Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  •  *ಮೂರು ವಿಶ್ವದಾಖಲೆ ಮಾಡಿದ ಮದೆನಾಡಿನ ಯುವ ಯೋಗಸಾಧಕಿ  – 18 ವಿಶ್ವದಾಖಲೆಗಳ ಹಿರಿಮೆಗೆ ಪಾತ್ರಳಾದ ಸಿಂಚನ*
  • *ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗಿನ  ಕೆ.ಎಸ್.ಭರತ್ ಕುಮಾರ್ ಅಧಿಕಾರ ಸ್ವೀಕಾರ*
  • *ಅಜ್ಜಿಕುಟ್ಟಿರ ಹಾಕಿ ನಮ್ಮೆ–2027 ಪೂರ್ವಭಾವಿ ಸಭೆ*
  • *ಅ. 3ರಂದು ‘ಕೊಡಗು ಶಕ್ತಿ ನಡಪು’ ; ಕೊಡಗಿನ ಭೂಮಿ, ಸಂಸ್ಕೃತಿ ಹಾಗೂ ಸಮುದಾಯದ ಸಂರಕ್ಷಣೆಗಾಗಿ ಪವಿತ್ರ ವಾರ್ಷಿಕ ಯಾತ್ರೆ*
  • *ಸೆ.25 ರಂದು ಅಣಬೆ ಕೃಷಿ ಕುರಿತು ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮ*
  • *ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*
  • *ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*
  • *ಕೈಲ್ ಮುಹೂರ್ತ ಜಂಬರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆಹ್ವಾನ*
  • *ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*
  • *ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗಿನ  ಕೆ.ಎಸ್.ಭರತ್ ಕುಮಾರ್ ಅಧಿಕಾರ ಸ್ವೀಕಾರ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಭಾರತ

*ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗಿನ  ಕೆ.ಎಸ್.ಭರತ್ ಕುಮಾರ್ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.25 : ಕರ್ನಾಟಕ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಮೂಲದ, ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಸ್.ಭರತ್ ಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಅವರು ಕೆ.ಎಸ್.ಭರತ್ ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇವರೊಂದಿಗೆ ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಉಷಾರಾಣಿ ಹಾಗೂ ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ವಿ.ಭವಾನಿ ಅವರು ಕೂಡ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಭಿನಂದಿಸಿದರು. ಈ ಮೂವರನ್ನು ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಹುದ್ದೆಗಳಿಗೆ ಪರಿಗಣಿಸುವಂತೆ ಸೆ.10ರಂದು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು. *ಕೊಡಗಿನ ಭರತ್ ಕುಮಾರ್* ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಸ್.ಭರತ್ ಕುಮಾರ್ ಅವರು ವಿರಾಜಪೇಟೆಯವರಾಗಿದ್ದು, ಬೋರೇಗೌಡ ಕಾಂಪ್ಲೆಕ್ಸ್ ಮಾಲೀಕರು, ಜಿಲ್ಲಾ ಪರಿಷತ್ ಮಾಜಿ ಸದಸ್ಯರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಬಿ.ಶಾಂತಪ್ಪ ಹಾಗೂ ರತ್ನಮ್ಮ ಅವರ ಜೇಷ್ಠ ಪುತ್ರರಾಗಿದ್ದಾರೆ. ಇವರು 2002 ರಿಂದ 2004 ರವರೆಗೆ ಜಮ್ಶೆಡ್ ಪುರದ ಟಾಟಾ ಸ್ಟೀಲ್ ಸಂಸ್ಥೆಯಲ್ಲಿ ಮುಖ್ಯ ಕಾನೂನು ಸಲಹೆಗಾರರಾಗಿ, 2004 ರಿಂದ 2015 ರವರೆಗೆ ಕರ್ನಾಟಕ ಹೈಕೋರ್ಟ್ ನ ವಕೀಲರಾಗಿ ಕಾರ್ಯನಿರ್ವಹಿಸಿದರು. 2015ರಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾಗಿ 2019 ರವರೆಗೆ ತುಮಕೂರು ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. 2019 ರಿಂದ 2020ರ ವರೆಗೆ ಮೈಸೂರು ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಣೆ, 2020 ರಿಂದ ಕರ್ನಾಟಕ ಹೈಕೋರ್ಟ್ ನಲ್ಲಿ ರಿಜಿಸ್ಟ್ರಾರ್ ಜುಡಿಶಿಯಲ್, ರಿಜಿಸ್ಟ್ರಾರ್ ವೆಜಿಲೆನ್ಸ್ ಹಾಗೂ ರಿಜಿಸ್ಟ್ರಾರ್ ಜನರಲ್ ಆಗಿ ಕಾರ್ಯನಿರ್ವಹಿಸಿದ್ದಾರೆ. 2026 ಜೂನ್ 1 ರಿಂದ ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಕರ್ನಾಟಕ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೆ.ಎಸ್.ಭರತ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಒಂದರಿಂದ ಏಳನೇ ತರಗತಿಯವರೆಗೆ ಅಮ್ಮತ್ತಿಯ ಗುಡ್ ಶಫರ್ಡ್ ಶಾಲೆ, ಎಂಟನೇ ತರಗತಿಯಿಂದ ಪಿಯುಸಿಯವರೆಗೆ ಅಳಿಕೆಯ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಾಂಗ ಮಾಡಿದರು. ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ವಕೀಲ ಪದವಿ ಪಡೆದರು. ಕಾಲೇಜ್ ನ ಕುಲಪತಿಗಳಾದ ಅಂದಿನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾದ ಆನಂದ್ ಅವರಿಂದ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿಯೊಂದಿಗೆ ಚಿನ್ನದ ಪದಕ ಪಡೆದಿರುವ ಹೆಗ್ಗಳಿಕೆಗೆ ಕೆ.ಎಸ್.ಭರತ್ ಕುಮಾರ್ ಪಾತ್ರಾಗಿದ್ದಾರೆ. ತಮ್ಮ ಪುತ್ರನ ಸಾಧನೆಯ ಬಗ್ಗೆ ಕೆ.ಬಿ.ಶಾಂತಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

