Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*
  • *ಮೀನು ಹಿಡಿಯುವ ಸಲಕರಣೆಗಳ ವಿತರಣೆ*
  • *ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*
  • *ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*
  • *ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*
  • *ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*
  • *ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*
  • *ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
  • *ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*
  • *ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.23 NEWS DESK : ಆಯುರ್ವೇದವು ಕೇವಲ ಕಾಯಿಲೆ ಬಂದ ನಂತರ ಚಿಕಿತ್ಸೆ ನೀಡುವ ಪದ್ಧತಿಯಲ್ಲ, ಆರೋಗ್ಯ ಕಾಪಾಡಿಕೊಂಡು ಕಾಯಿಲೆ ತಡೆಗಟ್ಟುವ ಜೀವನ ವಿಜ್ಞಾನವಾಗಿದೆ ಎಂದು ಕುಶಾಲನಗರ ಯೋಗಕ್ಷೇಮ ಆಸ್ಪತ್ರೆಯ ಆಯುರ್ವೇದ ವೈದ್ಯರಾದ ಡಾ.ಶ್ಯಾಮ್ ಪ್ರಸಾದ್ ಅವರು ಹೇಳಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ‘ಆರೋಗ್ಯಕರ ನಾಳೆಗಾಗಿ ಆಯುರ್ವೇದ’ ಎಂಬ ಘೋಷವಾಕ್ಯದೊಂದಿಗೆ ನಗರದ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ನಡೆದ 11 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದರು. ‘ಆಯು’ ಎಂದರೆ ಜೀವನ ಅಥವಾ ಆಯಸ್ಸು ಹಾಗೂ ‘ವೇದ’ ಎಂದರೆ ವಿಜ್ಞಾನ. ಜೀವನ ಹೇಗೆ ಆರೋಗ್ಯಕರವಾಗಿ ನಡೆಸಬೇಕು ಎಂಬುದನ್ನು ತಿಳಿಸಿಕೊಡುವುದೇ ಆಯುರ್ವೇದದ ಪ್ರಮುಖ ಉದ್ದೇಶವಾಗಿದೆ. ನಮ್ಮ ಹಿರಿಯರು ಅನುಭವದ ಮೂಲಕ ತಿಳಿದುಕೊಂಡು, ಪೀಳಿಗೆಯಿಂದ ಪೀಳಿಗೆಗೆ ಅನುಸರಿಸಿಕೊಂಡು ಬಂದಿರುವ ಆಹಾರ ಪದ್ಧತಿ, ಜೀವನಶೈಲಿ ಹಾಗೂ ಮನೆ ಮದ್ದುಗಳಲ್ಲಿಯೂ ಆಯುರ್ವೇದದ ತತ್ವಗಳು ಅಡಕವಾಗಿವೆ ಎಂದು ವಿವರಿಸಿದರು. ಪ್ರಸ್ತುತ ಜೀವನಶೈಲಿಯಿಂದಾಗಿ ಮಧುಮೇಹ, ಬೊಜ್ಜು ಸೇರಿದಂತೆ ಹಲವು ಜೀವನಶೈಲಿ ಆಧಾರಿತ ಕಾಯಿಲೆಗಳು ಹೆಚ್ಚುತ್ತಿವೆ. ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಮುಖ್ಯ. ಆರೋಗ್ಯಕರ ಆಹಾರ, ಸಮಯಕ್ಕೆ ಸರಿಯಾಗಿ ಊಟ, ಸಮರ್ಪಕ ನಿದ್ರೆ ಹಾಗೂ ನಿಯಮಿತ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಹಲವು ಆರೋಗ್ಯ ಸಮಸ್ಯೆ ದೂರವಿಡಬಹುದು ಎಂದರು.
