Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
  • *ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*
  • *ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*
  • *ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಅ.1: ಕೊಡಗು ಜಿಲ್ಲಾ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಸ್ಥಾನ ಕೈತಪ್ಪಿರುವ ಕುರಿತು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಕಲೀಲ್ ಬಾಷಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತಾವು ಕೂಡ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ, ತಮ್ಮ ನಿರೀಕ್ಷೆ ಹುಸಿಯಾಗಿದೆ ಎಂದು ತಿಳಿಸಿದ್ದಾರೆ. ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದರೂ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿರುವ ಈ ಸಂದರ್ಭದಲ್ಲಿಯೂ ಸೂಕ್ತ ಸ್ಥಾನಮಾನ ದೊರೆಯದಿರುವುದು ಬೇಸರ ತಂದಿದೆ ಎಂದು ಹೇಳಿದ್ದಾರೆ.

ಪಕ್ಷದ ಸಂಘಟನೆ ಹಾಗೂ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು, ಪಕ್ಷದ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಸಾಕಷ್ಟು ಶ್ರಮವಹಿಸಿ ಕಾರ್ಯನಿರ್ವಹಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಪಕ್ಷದ ಸಂಘಟನೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಾರ್ಯಕರ್ತರು ಹಾಗೂ ಮುಖಂಡರು ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಅವರಿಗೆ ಸೂಕ್ತ ಸ್ಥಾನಮಾನ ಮತ್ತು ಜವಾಬ್ದಾರಿಗಳನ್ನು ನೀಡಬೇಕಾಗಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಯಾವುದೇ ನಿಗಮ-ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಸಮರ್ಪಕ ಸ್ಥಾನಮಾನ ದೊರೆತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಅರ್ಹ ಮುಖಂಡರು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ವಿವಿಧ ನಿಗಮ-ಮಂಡಳಿ, ಸ್ಥಳೀಯ ಸಂಸ್ಥೆಗಳು ಸೇರಿದಂತೆ ಪ್ರಮುಖ ಹುದ್ದೆಗಳಲ್ಲಿ ಅವಕಾಶ ಕಲ್ಪಿಸಬೇಕು ಎಂದು ಕಲೀಲ್ ಬಾಷಾ ಒತ್ತಾಯಿಸಿದ್ದಾರೆ.

ಪಕ್ಷಕ್ಕಾಗಿ ದೀರ್ಘಕಾಲ ಸೇವೆ ಸಲ್ಲಿಸಿದ ಕಾರ್ಯಕರ್ತರ ಸೇವೆಯನ್ನು ಗುರುತಿಸಿ, ಅವರಿಗೆ ಸೂಕ್ತ ಜವಾಬ್ದಾರಿ ನೀಡುವ ಮೂಲಕ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಅವರು ಕಾಂಗ್ರೆಸ್ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.1: ಕೊಡಗು ಜಿಲ್ಲಾ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಸ್ಥಾನ ಕೈತಪ್ಪಿರುವ ಕುರಿತು ಕೊಡಗು ಜಿಲ್ಲಾ…

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026

*ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*

ಅಕ್ಟೋಬರ್ 1, 2026

*ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*

ಅಕ್ಟೋಬರ್ 1, 2026

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.