Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ, NEWS DESK ಸೆ.26: ವಿದ್ಯಾರ್ಥಿಗಳಿಗೆ ಕೇವಲ ಪುಸ್ತಕದ ಜ್ಞಾನ ನೀಡುವುದಷ್ಟೇ ಶಿಕ್ಷಕರ ಕರ್ತವ್ಯವಲ್ಲ. ಅವರಲ್ಲಿ ವ್ಯಕ್ತಿತ್ವ ವಿಕಸನ, ನೈತಿಕತೆ, ಗೌರವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಲಯನ್ಸ್ ಕ್ಲಬ್ ಪ್ರಾಂತೀಯ-6, ವಲಯ-3ರ ಅಧ್ಯಕ್ಷ ಮದನ್ ಮಾದಯ್ಯ ಹೇಳಿದರು.

ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶುಕ್ರವಾರ ಸಂಜೆ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಸಾಮಾಜಿಕ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಸ್ಥ ಹಾಗೂ ಸದೃಢ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮೌಲ್ಯಾಧಾರಿತ ಶಿಕ್ಷಣದ ಮೂಲಕ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ನೈತಿಕತೆ, ಗೌರವ ಮತ್ತು ಮಾನವೀಯ ಗುಣಗಳನ್ನು ಬೆಳೆಸುತ್ತಾರೆ. ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಅತ್ಯಂತ ಶ್ರೇಷ್ಠ ಸ್ಥಾನವಿದ್ದು, ಅಜ್ಞಾನವೆಂಬ ಕತ್ತಲೆಯನ್ನು ದೂರ ಮಾಡಿ ಜ್ಞಾನವೆಂಬ ಬೆಳಕಿನತ್ತ ಕರೆದೊಯ್ಯುವ ದಾರಿದೀಪವಾಗಿ ಶಿಕ್ಷಕರು ಕಾರ್ಯನಿರ್ವಹಿಸುತ್ತಾರೆ ಎಂದು ಹೇಳಿದರು.

ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುವುದರ ಜೊತೆಗೆ ವಿಜ್ಞಾನ, ಪರಿಸರ ಹಾಗೂ ವೈಜ್ಞಾನಿಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಪ್ರಗತಿಗೆ ತಮ್ಮನ್ನು ಸಮರ್ಪಿಸಿಕೊಂಡಿರುವ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಹಾಗೂ ಪರಿಸರ ಸಂಘಟಕ ಟಿ.ಜಿ.ಪ್ರೇಮಕುಮಾರ್ ಅವರ ಸೇವೆ ಅನನ್ಯವಾದುದು ಎಂದು ಮದನ್ ಮಾದಯ್ಯ ಶ್ಲಾಘಿಸಿದರು.

ಸುಂಟಿಕೊಪ್ಪ ಲಯನ್ಸ್ ಕ್ಲಬ್ ತನ್ನ 50 ವರ್ಷದ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಐದು ದಶಕಗಳ ಪಯಣದಲ್ಲಿ ಹಲವು ಜನಪರ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ನಡೆಸಿದೆ. ಮುಂದೆಯೂ ವೈವಿಧ್ಯಮಯ ಸಮಾಜಮುಖಿ ಕಾರ್ಯಗಳ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲಿ ಎಂದು ಆಶಿಸಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಪರಿಸರ ಪ್ರಶಸ್ತಿ ಹಾಗೂ ರಾಜ್ಯಮಟ್ಟದ ವಿಶೇಷ ವಿಜ್ಞಾನ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಟಿ.ಜಿ.ಪ್ರೇಮಕುಮಾರ್ ಹಾಗೂ ಅವರ ಪತ್ನಿಯನ್ನು ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಟಿ.ಜಿ.ಪ್ರೇಮಕುಮಾರ್, ಸಮಾಜದಲ್ಲಿ ಬೇರೂರಿರುವ ಅಜ್ಞಾನ, ಮೌಢ್ಯ ಹಾಗೂ ಕಂದಾಚಾರಗಳ ವಿರುದ್ಧ ಧ್ವನಿ ಎತ್ತುವ ಜತೆಗೆ ಯುವಜನರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಹೆಚ್ಚಿನ ಜನಜಾಗೃತಿ ಮೂಡಿಸಬೇಕು ಎಂದರು.

ಪರಿಸರ ಸಮಸ್ಯೆಗಳಿಗೆ ವೈಜ್ಞಾನಿಕ ವಿಧಾನದ ಮೂಲಕ ಪರಿಹಾರ ಕಂಡುಕೊಂಡು ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಶಿಕ್ಷಣ, ಆರೋಗ್ಯ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಸಾಮಾಜಿಕ ಸೇವಾ ಕಾರ್ಯಗಳಿಗೆ ಲಯನ್ಸ್ ಸಂಸ್ಥೆ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸುಂಟಿಕೊಪ್ಪ ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಜಿ.ಶ್ರೀನಿವಾಸ್ ಮಾತನಾಡಿ, ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ಅಕ್ಷರಜ್ಞಾನ ನೀಡುವುದರ ಜತೆಗೆ ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುತ್ತಾರೆ ಎಂದರು.

ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ 16 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸುವುದರೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಟಿ.ಜಿ.ಪ್ರೇಮಕುಮಾರ್ ಅವರ ಸೇವೆಯನ್ನು ಗುರುತಿಸಿ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಗೌರವಿಸಲಾಗಿದೆ ಎಂದು ಹೇಳಿದರು.

ಮಡಿಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ಎಲ್.ಮೋಹನ್ ಕುಮಾರ್ ಮಾತನಾಡಿದರು. ಸೋಮವಾರಪೇಟೆ ಲಯನ್ಸ್ ಕ್ಲಬ್ ಅಧ್ಯಕ್ಷ ಎ.ಎಸ್.ಮಹೇಶ್, ಕುಶಾಲನಗರ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎನ್.ಪವನ್ ಕುಮಾರ್, ಮಾಜಿ ಅಧ್ಯಕ್ಷ ಟಿ.ಕೆ.ರಾಜೀವ್, ಕಾರ್ಯದರ್ಶಿ ಗ್ಲೆನ್ ಮೆನೇಜಸ್, ಖಜಾಂಚಿ ಕೆ.ಪಿ.ಜಗನ್ನಾಥ್, ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಟಿ.ವಿ.ಶೈಲಾ ಸೇರಿದಂತೆ ಲಯನ್ಸ್ ಕ್ಲಬ್ ಪದಾಧಿಕಾರಿಗಳು, ಸದಸ್ಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಟಿ.ಕೆ.ರಾಜೀವ್ ಹಾಗೂ ಅಂಜಲಿ ಯಶೋಧರ ಅತಿಥಿಗಳ ಪರಿಚಯ ಮಾಡಿದರು. ಕ್ಲಬ್ ಕಾರ್ಯದರ್ಶಿ ಗ್ಲೆನ್ ಮೆನೇಜಸ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.26: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು) ವತಿಯಿಂದ ದಾವಣಗೆರೆಯಲ್ಲಿ…

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.