Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
  • *ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*
  • *ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*
  • *ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಅ.1: ಎಸ್‌ಐಆರ್ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ ತಳೂರು ಎ. ಕಿಶೋರ್ ಕುಮಾರ್, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರ ನೇರವಾಗಿ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಸಂವಿಧಾನದಡಿ ಚುನಾವಣಾ ಆಯೋಗ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಸಂಸ್ಥೆಯಾಗಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆ ಚುನಾವಣಾ ಪ್ರಕ್ರಿಯೆಯ ಭಾಗವಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇದ್ದರೂ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ಖಂಡನೀಯ ಎಂದು ಹೇಳಿದರು.

ಎಸ್‌ಐಆರ್ ಕುರಿತು ಕಳೆದ ಹಲವು ತಿಂಗಳುಗಳಿಂದ ಮತದಾರರಿಗೆ ಮಾಹಿತಿ ಹಾಗೂ ಜಾಗೃತಿ ಮೂಡಿಸಲಾಗುತ್ತಿದೆ. ಅರ್ಹ ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, ರಾಜಕೀಯ ಪಕ್ಷಗಳಿಗೂ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಲಾಗಿದೆ. ಚುನಾವಣಾ ಆಯೋಗವು ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಿ, ವಿವಿಧ ಹಂತಗಳಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಂಡಿದೆ. ಈ ವಿಚಾರವನ್ನು ಅರ್ಥಮಾಡಿಕೊಂಡು ಪ್ರತಿಭಟನೆಯಿಂದ ಹಿಂದೆ ಸರಿದು ರಾಜ್ಯದ ಅಭಿವೃದ್ಧಿಯತ್ತ ಕಾಂಗ್ರೆಸ್ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಎಸ್‌ಐಆರ್‌ಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಪಾತ್ರವಿಲ್ಲದಿದ್ದರೂ ಕಾಂಗ್ರೆಸ್ ಅವರನ್ನು ಟೀಕಿಸುತ್ತಿದೆ ಎಂದು ಆರೋಪಿಸಿದ ಅವರು, ಇವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್ ಹತಾಶಗೊಂಡಿದೆ ಎಂದು ಟೀಕಿಸಿದರು.

ನಟ ಪ್ರಕಾಶ್ ರಾಜ್ ಅವರು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ವಾಸ್ತವಾಂಶ ತಿಳಿದುಕೊಳ್ಳದೆ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದ ಕಿಶೋರ್ ಕುಮಾರ್, ಕೊಡಗಿಗೆ ಆಗಮಿಸಿ ಜನರಲ್ಲಿ ಗೊಂದಲ ಮೂಡಿಸುವ ರೀತಿಯ ಹೇಳಿಕೆಗಳನ್ನು ನೀಡುವುದನ್ನು ಬಿಜೆಪಿ ಖಂಡಿಸುತ್ತದೆ ಎಂದರು. ಅಂತಿಮ ಮತದಾರರ ಪಟ್ಟಿ ಪ್ರಕಟವಾಗುವ ಮೊದಲೇ ಇಂತಹ ಹೇಳಿಕೆಗಳನ್ನು ನೀಡುವುದರಿಂದ ಜನರಲ್ಲಿ ಗೊಂದಲ ಸೃಷ್ಟಿಯಾಗಬಹುದು ಎಂದು ಹೇಳಿದರು.

ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಚುನಾವಣಾ ಆಯೋಗದ ಅಧಿಕೃತ ಪೋರ್ಟಲ್ ಮೂಲಕ ಪರಿಶೀಲಿಸಬಹುದು. ಅರ್ಹ ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆಗಳಿಗೆ ಚುನಾವಣಾ ಆಯೋಗ ಸಂಬಂಧಿತ ಸೇವೆಗಳನ್ನು ಒದಗಿಸಿದೆ. ಎಸ್‌ಐಆರ್ ಕುರಿತು ವಾಸ್ತವಾಂಶಗಳನ್ನು ಪರಿಶೀಲಿಸಿ, ಜನರಲ್ಲಿ ಗೊಂದಲ ಉಂಟಾಗದಂತೆ ರಾಜಕೀಯ ಪಕ್ಷಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಬಿಟ್ಟಿ ಭಾಗ್ಯಗಳನ್ನು ನೀಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದ್ದು, ಗುತ್ತಿಗೆದಾರರಿಗೆ ಹಣ ನೀಡಲು ಸಾಧ್ಯವಾಗದೆ ಪರದಾಡುತ್ತಿದೆ ಎಂದು ಕಿಶೋರ್ ಕುಮಾರ್ ಆರೋಪಿಸಿದರು. ರಾಜ್ಯದ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಪ್ರತಿಭಟನೆ ನಡೆಸುವುದರಲ್ಲೇ ಕಾಲಹರಣ ಮಾಡುತ್ತಿದೆ ಎಂದು ಟೀಕಿಸಿದರು.

ಮತ್ತೊಬ್ಬ ಜಿಲ್ಲಾ ವಕ್ತಾರ ಶಾಂತೆಯಂಡ ರವಿ ಕುಶಾಲಪ್ಪ ಮಾತನಾಡಿ, ಕಾಂಗ್ರೆಸ್, ಕಾಕ್ರೋಚ್ ಹಾಗೂ ಪ್ರಕಾಶ್ ರಾಜ್‌ರಂತಹ ವ್ಯಕ್ತಿಗಳು ಒಗ್ಗಟ್ಟಿನ ಸಮಾಜವನ್ನು ವಿಭಜಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸಾಮರಸ್ಯದ ಸಮಾಜವನ್ನು ಹೊಂದಿರುವ ಕೊಡಗು ಜಿಲ್ಲೆಗೆ ಪ್ರಕಾಶ್ ರಾಜ್ ಬಾರದಂತೆ ತಡೆಯಬೇಕು ಎಂದು ಆಗ್ರಹಿಸಿದರು.

ಚುನಾವಣಾ ಆಯೋಗದ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಯನ್ನು ದಹಿಸಿದ ಕಾಂಗ್ರೆಸ್ಸಿಗರ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ವಕ್ತಾರ ಬಿ.ಕೆ. ಅರುಣ್ ಕುಮಾರ್ ಮಾತನಾಡಿ, ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಎಸ್‌ಐಆರ್ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ ಎಂದು ಆರೋಪಿಸಿದರು. ನಟ ಪ್ರಕಾಶ್ ರಾಜ್ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಕೊಡಗು ಜಿಲ್ಲೆಗೆ ಬಂದು ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡಿದ್ದಾರೆ ಎಂದು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಾಧ್ಯಮ ವಕ್ತಾರ ಶಜಿಲ್ ಕೃಷ್ಣನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.1: ಕೊಡಗು ಜಿಲ್ಲಾ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಸ್ಥಾನ ಕೈತಪ್ಪಿರುವ ಕುರಿತು ಕೊಡಗು ಜಿಲ್ಲಾ…

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026

*ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*

ಅಕ್ಟೋಬರ್ 1, 2026

*ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*

ಅಕ್ಟೋಬರ್ 1, 2026

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.