Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*
  • *ಮೀನು ಹಿಡಿಯುವ ಸಲಕರಣೆಗಳ ವಿತರಣೆ*
  • *ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*
  • *ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*
  • *ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*
  • *ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*
  • *ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*
  • *ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
  • *ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*
  • *ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*

ಸೆಪ್ಟೆಂಬರ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.23 NEWS DESK : ಡಾ.ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ ಪಂಚಾಯಿತಿ ಆಡಳಿತಾಧಿಕಾರಿ ಸಚಿನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕುಂದಚೇರಿ ಗ್ರಾ.ಪಂ ವ್ಯಾಪ್ತಿಗೆ ನಾಲ್ಕು ಗ್ರಾಮಗಳು ಒಳಪಡುತ್ತಿದ್ದು, ನಾಲ್ಕು ಸಾವಿರಕ್ಕೂ ಅಧಿಕ ಮಂದಿ ವಾಸಿಸುತ್ತಿದ್ದಾರೆ. ಗ್ರಾಮಗಳು ಶಾಲೆ, ಅಂಗನವಾಡಿ, ಆಸ್ಪತ್ರೆ, ಸಮುದಾಯ ಭವನ, ಪರಿಶಿಷ್ಟ ಜಾತಿ, ಪಂಗಡಗಳ ಕಾಲೋನಿಗಳು, ಕುಡಿಯುವ ನೀರಿನ ಕಟ್ಟೆಗಳು, ಪೈಪ್ ಲೈನ್ ಗಳು ಸೇರಿದಂತೆ ಜನ ವಸತಿ ಪ್ರದೇಶಗಳನ್ನು ಹೊಂದಿವೆ. 2014 ರ ಕಸ್ತೂರಿ ರಂಗನ್ ವರದಿಯಲ್ಲಿ ಶೇ.37ರಷ್ಟು ಅರಣ್ಯ ಪ್ರದೇಶವನ್ನು ಹೊಂದಲು ಶಿಫಾರಸ್ಸು ಮಾಡಲಾಗಿತ್ತು. ಕುಂದಚೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ 7388 ಹೆಕ್ಟೇರ್ ಭೂಪ್ರದೇಶವಿದ್ದು, 4152 ಹೆಕ್ಟೇರ್ ಎಂದರೆ ಶೇ.56.25 ಅರಣ್ಯ ಪ್ರದೇಶವಾಗಿದೆ. ಕಸ್ತೂರಿ ರಂಗನ್ ವರದಿಯಲ್ಲಿ ಉಲ್ಲೇಖಿಸಿರುವುದಕ್ಕಿಂತ ಹೆಚ್ಚಿನ ಭಾಗ ಅರಣ್ಯವಿರುವುದರಿಂದ ಸೂಕ್ಷ್ಮ ವಲಯ ಪ್ರದೇಶಗಳನ್ನು ಶೂನ್ಯ ಮಾಡುವಂತೆ ಸಭೆಯಲ್ಲಿ ಒಮ್ಮತದ ಒತ್ತಾಯದ ನಿರ್ಧಾರ ಕೈಗೊಳ್ಳಲಾಯಿತು. ಹಿಂದೆ 1980 ರಿಂದ ಸರಕಾರದ ವತಿಯಿಂದ ರೈತರು, ಕಾರ್ಮಿಕರು ಹಾಗೂ ನಿವೃತ್ತ ಯೋಧರಿಗೆ ಹಕ್ಕುಪತ್ರ, ಪಹಣಿ ಪತ್ರ ಮತ್ತು ಮಂಜೂರಾತಿ ಪತ್ರ ನೀಡಲಾಗಿದೆ. ಈ ಜಾಗಗಳನ್ನು ಹೊರತು ಪಡಿಸಿ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಸರ್ವೆ ನಡೆಸಿ ಹದ್ದುಬಸ್ತು ಗುರುತಿಸಿಕೊಡಬೇಕೆಂದು ಹಿರಿಯರಾದ ಕೆದಂಬಾಡಿ ಸುರೇಂದ್ರ ಅಭಿಪ್ರಾಯ ಮಂಡಿಸಿದರು. ಇದಕ್ಕೆ ಸರ್ವರೂ ಸಮ್ಮತಿ ಸೂಚಿಸಿದರು. 