Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
  • *ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*
  • *ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*
  • *ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ, NEWS DESK ಅ.1: ಮಕ್ಕಳು ಕೇವಲ ವಿದ್ಯಾಭ್ಯಾಸ ಮಾಡುವುದಷ್ಟೇ ಅಲ್ಲದೆ, ಗುರು–ಹಿರಿಯರನ್ನು ಗೌರವಿಸುವ ಮೂಲಕ ಉತ್ತಮ ನಡವಳಿಕೆ ಹಾಗೂ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಶಿಕ್ಷಣ ಇಲಾಖೆಯ ನಿವೃತ್ತ ವಿಷಯ ಪರಿವೀಕ್ಷಕ ಎ.ಎಂ. ರವಿ ಚಂಗಪ್ಪ ಕರೆ ನೀಡಿದರು.

ಗುರುವಾರ 7ನೇ ಹೊಸಕೋಟೆಯ ದೀಪ್ತಿ ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶಾಲಾ ವಿದ್ಯಾರ್ಥಿಗಳ ಅಜ್ಜ–ಅಜ್ಜಿಯರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಉತ್ತಮ ನಡವಳಿಕೆಯನ್ನು ರೂಢಿಸಿಕೊಂಡು ಉತ್ತಮ ವ್ಯಕ್ತಿತ್ವದವರಾಗಿ, ಸಮಾಜದ ಜವಾಬ್ದಾರಿಯುತ ನಾಗರಿಕರಾಗಿ ಬಾಳಬೇಕು. ಅಕ್ಟೋಬರ್ 1ರಂದು ವಿಶ್ವ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಸಂಸ್ಥೆಯಲ್ಲಿ ಹಿರಿಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿರುವುದು ಶ್ಲಾಘನೀಯ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ 7ನೇ ಹೊಸಕೋಟೆ ಸಂತ ಸೆಬಾಸ್ಟಿಯನ್ ದೇವಾಲಯದ ಧರ್ಮಗುರು ರೇ. ಫಾ. ಅಬ್ರಹಾಂ ಪಟೇಲ್ ಮಾತನಾಡಿ, ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸಂಸ್ಥೆಯಲ್ಲಿ ಅಜ್ಜ–ಅಜ್ಜಿಯರ ದಿನವನ್ನು ಆಯೋಜಿಸಲಾಗಿದೆ. ಮಕ್ಕಳು ತಮ್ಮ ಪೋಷಕರೊಂದಿಗೆ ಅಜ್ಜ–ಅಜ್ಜಿಯರನ್ನು ಶಾಲೆಗೆ ಕರೆತರುವ ಮೂಲಕ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿರುವುದು ಸಂತಸದ ವಿಚಾರ ಎಂದರು.

ನಮ್ಮ ಬಾಲ್ಯದಲ್ಲಿ ತಂದೆ–ತಾಯಿಗಿಂತಲೂ ಅಜ್ಜ–ಅಜ್ಜಿಯರು ನಮ್ಮ ಜೀವನದಲ್ಲಿ ಪ್ರಮುಖ ಸ್ಥಾನ ಹೊಂದಿದ್ದರು. ಆದರೆ ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳಿಗೆ ಮೊಬೈಲ್‌ವೇ ಸರ್ವಸ್ವವಾಗಿದ್ದು, ಸಂಬಂಧಗಳ ನಡುವೆ ಅಂತರ ಹೆಚ್ಚುತ್ತಿರುವುದು ವಿಷಾದನೀಯ ಎಂದು ಹೇಳಿದರು.

ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಗುರು–ಹಿರಿಯರಿಂದ ಉತ್ತಮ ಮಾನವೀಯ ಮೌಲ್ಯಗಳನ್ನು ಕಲಿತುಕೊಂಡು ಸಮಾಜದ ಆಸ್ತಿಯಾಗಿ ಹೊರಹೊಮ್ಮಬೇಕು ಎಂದು ಕಿವಿಮಾತು ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಪೊಲೀಸ್ ಸಹಾಯಕ ಇನ್‌ಸ್ಪೆಕ್ಟರ್ ಪಾರ್ಥ ಮಾತನಾಡಿ, ಆಧುನಿಕತೆಯ ಭರಾಟೆಯಲ್ಲಿ ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿರುವುದು ವಿಷಾದನೀಯ. ಮಕ್ಕಳು ಮೊಬೈಲ್ ಸೇರಿದಂತೆ ಮಾದಕ ವಸ್ತುಗಳ ದಾಸರಾಗದೆ, ಉತ್ತಮ ಶಿಕ್ಷಣ ಪಡೆದು ದೇಶದ ಸತ್ಪ್ರಜೆಗಳಾಗಿ, ಪೋಷಕರಿಗೆ ಕೀರ್ತಿ ತರುವಂತಾಗಬೇಕು. ಹಿರಿಯರನ್ನು ಗೌರವಿಸುವ ಗುಣವನ್ನು ಬಾಲ್ಯದಿಂದಲೇ ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ವೇದಿಕೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯಿನಿ ಗೀತಾ ಪಾರ್ಥ ಹಾಗೂ ಸೇಕ್ರೆಡ್ ಹಾರ್ಟ್ ಕಾನ್ವೆಂಟ್‌ನ ಮದರ್ ಸೂಪೀರಿಯರ್ ಎ.ಜೆ. ಉಷಾ ಮಾತನಾಡಿದರು.

ಸಮಾರಂಭದಲ್ಲಿ ಪಾಲ್ಗೊಂಡಿದ್ದ 100ಕ್ಕೂ ಅಧಿಕ ಅಜ್ಜ–ಅಜ್ಜಿಯರನ್ನು ಸನ್ಮಾನಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದವರ ಗಮನ ಸೆಳೆದವು.

ಶಾಲಾ ಮಕ್ಕಳು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಿಸಿದರು. ಸಿಸ್ಟರ್ ಜಿನ್ಸಿ ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಟೆಸಿ ಮ್ಯಾನುಯೆಲ್ ಸ್ವಾಗತಿಸಿದರು. ಸತ್ಯದಾಸ್ ವಂದಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.1: ಕೊಡಗು ಜಿಲ್ಲಾ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಸ್ಥಾನ ಕೈತಪ್ಪಿರುವ ಕುರಿತು ಕೊಡಗು ಜಿಲ್ಲಾ…

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026

*ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*

ಅಕ್ಟೋಬರ್ 1, 2026

*ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*

ಅಕ್ಟೋಬರ್ 1, 2026

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.