ಜೀರ್ಣಶಕ್ತಿಯನ್ನು ಉತ್ತಮವಾಗಿ ಕಾಪಾಡಿಕೊಳ್ಳುವುದು ಆರೋಗ್ಯದ ಪ್ರಮುಖ ಅಂಶವಾಗಿದೆ. ಹಸಿವು ಮತ್ತು ನಿದ್ರೆಯ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಬೇಕು ಎಂದು ಸಲಹೆ ನೀಡಿದರು. ಇಂದಿನ ದಿನಗಳಲ್ಲಿ ಒತ್ತಡ, ಆತಂಕ ಹಾಗೂ ಖಿನ್ನತೆಯಂತಹ ಸಮಸ್ಯೆಗಳೂ ಹೆಚ್ಚುತ್ತಿವೆ. ದೈನಂದಿನ ಜೀವನದಲ್ಲಿ ಸೂಕ್ತ ವಿಶ್ರಾಂತಿ ಪಡೆಯುವುದು, ಸಾಧ್ಯವಾದಷ್ಟು ನೈಸರ್ಗಿಕ ವಾತಾವರಣದಲ್ಲಿ ಸಮಯ ಕಳೆಯುವುದು ಹಾಗೂ ಆರೋಗ್ಯಕರ ಆಹಾರ ಪದ್ಧತಿ ಅನುಸರಿಸುವುದು ಅಗತ್ಯವಾಗಿದೆ ಎಂದು ಡಾ.ಶ್ಯಾಮ್ ಪ್ರಸಾದ್ ಅವರು ಹೇಳಿದರು. ಆಯುರ್ವೇದದ ಆರೋಗ್ಯಕರ ಜೀವನಶೈಲಿಯ ಕುರಿತು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದರ ಜೊತೆಗೆ ಕುಟುಂಬ ಮತ್ತು ಸಮಾಜದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮ ಅನುಸರಿಸಬೇಕು ಎಂದರು.
‘ಸ್ವಸ್ಥ ಭವಿಷ್ಯಕ್ಕಾಗಿ ಆಯುರ್ವೇದ’ ಎಂಬ ಆಶಯದಂತೆ, ಭವಿಷ್ಯದ ಆರೋಗ್ಯವನ್ನು ಕೇವಲ ಆಸ್ಪತ್ರೆಗಳು ಮತ್ತು ಚಿಕಿತ್ಸೆಗಳ ಮೇಲೆ ಅವಲಂಬಿಸದೆ, ಆರೋಗ್ಯಕರ ತಾಯ್ತನ, ಪೌಷ್ಟಿಕ ಆಹಾರ, ಉತ್ತಮ ಅಡುಗೆ ಪದ್ಧತಿ ಹಾಗೂ ಸರಿಯಾದ ಜೀವನಶೈಲಿಯ ಮೂಲಕ ಕಾಪಾಡಿಕೊಳ್ಳಬೇಕು. ಆಸ್ಪತ್ರೆಗಳು ಮುಖ್ಯವಾಗಿ ಕಾಯಿಲೆ ಬಂದಾಗ ಚಿಕಿತ್ಸೆ ನೀಡುವ ಸ್ಥಳವಾಗಿದ್ದು, ಕಾಯಿಲೆ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಡಾ.ಶ್ಯಾಮ್ ಪ್ರಸಾದ್ ಅವರು ತಿಳಿಸಿದರು. ನೀಮಾ ಸಂಸ್ಥೆಯ ಡಾ.ರಾಜಾರಾಮ್ ಅವರು ಮಾತನಾಡಿ, ಆಯುರ್ವೇದವು ಕೇವಲ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ಪದ್ಧತಿಯಲ್ಲ, ಆರೋಗ್ಯವನ್ನು ಕಾಪಾಡಿಕೊಳ್ಳುವ ಸಮಗ್ರ ಜೀವನಶೈಲಿಯಾಗಿದೆ. ಪ್ರಕೃತಿ ಮತ್ತು ದೇಹದ ನಡುವಿನ ಸಮತೋಲನ ಕಾಪಾಡಿಕೊಳ್ಳುವ ಮೂಲಕ ಆರೋಗ್ಯಕರ ಜೀವನ ನಡೆಸಲು ಆಯುರ್ವೇದ ಮಾರ್ಗದರ್ಶನ ನೀಡುತ್ತದೆ ಎಂದು ಹೇಳಿದರು. ಇಂದಿನ ಆಧುನಿಕ ಜೀವನಶೈಲಿಯಿಂದಾಗಿ ಒತ್ತಡ, ಆಹಾರ ಪದ್ಧತಿಯ ಬದಲಾವಣೆ ಹಾಗೂ ನಿದ್ರೆಯ ಕೊರತೆಯಂತಹ ಸಮಸ್ಯೆಗಳು ಹೆಚ್ಚಾಗುತ್ತಿವೆ. ಇಂತಹ ಸಂದರ್ಭದಲ್ಲಿ ಸರಿಯಾದ ಆಹಾರ, ನಿಯಮಿತ ಜೀವನಕ್ರಮ, ಯೋಗ, ವ್ಯಾಯಾಮ ಹಾಗೂ ಪ್ರಕೃತಿಗೆ ಹೊಂದಿಕೊಂಡ ಜೀವನಶೈಲಿಗೆ ಆಯುರ್ವೇದದಲ್ಲಿ ಮಹತ್ವ ನೀಡಲಾಗಿದೆ ಎಂದರು. ಆಯುರ್ವೇದವು ರೋಗದ ಲಕ್ಷಣಗಳ ಜೊತೆಗೆ ವ್ಯಕ್ತಿಯ ದೇಹಪ್ರಕೃತಿ, ಆಹಾರ ಪದ್ಧತಿ ಹಾಗೂ ಜೀವನಶೈಲಿಯನ್ನು ಪರಿಗಣಿಸಿ ಆರೋಗ್ಯ ಸಂರಕ್ಷಣೆಗೆ ಒತ್ತು ನೀಡುತ್ತದೆ ಎಂದು ತಿಳಿಸಿದರು. ಆಯುರ್ವೇದದ ಔಷಧಿಯನ್ನು ತಜ್ಞ ವೈದ್ಯರ ಸಲಹೆಯೊಂದಿಗೆ ಮಾತ್ರ ಬಳಸಬೇಕು. ಸ್ವಯಂ ಚಿಕಿತ್ಸೆ ಮಾಡಿಕೊಳ್ಳದೆ, ಅಗತ್ಯವಿದ್ದಾಗ ಅರ್ಹ ವೈದ್ಯರನ್ನು ಸಂಪರ್ಕಿಸುವುದು ಮುಖ್ಯ. ಆರೋಗ್ಯಕರ ಆಹಾರ ಮತ್ತು ಶಿಸ್ತಿನ ಜೀವನಶೈಲಿಯೊಂದಿಗೆ ಆಯುರ್ವೇದದ ತತ್ವ ಅಳವಡಿಸಿಕೊಂಡರೆ ದೈಹಿಕ ಹಾಗೂ ಮಾನಸಿಕ ಕ್ಷೇಮವನ್ನು ಕಾಪಾಡಿಕೊಳ್ಳಲು ನೆರವಾಗುತ್ತದೆ. ಜೊತೆಗೆ ಸಮಾಜದಲ್ಲಿಯೂ ಆರೋಗ್ಯದ ಕುರಿತು ಜಾಗೃತಿ ಮೂಡಿಸಬೇಕು ಎಂದು ಡಾ.