
ನಾಪೋಕ್ಲು, NEWS DESK ಸೆ.30: ಗೋವಾದ ವಾಸ್ಕೊ ರವೀಂದ್ರ ಭವನದಲ್ಲಿ ನಡೆದ ‘ಕನ್ನಡ ಸಾಂಸ್ಕೃತಿಕ ಸಮ್ಮೇಳನ ಗೋವಾ 2026’ ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊಡಗಿನ ಬಹುಮುಖ ಪ್ರತಿಭೆ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಅವರಿಗೆ ರಾಷ್ಟ್ರೀಯ ಸಮಾಜ ಸೇವಾ ಕಲಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೀನಿಧಿ ಫೌಂಡೇಶನ್ (ರಿ.) ಕರ್ನಾಟಕ ಹಾಗೂ ಪ್ರತಿಫಲ ಫೌಂಡೇಶನ್ (ರಿ.) ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾಜ ಸೇವೆ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿನ ಅವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.
ದುಗ್ಗಳ ಸದಾನಂದ








