ಮಡಿಕೇರಿ, NEWS DESK ಅ.2: ಮಡಿಕೇರಿಯ ಉದ್ಯಮಿ ಹಾಗೂ ಕೊಡಗು ಚೇಂಬರ್ ಆಫ್ ಕಾಮರ್ಸ್‌ನಲ್ಲಿ ಹಲವು ವರ್ಷಗಳ ಕಾಲ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ವೆಂಕಟೇಶ್ ಪೈ ಅವರು ಇಂದು ಮುಂಜಾನೆ 3 ಗಂಟೆಗೆ ನಿಧನರಾದರು.
ಇತ್ತೀಚೆಗೆ ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಮೃತರು ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಕುಟುಂಬಸ್ಥರು ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ.
ವೆಂಕಟೇಶ್ ಪೈ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅವರು ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಭಗವಂತನು ಸದ್ಗತಿ ನೀಡಲಿ ಹಾಗೂ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.








