Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹಿಂದೂ ಮುಖಂಡ ರಘು ಸಕಲೇಶಪುರ ಹೇಳಿದರು.

ವಿರಾಜಪೇಟೆ–ಮೂರ್ನಾಡು ರಸ್ತೆಯ ಕಾವೇರಿ ಗಣೇಶೋತ್ಸವ ಸಮಿತಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ರಾಂತಿಕಾರಿಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಉದ್ದೇಶದಿಂದ ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವಕ್ಕೆ ಚಾಲನೆ ನೀಡಿದ್ದರು ಎಂದು ಹೇಳಿದರು.

ವಿರಾಜಪೇಟೆ ತಾಲೂಕಿನಲ್ಲಿ ಗಣೇಶೋತ್ಸವ 165 ವರ್ಷಗಳನ್ನು ಪೂರೈಸಿದ್ದು, ಇದೇ ರೀತಿಯ ಒಗ್ಗಟ್ಟು ಮುಂದುವರಿದರೆ ಮುಂದಿನ ಸಾವಿರಾರು ವರ್ಷಗಳವರೆಗೂ ಆಚರಣೆ ಮುಂದುವರಿಯಲಿದೆ ಎಂದರು.

ಕೊಡಗಿನ ಭೂಮಿ, ಸಂಸ್ಕೃತಿ ಹಾಗೂ ಸ್ಥಳೀಯರ ಹಿತಾಸಕ್ತಿಯನ್ನು ಕಾಪಾಡುವ ಅಗತ್ಯವಿದೆ. ಹೊರ ರಾಜ್ಯಗಳಿಂದ ಬಂದು ಭೂಮಿ ಖರೀದಿಸುವುದು ಸೇರಿದಂತೆ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಸ್ಥಳೀಯರು ಜಾಗೃತರಾಗಬೇಕು ಎಂದು ಅವರು ಹೇಳಿದರು. ಅಸ್ಸಾಂ ಮೂಲದ ಕಾರ್ಮಿಕರ ಹೆಸರಿನಲ್ಲಿ ಅಕ್ರಮವಾಗಿ ನೆಲೆಸಿರುವವರ ಕುರಿತು ಸೂಕ್ತ ಪರಿಶೀಲನೆ ನಡೆಸಬೇಕು ಹಾಗೂ ಸ್ಥಳೀಯ ಕಾರ್ಮಿಕರಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಕೊಡಗು ಕೇವಲ ವೀರ ಯೋಧರ ನಾಡಲ್ಲ, ವೀರ ಹಿಂದುತ್ವದ ನಾಡು ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದು ರಘು ಸಕಲೇಶಪುರ ಹೇಳಿದರು.

ಗಣೇಶೋತ್ಸವ ರಾಷ್ಟ್ರೀಯ ಹಬ್ಬವಾಗುವ ಬಗ್ಗೆ ಚಿಂತನೆ ಅಗತ್ಯ: ಯತ್ನಾಳ್

ಬಿಜಾಪುರ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಸೇನೆಗೆ ಅಪ್ರತಿಮ ವೀರರನ್ನು ನೀಡಿದ ಕೊಡಗು ಹಾಗೂ ಕಾವೇರಿಯ ಉಗಮಸ್ಥಳವಾಗಿರುವ ಈ ಪುಣ್ಯಭೂಮಿಯ ಸಮೃದ್ಧಿ ಮತ್ತು ಸಂಸ್ಕಾರ ತಮ್ಮನ್ನು ಆಕರ್ಷಿಸಿದೆ ಎಂದರು.

ಎಲ್ಲೆಡೆ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವಂತಾಗಬೇಕು. ಗಣೇಶೋತ್ಸವವನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸುವ ಕುರಿತು ಚಿಂತನೆ ನಡೆಸಬೇಕು. ಕಾನೂನಿನ ತೊಡಕುಗಳಿಲ್ಲದೆ ಮುಕ್ತವಾಗಿ ಹಬ್ಬ ಆಚರಿಸಲು ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ಅನಗತ್ಯ ಅಪಪ್ರಚಾರಗಳಿಗೆ ಅವಕಾಶ ನೀಡದೆ ಹಿಂದೂ ಬಾಂಧವರು ಒಗ್ಗೂಡಿ ಹಬ್ಬ ಆಚರಿಸಬೇಕು. ಬಾಲಗಂಗಾಧರ ತಿಲಕರು ಯಾವ ಉದ್ದೇಶದಿಂದ ಸಾಮೂಹಿಕ ಗಣೇಶೋತ್ಸವ ಆರಂಭಿಸಿದರು ಎಂಬುದನ್ನು ಅರಿತು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದರು.

ಇತರ ಧರ್ಮಗಳ ಹಬ್ಬಗಳಿಗೆ ಹಿಂದೂಗಳು ತೊಂದರೆ ನೀಡದಂತೆ, ಅದೇ ರೀತಿ ಇತರ ಧರ್ಮಗಳವರೂ ಹಿಂದೂಗಳ ಹಬ್ಬಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಯತ್ನಾಳ್ ಹೇಳಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರ ಕೃತಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಓದಿ, ಅವರ ಆಶಯಗಳನ್ನು ಅರಿತುಕೊಳ್ಳಬೇಕು. ಅಂಬೇಡ್ಕರ್ ಅವರು ಅಸ್ಪೃಶ್ಯತೆ ಮತ್ತು ಅಸಮಾನತೆಯ ವಿರುದ್ಧ ಹೋರಾಡಿದ್ದರೇ ಹೊರತು ಹಿಂದುತ್ವದ ವಿರುದ್ಧವಾಗಿರಲಿಲ್ಲ ಎಂದು ಅವರು ಹೇಳಿದರು.

ದೇಶದ ಏಕತೆ ಹಾಗೂ ಸಾಮಾಜಿಕ ಸಾಮರಸ್ಯದ ದೃಷ್ಟಿಯಿಂದ ಹಿಂದೂ ಸಮಾಜ ಒಗ್ಗಟ್ಟಿನಿಂದ ಇರಬೇಕು ಎಂದು ಯತ್ನಾಳ್ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಕೀಲ ಕೃಷ್ಣ, ಹಿಂದೂ ಮುಖಂಡ ವಿವೇಕ್ ರೈ ಹಾಗೂ ಕಾವೇರಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಆನಂದ ನಂಜಪ್ಪ ಉಪಸ್ಥಿತರಿದ್ದರು. ಅತಿಥಿಗಳನ್ನು ಮಂಗಳವಾದ್ಯ ಹಾಗೂ ಪುಷ್ಪವೃಷ್ಟಿಯೊಂದಿಗೆ ವೇದಿಕೆಗೆ ಬರಮಾಡಿಕೊಳ್ಳಲಾಯಿತು.

ಕಾವೇರಿ ಗಣೇಶೋತ್ಸವ ಸಮಿತಿಯ ಸರ್ವ ಸದಸ್ಯರು, ಭಕ್ತಾದಿಗಳು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಯಘೋಷಗಳೊಂದಿಗೆ ಸಂಭ್ರಮಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.