Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*
  • *ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*
  • *ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*
  • *ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*
  • *ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*
  • *ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*
  • *ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*
  • *ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ, NEWS DESK  ಸೆ.29: ಕೊಡಗಿನ ಕೆಂಬಟ್ಟಿ ಸಮುದಾಯವು ತನ್ನದೇ ಆದ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯನ್ನು ಹೊಂದಿದ್ದು, ಸಮುದಾಯದ ಆಚಾರ-ವಿಚಾರ ಮತ್ತು ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸುವ ಅಗತ್ಯವಿದೆ ಎಂದು ಅಖಿಲ ಕೊಡಗು ಕೆಂಬಟ್ಟಿ ಸಮಾಜದ ಅಧ್ಯಕ್ಷ ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ ಹೇಳಿದರು.

ವಿರಾಜಪೇಟೆಯ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನ್ಯೂಸ್ 3 ಡಿಜಿಟಲ್ ಮೀಡಿಯಾ ವತಿಯಿಂದ ಕೆಂಬಟ್ಟಿ ಸಮುದಾಯದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ, ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೆಂಬಟ್ಟಿ ಸಮುದಾಯವು ಕೊಡಗು ಜಿಲ್ಲೆಯಲ್ಲಿ ಮಾತ್ರ ಕಂಡುಬರುವ ಅತ್ಯಂತ ಪ್ರಾಚೀನ ಹಾಗೂ ಮೂಲ ಜನಾಂಗಗಳಲ್ಲಿ ಒಂದಾಗಿದೆ. ಇತರ ಸಮುದಾಯಗಳೊಂದಿಗೆ ಸೌಹಾರ್ದಯುತವಾಗಿ ಜೀವನ ನಡೆಸುತ್ತಿರುವ ಕೆಂಬಟ್ಟಿ ಸಮುದಾಯದವರು ಉತ್ತಮ ಶಿಕ್ಷಣ ಪಡೆದು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಸಮುದಾಯದವರು ಹೃದಯವಂತರಾಗಿದ್ದು, ತಮ್ಮ ಆಚಾರ-ವಿಚಾರ ಹಾಗೂ ಸಂಪ್ರದಾಯಗಳನ್ನು ನಿರಂತರವಾಗಿ ಪಾಲಿಸಿಕೊಂಡು ಬರುತ್ತಿದ್ದಾರೆ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ನಿವೃತ್ತ ತಹಸೀಲ್ದಾರ್ ಚಟ್ಟಕುಟ್ಟಡ ಪೊನ್ನಪ್ಪ ಮಾತನಾಡಿ, ನ್ಯೂಸ್ 3 ಡಿಜಿಟಲ್ ಮೀಡಿಯಾದ ಮುಖ್ಯಸ್ಥ ಶಶಿ ಅಚ್ಚಪ್ಪ ಅವರು ಹಲವಾರು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಮೀಡಿಯಾ ಮುಂದಿನ ದಿನಗಳಲ್ಲಿ ರಾಜ್ಯಮಟ್ಟಕ್ಕೆ ವಿಸ್ತರಣೆಯಾಗಲಿ ಎಂದು ಆಶಿಸಿದರು. ಸಮುದಾಯದವರಲ್ಲಿ ಒಗ್ಗಟ್ಟು ಮೂಡಿಸಲು ಹಾಗೂ ಎಲ್ಲರೂ ಒಂದೆಡೆ ಸೇರಲು ಇಂತಹ ಕಾರ್ಯಕ್ರಮಗಳು ಅಗತ್ಯ. ಸಮುದಾಯದವರು ಮೀಸಲಾತಿಯ ಸೌಲಭ್ಯ ಪಡೆದು ಉದ್ಯೋಗದಲ್ಲಿ ಪ್ರಾಶಸ್ತ್ಯ ಪಡೆಯಬೇಕು ಎಂದರು.

ಬೆಂಗಳೂರಿನ ಉದ್ಯಮಿ ಚಿಮ್ಮಿಕುಟ್ಟಡ ನಿತೇಶ್ ಮಾತನಾಡಿ, ಕೆಂಬಟ್ಟಿ ಸಮುದಾಯದಲ್ಲಿ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳು ನಡೆಯಬೇಕು. ಯುವ ಪೀಳಿಗೆ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು. ಸರ್ಕಾರದ ಅನುದಾನಗಳು ಸಮುದಾಯದವರಿಗೆ ನೇರವಾಗಿ ತಲುಪುವಂತಾಗಬೇಕು. ‘ನಮ್ಮ ನಡೆ ನಮ್ಮ ಅಸ್ತಿತ್ವದ ಕಡೆ’ ಎಂಬುದು ಸಮುದಾಯದ ಧ್ಯೇಯವಾಗಬೇಕು. ಸಮುದಾಯದ ಕುಲಶಾಸ್ತ್ರ ಅಧ್ಯಯನ ನಡೆಯಬೇಕಾದ ಅಗತ್ಯವಿದ್ದು, ಸರ್ಕಾರದ ಮುಂದೆ ಹಕ್ಕುಗಳನ್ನು ಮಂಡಿಸುವ ಮೂಲಕ ಸೌಲಭ್ಯಗಳನ್ನು ಪಡೆಯಬೇಕು ಎಂದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಕೂವಳೆಕುಟ್ಟಡ ಗಿರೀಶ್ ಮಾತನಾಡಿ, ಸಮುದಾಯದವರು ಒಗ್ಗಟ್ಟಾಗಬೇಕು. ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿರುವುದು ಮಹತ್ವದ ಕಾರ್ಯಕ್ರಮವಾಗಿದ್ದು, ಮುಂದಿನ ದಿನಗಳಲ್ಲಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದರು.

