Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ, NEWS DESK ಸೆ.27: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರು ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡುವುದೇ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್) ಉದ್ದೇಶವಾಗಿದೆ ಎಂದು ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಕೆ.ಪಿ. ಚಂದ್ರ ಹೇಳಿದರು.

ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಘಟಕದ ವತಿಯಿಂದ ಆಯೋಜಿಸಿದ್ದ ಎನ್‌ಎಸ್‌ಎಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎನ್‌ಎಸ್‌ಎಸ್ ಯುವಜನರಲ್ಲಿ ನಿಸ್ವಾರ್ಥ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ ಹಾಗೂ ಸಮುದಾಯ ಅಭಿವೃದ್ಧಿಯ ಪ್ರಜ್ಞೆಯನ್ನು ಬೆಳೆಸುವ ಪ್ರಮುಖ ಸಂಸ್ಥೆಯಾಗಿದೆ. ಎನ್‌ಎಸ್‌ಎಸ್ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳು ಸಮಯಪ್ರಜ್ಞೆ, ಶಿಸ್ತು ಹಾಗೂ ಸೇವಾ ಮನೋಭಾವವನ್ನು ಬೆಳೆಸಿಕೊಂಡು ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸಿಕೊಂಡರೆ ಉತ್ತಮ ಸಮಾಜ ಹಾಗೂ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಹೇಳಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆಶಯದಂತೆ, ಗಾಂಧೀಜಿ ಜನ್ಮ ಶತಾಬ್ದಿ ವರ್ಷವಾದ 1969ರ ಸೆಪ್ಟೆಂಬರ್ 24ರಂದು ರಾಷ್ಟ್ರೀಯ ಸೇವಾ ಯೋಜನೆ ಅಸ್ತಿತ್ವಕ್ಕೆ ಬಂದಿತು. ಇಂದು ದೇಶದ ಅನೇಕ ಶಾಲಾ-ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಎನ್‌ಎಸ್‌ಎಸ್ ಸ್ವಯಂಸೇವಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಶ್ರೀಮತಿ ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ 1985ರಿಂದಲೇ ಎನ್‌ಎಸ್‌ಎಸ್ ಘಟಕ ಕಾರ್ಯನಿರ್ವಹಿಸುತ್ತಿದ್ದು, ವಿವಿಧ ಸಾಮಾಜಿಕ ಹಾಗೂ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಹೆಮ್ಮೆಯ ಸಂಗತಿ ಎಂದು ಪ್ರಾಂಶುಪಾಲ ಚಂದ್ರ ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸಿ.ಜಿ. ಮಂದಪ್ಪ ಮಾತನಾಡಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವೆ, ಸಮುದಾಯದೊಂದಿಗೆ ಭಾಗವಹಿಸುವಿಕೆ, ಶಿಸ್ತು ಹಾಗೂ ಸಮಾಜದ ಕಡೆಗಿನ ಜವಾಬ್ದಾರಿಯ ಮಹತ್ವವನ್ನು ಬೆಳೆಸುತ್ತದೆ ಎಂದರು.

“ನಾನಲ್ಲ, ನೀನು” ಎಂಬ ಎನ್‌ಎಸ್‌ಎಸ್‌ನ ಧ್ಯೇಯವಾಕ್ಯವು ಸ್ವಾರ್ಥಕ್ಕಿಂತ ಸಮಾಜ ಹಾಗೂ ಇತರರ ಒಳಿತಿಗೆ ಆದ್ಯತೆ ನೀಡುವ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ವಿದ್ಯಾರ್ಥಿಗಳು ಸೇವಾ ಪ್ರಜ್ಞೆ, ಸಹಾನುಭೂತಿ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಲು ಎನ್‌ಎಸ್‌ಎಸ್ ಪ್ರೇರಣೆ ನೀಡುತ್ತದೆ ಎಂದು ಹೇಳಿದರು.

ರಾಜ್ಯಶಾಸ್ತ್ರ ಉಪನ್ಯಾಸಕಿ ರಮ್ಯ ಪ್ರಾಸ್ತಾವಿಕ ಭಾಷಣ ಮಾಡಿದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಕೆ.ಯು. ರೀಟಾ, ಎನ್‌ಎಸ್‌ಎಸ್ ಅಧಿಕಾರಿ ಮನೋಹರ ಹಾಗೂ ಸಂಸ್ಥೆಯ ಉಪನ್ಯಾಸಕರು ಉಪಸ್ಥಿತರಿದ್ದರು.

ಕುಮಾರಿ ಮಾನಸ ಸ್ವಾಗತಿಸಿದರು. ಕುಮಾರಿ ಹನಿ ವಂದಿಸಿದರು. ಕುಮಾರಿ ಸುಕನ್ಯ ಕಾರ್ಯಕ್ರಮ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.27: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರು ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡುವುದೇ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್)…

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.