2014 ನವೆಂಬರ್ 25 ರಂದು ವಿಶೇಷ ಸಭೆ ನಡೆಸಿ ಕಸ್ತೂರಿ ರಂಗನ್ ವರದಿಗೆ ವಿರೋಧ ವ್ಯಕ್ತಪಡಿಸಿ ಕೇಂದ್ರ ಸರಕಾರಕ್ಕೆ ಆಕ್ಷೇಪಣೆ ಸಲ್ಲಿಸಲಾಗಿತ್ತು. ನಂತರ 2026 ಜುಲೈ 4 ರಂದು ಗ್ರಾಮಸ್ಥರ ಸಭೆಯಲ್ಲಿ ಚರ್ಚಿಸಿ ರಸ್ತೆ ತಡೆ ಪ್ರತಿಭಟನೆ ನಡೆಸಿ ಪಿಡಿಒ ಅವರ ಮೂಲಕ ಆಕ್ಷೇಪಣೆ ಸಲ್ಲಿಸಲಾಗಿದೆ. ಅಲ್ಲದೆ ಗ್ರಾಮಗಳ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. 2013 ನವೆಂಬರ್ 13 ರ ನೋಟಿಫಿಕೇಶನ್ ನ್ನು ಹಿಂಪಡೆಯಬೇಕು, ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕ ಮತ್ತು ದೋಷಗಳಿರುವುದರಿಂದ ಯಥಾವತ್ತಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎನ್ನುವುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು. ಪರಿಸರ ಅಧ್ಯಯನಕ್ಕೆ ಗ್ರಾಮ ಮಟ್ಟದಲ್ಲಿ ಹೊಸ ಸಮಿತಿ ರಚಿಸಬೇಕು, ಸ್ಥಳೀಯವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕು. 7388 ಹೆಕ್ಟೇರ್ ಭೂಪ್ರದೇಶದಲ್ಲಿ 4152 ಹೆಕ್ಟೇರ್ ಪ್ರದೇಶ ಅರಣ್ಯವಿರುವುದರಿಂದ ಕುಂದಚೇರಿ ಗ್ರಾ.ಪಂ ವ್ಯಾಪ್ತಿಯ ಎರಡು ಗ್ರಾಮಗಳನ್ನು ವರದಿ ವ್ಯಾಪ್ತಿಯಿಂದ ಕೈಬಿಡಬೇಕು. ಕಸ್ತೂರಿ ರಂಗನ್ ವರದಿ ಆಧಾರದ ಮೇಲೆ ಇಎಸ್‍ಎ ಜಾರಿಗೆ ತರುವ ಸಂದರ್ಭ ಸ್ಥಳೀಯ ಜನರ ಅಭಿಪ್ರಾಯ ಮತ್ತು ಗ್ರಾಮಗಳ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷ ಪಿ.ಬಿ.ದಿನೇಶ್, ಮಾಜಿ ಸದಸ್ಯ ಕೆ.ಯು.ಹಾರಿಸ್, ಪ್ರಮುಖರಾದ ಕೀರ್ತಿ ಉತ್ತಪ್ಪ, ಕೀರ್ತಿ ಕುಮಾರ್, ದಬ್ಬಡ್ಕ ಶ್ರೀಧರ್, ಸೆಟ್ಟೇಜನ ಬ್ರಿಜೇಶ್, ಕೆದಂಬಾಡಿ ಜಯಪ್ರಕಾಶ್, ಮಂಗೇರಿರ ಸೋಮಯ್ಯ, ಸಿ.ಎಸ್.ವೇಣು ಗೋಪಾಲ್, ಕೆದಂಬಾಡಿ ಪ್ರವೀಣ್ ಕುಮಾರ್, ಕಾಡಂಡ ಭೀಮಯ್ಯ ಅವರುಗಳು ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿದರು. ಆಡಳಿತಾಧಿಕಾರಿ ಸಚಿನ್ ಅವರು ಸಭೆಯ ನಿರ್ಣಯ ಹಾಗೂ ಜನಾಭಿಪ್ರಾಯವನ್ನು ಸಂಬಂಧಪಟ್ಟ ಇಲಾಖೆಗೆ ತಲುಪಿಸುವುದಾಗಿ ತಿಳಿಸಿದರು. ಪಿಡಿಒ ಹರೀಶ್ ಸ್ವಾಗತಿಸಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.23 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ 2026-27 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಮೀನುಗಾರಿಕೆ…

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*

ಸೆಪ್ಟೆಂಬರ್ 23, 2026

*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*

ಸೆಪ್ಟೆಂಬರ್ 23, 2026

*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*

ಸೆಪ್ಟೆಂಬರ್ 23, 2026

*ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*

ಸೆಪ್ಟೆಂಬರ್ 23, 2026

**ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 

ಸೆಪ್ಟೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.