಸಿದರು.

ಕಾರ್ಯಕ್ರಮದಲ್ಲಿ ಗೌಳಿಬೀದಿ ಅಂಗನವಾಡಿಯ ಕಾರ್ಯಕರ್ತೆಯರು ಹಾಗೂ ಮಡಿಕೇರಿ ನಗರದ ವಿವಿಧೆಡೆಗಳ ಮಹಿಳೆಯರು ವೈವಿಧ್ಯಮಯ ಪೌಷ್ಟಿಕಾಂಶಯುಕ್ತ ಆಹಾರಗಳನ್ನು ತಯಾರಿಸಿ ಪ್ರದರ್ಶಿಸಿದರು.

ಪೌಷ್ಟಿಕಾಂಶಭರಿತ ಆಹಾರ ತಯಾರಿಕಾ ಸ್ಪರ್ಧೆಯಲ್ಲಿ ಪುಪ್ಪ (ಬೀಟ್‌ರೂಟ್ ದೋಸೆ) ಪ್ರಥಮ, ಶಿಬಾ (ಸೌತೆಕಾಯಿ ಸ್ಯಾಂಡ್‌ವಿಚ್) ದ್ವಿತೀಯ ಹಾಗೂ ಸಂಧ್ಯಾ (ಮೆಂತೆ ಗಂಜಿ) ತೃತೀಯ ಬಹುಮಾನ ಪಡೆದರು.

ಗೌಳಿಬೀದಿ ಅಂಗನವಾಡಿ ಶಿಕ್ಷಕಿ ಗೀತಾ, ರೋಟರಿ ವುಡ್ಸ್ ಸ್ಥಾಪಕಾಧ್ಯಕ್ಷ ಎಸ್.ಎಸ್. ಸಂಪತ್ ಕುಮಾರ್, ಮಾಜಿ ಅಧ್ಯಕ್ಷ ಕಿರಣ್ ಕುಂದರ್ ಸೇರಿದಂತೆ ರೋಟರಿ ಸದಸ್ಯರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*

ಸೆಪ್ಟೆಂಬರ್ 23, 2026

*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*

ಸೆಪ್ಟೆಂಬರ್ 23, 2026

*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*

ಸೆಪ್ಟೆಂಬರ್ 23, 2026

*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.23 NEWS DESK : ಮಕ್ಕಳ ಆರೋಗ್ಯಕರ ಬೆಳವಣಿಗೆಗಾಗಿ ಸಮತೋಲಿತ ಆಹಾರ, ಸ್ವಚ್ಛತೆ ಮತ್ತು ಉತ್ತಮ ಆಹಾರ ಪದ್ಧತಿಯನ್ನು…

*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*

ಸೆಪ್ಟೆಂಬರ್ 23, 2026

*ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*

ಸೆಪ್ಟೆಂಬರ್ 23, 2026

**ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 

ಸೆಪ್ಟೆಂಬರ್ 23, 2026

*ಮೂರು ದಿನ ಬ್ಯಾಂಕ್ ಮುಷ್ಕರ : ಸೇವೆಯಲ್ಲಿ ವ್ಯತ್ಯಯ*

ಸೆಪ್ಟೆಂಬರ್ 23, 2026

*ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ* 

ಸೆಪ್ಟೆಂಬರ್ 23, 2026

*ನೂತನ ಕೊಡಗು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಅಗತ್ಯ ಸಹಕಾರ : ನಿಯೋಗಕ್ಕೆ ಸಿಎಂ ಭರವಸೆ*

ಸೆಪ್ಟೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.