ಕುಂಜಿಲ, NEWS DESK ಸೆ.27: ಖುತುಬುಲ್ ಆರಿಫೀನ್ ರಾತೀಬ್ ಸಂಘಟನೆಯ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್ ಸೆಪ್ಟೆಂಬರ್ 29ರಂದು ಸಂಜೆ 6 ಗಂಟೆಗೆ ಪಯ್’ನರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಪಯ್’ನರಿ ಮಖಾಮ್ ಝಿಯಾರತ್, ಮುಹಿಯುದ್ದೀನ್ ರಾತೀಬ್, ರಿಫಾಯಿಯ ಕುತ್ತ್ ರಾತೀಬ್ ಹಾಗೂ ದುವಾ ಮಜ್ಲಿಸ್ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಸಾರ್ವಜನಿಕರಿಗೆ ಕಾರ್ಯಕ್ರಮದ ಕುರಿತು ಮಾಹಿತಿ ತಲುಪಿಸುವುದು, ಸಮುದಾಯದ ಜನರನ್ನು ಒಗ್ಗೂಡಿಸುವುದು ಹಾಗೂ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕಾರ್ಯಕ್ರಮದ ಅಂತ್ಯದಲ್ಲಿ ತಬರ್ರುಖ್ ವಿತರಣೆ ನಡೆಯಲಿದ್ದು, ಮಹಿಳೆಯರಿಗಾಗಿ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.








