ನಾಪೋಕ್ಲು, NEWS DESK ಸೆ.26: ದಕ್ಷಿಣ ಕನ್ನಡ, ಕೊಡಗು ಮತ್ತು ಉಡುಪಿ ಜಿಲ್ಲೆಗಳ ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರ ಕ್ರೀಡಾಕೂಟದಲ್ಲಿ ಕೊಡಗಿನ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ವಿವಿಧ ವಿಭಾಗಗಳಲ್ಲಿ ಪಾಲ್ಗೊಂಡ ಕ್ರೀಡಾಪಟುಗಳು ಹಲವು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಿಟ್ಟಂಗಾಲ ಬೆಸಗೂರು ಗ್ರಾಮದ ಸೀತಮ್ಮ ಪ್ರೇಮ ಅವರು ಭಾರದ ಗುಂಡು ಎಸೆತ, ತಟ್ಟೆ ಎಸೆತ ಹಾಗೂ ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಮೂರು ಚಿನ್ನದ ಪದಕಗಳನ್ನು ಗಳಿಸಿದ್ದಾರೆ. ಕುಶಾಲನಗರ ತಾಲೂಕಿನ ಕೋಣನೂರು ಗ್ರಾಮದ ಆಶಾ ಅವರು ಭಾರದ ಗುಂಡು ಎಸೆತದಲ್ಲಿ ಪ್ರಥಮ, ಗುಂಡು ಎಸೆತದಲ್ಲಿ ದ್ವಿತೀಯ ಹಾಗೂ ತಟ್ಟೆ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಿಟ್ಟಂಗಾಲ ಬಾಳುಗೋಡು ನಿವಾಸಿ ಶಾಂತಿ ಬೊಳ್ಳಪ್ಪ ಅವರು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಪೆಟ್ಟೆಬೆಟ್ಟ ಚೊಟ್ಟೆಯಂಡ ಗ್ರಾಮದ ಗಗನ್ ಮೇದಪ್ಪ ಅವರು ಉದ್ದ ಜಿಗಿತ ಹಾಗೂ 800 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಹಾಗೂ ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಕೊಡಗಿನ ಕ್ರೀಡಾಪಟುಗಳ ಈ ಗಮನಾರ್ಹ ಸಾಧನೆಗೆ ವಿವಿಧ ವಲಯಗಳಿಂದ ಅಭಿನಂದನೆಗಳು ವ್ಯಕ್ತವಾಗಿವೆ. ವರದಿ : ದುಗ್ಗಳ ಸದಾನಂದ