 *ಮೂರು ವಿಶ್ವದಾಖಲೆ ಮಾಡಿದ ಮದೆನಾಡಿನ ಯುವ ಯೋಗಸಾಧಕಿ  – 18 ವಿಶ್ವದಾಖಲೆಗಳ ಹಿರಿಮೆಗೆ ಪಾತ್ರಳಾದ ಸಿಂಚನ*

ಸೆಪ್ಟೆಂಬರ್ 25, 2026

*ಅಜ್ಜಿಕುಟ್ಟಿರ ಹಾಕಿ ನಮ್ಮೆ–2027 ಪೂರ್ವಭಾವಿ ಸಭೆ*

ಸೆಪ್ಟೆಂಬರ್ 25, 2026

*ಅ. 3ರಂದು ‘ಕೊಡಗು ಶಕ್ತಿ ನಡಪು’ ; ಕೊಡಗಿನ ಭೂಮಿ, ಸಂಸ್ಕೃತಿ ಹಾಗೂ ಸಮುದಾಯದ ಸಂರಕ್ಷಣೆಗಾಗಿ ಪವಿತ್ರ ವಾರ್ಷಿಕ ಯಾತ್ರೆ*

ಸೆಪ್ಟೆಂಬರ್ 25, 2026

*ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗಿನ  ಕೆ.ಎಸ್.ಭರತ್ ಕುಮಾರ್ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಭಾರತ

ಮಡಿಕೇರಿ NEWS DESK ಸೆ.25 : ಕರ್ನಾಟಕ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಮೂಲದ, ಬೆಂಗಳೂರು…

*ಅಜ್ಜಿಕುಟ್ಟಿರ ಹಾಕಿ ನಮ್ಮೆ–2027 ಪೂರ್ವಭಾವಿ ಸಭೆ*

ಸೆಪ್ಟೆಂಬರ್ 25, 2026

*ಅ. 3ರಂದು ‘ಕೊಡಗು ಶಕ್ತಿ ನಡಪು’ ; ಕೊಡಗಿನ ಭೂಮಿ, ಸಂಸ್ಕೃತಿ ಹಾಗೂ ಸಮುದಾಯದ ಸಂರಕ್ಷಣೆಗಾಗಿ ಪವಿತ್ರ ವಾರ್ಷಿಕ ಯಾತ್ರೆ*

ಸೆಪ್ಟೆಂಬರ್ 25, 2026

*ಸೆ.25 ರಂದು ಅಣಬೆ ಕೃಷಿ ಕುರಿತು ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮ*

ಸೆಪ್ಟೆಂಬರ್ 24, 2026

*ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*

ಸೆಪ್ಟೆಂಬರ್ 24, 2026

*ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*

ಸೆಪ್ಟೆಂಬರ್ 24, 2026

*ಕೈಲ್ ಮುಹೂರ್ತ ಜಂಬರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆಹ್ವಾನ*

ಸೆಪ್ಟೆಂಬರ್ 24, 2026

*ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*

ಸೆಪ್ಟೆಂಬರ್ 24, 2026

*ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*

ಸೆಪ್ಟೆಂಬರ್ 24, 2026

*ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*

ಸೆಪ್ಟೆಂಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.