ಕೆಂಬಟ್ಟಿ ಪೊಮ್ಮಕ್ಕಡ ಕೂಟದ ಗೌರವ ಅಧ್ಯಕ್ಷೆ ಮೊಟ್ಟಕುಟ್ಟಡ ಬೋಜಮ್ಮ ಮಾತನಾಡಿ, ಸಮುದಾಯದ ಸಂಘಟನೆ ಸದೃಢವಾಗಬೇಕು. ಜಾತಿವಾರು ಪಟ್ಟಿಯಲ್ಲಿ ಸಮುದಾಯದ ಹೆಸರು ಸೇರ್ಪಡೆಯಾಗಬೇಕು. ಸರ್ಕಾರದ ಸೌಲಭ್ಯಗಳು ಸಮುದಾಯದವರಿಗೆ ತಲುಪುವಂತಾಗಬೇಕು. ಸಮುದಾಯದ ಎಲ್ಲರೂ ಮುಖ್ಯವಾಹಿನಿಗೆ ಬರಬೇಕಾದ ಅಗತ್ಯವಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನ್ಯೂಸ್ 3 ಡಿಜಿಟಲ್ ಮೀಡಿಯಾದ ಮುಖ್ಯಸ್ಥ ಚಟ್ಟಕುಟ್ಟಡ ಶಶಿ ಅಚ್ಚಪ್ಪ ಮಾತನಾಡಿ, ಮಕ್ಕಳು ಸ್ಪರ್ಧೆಗಳು ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪೋಷಕರು ಪ್ರೋತ್ಸಾಹ ನೀಡಬೇಕು. ಸಮುದಾಯದವರು ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಗಟ್ಟಿಯಾಗಬೇಕು. ಸಮುದಾಯದ ಪರವಾಗಿರುವ ದಾಖಲೆಗಳು ಅತ್ಯಂತ ಮಹತ್ವದ್ದಾಗಿದ್ದು, ಈ ನಿಟ್ಟಿನಲ್ಲಿ ಕುಲಶಾಸ್ತ್ರ ಅಧ್ಯಯನ ನಡೆಯಬೇಕು. ಕುಲಶಾಸ್ತ್ರ ಅಧ್ಯಯನದಿಂದ ಮಾತ್ರ ಸಮುದಾಯದ ಇತಿಹಾಸ ಹಾಗೂ ಅಸ್ತಿತ್ವವನ್ನು ದಾಖಲಿಸಲು ಸಾಧ್ಯ. ಸಮುದಾಯದವರು ಒಗ್ಗಟ್ಟಿನ ಮಂತ್ರವನ್ನು ಜಪಿಸುವ ಮೂಲಕ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಸಮುದಾಯದ ಚವರೆಕುಟ್ಟಡ ಸುಬ್ರಮಣಿ ಅವರು ಈ ಸಂದರ್ಭದಲ್ಲಿ ಮಾತನಾಡಿದರು.

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಬಿಲ್ಲರಿಕುಟ್ಟಡ ನಯನ, ದ್ವಿತೀಯ ಬಹುಮಾನ ಪಡೆದ ಚಿಮ್ಮಿಕುಟ್ಟಡ ಶಿವಾನಿ ಹಾಗೂ ತೃತೀಯ ಬಹುಮಾನ ಪಡೆದ ಬಿಲ್ಲರಿಕುಟ್ಟಡ ಸ್ನೇಹ ಅವರನ್ನು ಅತಿಥಿಗಳು ಸನ್ಮಾನಿಸಿ ಬಹುಮಾನ ನೀಡಿ ಗೌರವಿಸಿದರು. ಮುಖ್ಯ ಅತಿಥಿ ಚಟ್ಟಕುಟ್ಟಡ ಪೊನ್ನಪ್ಪ ಅವರು ವಿಜೇತ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಪ್ರೋತ್ಸಾಹಕರ ಬಹುಮಾನ ನೀಡಿದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯ ಅತಿಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಲಾವಣ್ಯ ಬೋರ್ಕರ್ ಅವರಿಂದ ಸ್ವಾಗತ ನೃತ್ಯ ಪ್ರದರ್ಶನ ನಡೆಯಿತು. ಬಿದ್ದಣಕುಟ್ಟಡ ರೋಹಿಣಿ ಅವರು ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಈ ಸಂದರ್ಭದಲ್ಲಿ ಕೊಡಗು ಕೆಂಬಟ್ಟಿ ಜನಾಂಗದ ಸಂಘದ ಸದಸ್ಯರು ಹಾಗೂ ಸಮುದಾಯದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK  ಸೆ.29: ಕೊಡಗಿನ ಕೆಂಬಟ್ಟಿ ಸಮುದಾಯವು ತನ್ನದೇ ಆದ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯನ್ನು ಹೊಂದಿದ್ದು, ಸಮುದಾಯದ…

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*

ಸೆಪ್ಟೆಂಬರ್ 29, 2026

*ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*

ಸೆಪ್ಟೆಂಬರ್ 29, 2026

*ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*

ಸೆಪ್ಟೆಂಬರ್ 29, 2026

*ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*

ಸೆಪ್ಟೆಂಬರ್ 29, 2026

*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.