ರಾಜಾರಾಮ್ ಕರೆ ನೀಡಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಆಯುರ್ವೇದವು ಕೇವಲ ರೋಗ ನಿವಾರಣೆ ಮಾಡುವ ವೈದ್ಯ ಪದ್ಧತಿಯಲ್ಲ, ಅದು ಸೌಹಾರ್ದಯುತ ಮತ್ತು ಆರೋಗ್ಯಕರ ಜೀವನ ನಡೆಸುವ ಜೀವನ ಶೈಲಿಯಾಗಿದೆ. ಇಂದಿನ ಒತ್ತಡದ ಬದುಕಿನಲ್ಲಿ ನೈಸರ್ಗಿಕ ಆರೋಗ್ಯ ರಕ್ಷಣೆಗೆ ಆಯುರ್ವೇದ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ ಜಿ ಅವರು, ದಿನದ ಮಹತ್ವದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಸಬಿತ, ಆಶಾ ಕಾರ್ಯಕರ್ತೆಯರು, ಇಲಾಖೆ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು. ಆಯುಷ್ ಇಲಾಖೆಯ ದಿಶಾ ಪ್ರಾರ್ಥಿಸಿದರು, ಡಾ.ಸರಸ್ವತಿ ಸ್ವಾಗತಿಸಿದರು, ಡಾ.ಪಲ್ಲವಿ ನಾಯಕ್ ನಿರೂಪಿಸಿದರು, ಡಾ.ಸೌಪರ್ಣಿಕ ಉಪನ್ಯಾಸಕರ ಪರಿಚಯ ಮಾಡಿದರು. ಡಾ.ಕೆ.ಜಿ.ಶುಭ ವಂದಿಸಿದರು.
ಕಾರ್ಯಕ್ರಮದಲ್ಲಿ ದಿನನಿತ್ಯದ ಬದುಕಿನಲ್ಲಿ ಬಳಸಬಹುದಾದ ಪ್ರಮುಖ ಗಿಡಮೂಲಿಕೆಗಳು ಹಾಗೂ ಮನೆಮದ್ದುಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಗಿಡಮೂಲಿಕೆಗಳ ಪ್ರದರ್ಶನ ನಡೆಯಿತು. ಇದೇ ಸಂದರ್ಭ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026

*ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.23 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ 2026-27 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಮೀನುಗಾರಿಕೆ…

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*

ಸೆಪ್ಟೆಂಬರ್ 23, 2026

*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*

ಸೆಪ್ಟೆಂಬರ್ 23, 2026

*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*

ಸೆಪ್ಟೆಂಬರ್ 23, 2026

*ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*

ಸೆಪ್ಟೆಂಬರ್ 23, 2026

**ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 

ಸೆಪ್ಟೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.