Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*
  • *ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*
  • *ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*
  • *ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*
  • *ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*2018ರ ಸಂಕಷ್ಟದ ಚಿತ್ರಣ : ‘ಮುತ್ತು ನಾಡ್’ ಕಿರುಚಿತ್ರಕ್ಕೆ ಚಿಕಾಗೋ ಸ್ಕ್ರಿಪ್ಟ್ ಅವಾರ್ಡ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*2018ರ ಸಂಕಷ್ಟದ ಚಿತ್ರಣ : ‘ಮುತ್ತು ನಾಡ್’ ಕಿರುಚಿತ್ರಕ್ಕೆ ಚಿಕಾಗೋ ಸ್ಕ್ರಿಪ್ಟ್ ಅವಾರ್ಡ್*

ಅಕ್ಟೋಬರ್ 2, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಅ.2 : ಉದಿಯನ ಅನಿಲ್ ಉಲ್ಲಾಸ್ ನಿರ್ದೇಶನದ ‘ಮುತ್ತು ನಾಡ್’ ಕಿರುಚಿತ್ರವು ಚಿಕಾಗೋ ಸ್ಕ್ರಿಪ್ಟ್ ಅವಾರ್ಡ್‌ನ ‘ಬೆಸ್ಟ್ ಒರಿಜಿನಲ್ ಸ್ಕ್ರೀನ್‌ಪ್ಲೇ’ ಪ್ರಶಸ್ತಿಗೆ ಭಾಜನವಾಗಿದೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ನಿರ್ದೇಶಕ ಉದಿಯನ ಅನಿಲ್ ಉಲ್ಲಾಸ್, 2018ರ ಮುಂಗಾರು ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಗುಡ್ಡ ಕುಸಿತದಿಂದ ಮನೆ-ಮಠ ಹಾಗೂ ಬಂಧು-ಬಾಂಧವರನ್ನು ಕಳೆದುಕೊಂಡ ಕುಟುಂಬಗಳ ಅಂತರಾಳದ ನೋವು ಮತ್ತು ಅನುಭವಗಳನ್ನು ‘ಮುತ್ತು ನಾಡ್’ ಕಿರುಚಿತ್ರದ ಮೂಲಕ ಕಟ್ಟಿಕೊಡಲಾಗಿದೆ ಎಂದು ತಿಳಿಸಿದರು.

ವಿಕೋಪದ ನಂತರದ ಬದುಕನ್ನು ಅತ್ಯಂತ ಪರಿಣಾಮಕಾರಿಯಾಗಿ ಚಿತ್ರಿಸುವ ಈ ಸಿನಿಮಾ, ಮೌನದ ಮೂಲಕ ನೋವು-ನಲಿವುಗಳನ್ನು ಪ್ರೇಕ್ಷಕರಿಗೆ ತಲುಪಿಸುವ ಸೂಕ್ಷ್ಮ ಸಂವೇದನೆಯೊಂದಿಗೆ ರೂಪಿಸಲಾಗಿದೆ. ಚಿತ್ರವು ಪ್ರೇಕ್ಷಕರ ವೀಕ್ಷಣೆಗೆ ಸಜ್ಜಾಗಿದೆ ಎಂದರು.

ಮಡಿಕೇರಿ ಹಾಗೂ ಕಾಲೂರು ಭಾಗದಲ್ಲಿ ಪ್ರಸಕ್ತ ಸಾಲಿನ ಮೇ ಮತ್ತು ಜೂನ್ ತಿಂಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಸುಮಾರು 1 ಗಂಟೆ 30 ನಿಮಿಷಗಳ ಅವಧಿಯ ಈ ಚಿತ್ರದಲ್ಲಿ ಆರಂಭದಲ್ಲಿ ಅರೆಭಾಷೆಯ ಕೆಲವು ಮಾತುಗಳನ್ನು ಹೊರತುಪಡಿಸಿ, ಬಹುತೇಕ ಚಿತ್ರದುದ್ದಕ್ಕೂ ಭಾವನೆಗಳು ಮತ್ತು ಪ್ರಕೃತಿಯೇ ಪ್ರೇಕ್ಷಕರೊಂದಿಗೆ ಮೌನ ಸಂಭಾಷಣೆ ನಡೆಸುತ್ತವೆ.

ಭಾಷೆಯ ಮಿತಿಗಳನ್ನು ಮೀರಿ ಮೌನದ ಮೂಲಕವೇ ಚಿತ್ರವು ಜನರನ್ನು ತಲುಪಲಿದೆ ಎಂಬ ವಿಶ್ವಾಸವನ್ನು ನಿರ್ದೇಶಕರು ವ್ಯಕ್ತಪಡಿಸಿದರು.

ತಾಯಿಯನ್ನು ಕಳೆದುಕೊಂಡ ಮಗ ಹಾಗೂ ಪತ್ನಿಯನ್ನು ಕಳೆದುಕೊಂಡ ತಂದೆ ಎಂಬ ಎರಡು ಪ್ರಮುಖ ಪಾತ್ರಗಳ ಸುತ್ತ ಚಿತ್ರವನ್ನು ರೂಪಿಸಲಾಗಿದೆ. ಈ ಪಾತ್ರಗಳಿಗೆ ಕಲಾವಿದರಾದ ಅಲ್ಲಾರಂಡ ವಿಠಲ್ ನಂಜಪ್ಪ ಹಾಗೂ ಕಾಡ್ಯಮಾಡ ಸುಮನ್ ಜೀವ ತುಂಬಿದ್ದಾರೆ.

ಈಗಾಗಲೇ ‘ಮುತ್ತು ನಾಡ್’ ಕಿರುಚಿತ್ರವು ಚಿಕಾಗೋ ಸ್ಕ್ರಿಪ್ಟ್ ಅವಾರ್ಡ್‌ನ ‘ಬೆಸ್ಟ್ ಒರಿಜಿನಲ್ ಸ್ಕ್ರೀನ್‌ಪ್ಲೇ’ ಪ್ರಶಸ್ತಿಗೆ ಭಾಜನವಾಗಿರುವುದಾಗಿ ಚಿತ್ರದ ಸಹ ನಿರ್ದೇಶಕ ವೈಶಾಖ್ ಪೆರುಮನ ತಿಳಿಸಿದರು.

ಸಿನಿಮಾ ಕ್ಷೇತ್ರದ ಬೆಳವಣಿಗೆಯಲ್ಲಿ ಕಿರುಚಿತ್ರಗಳ ಕೊಡುಗೆಯೂ ಮಹತ್ವದ್ದಾಗಿದೆ. ಹೊಸ ಪರಿಕಲ್ಪನೆಯ ‘ಮುತ್ತು ನಾಡ್’ ಚಿತ್ರವನ್ನು ನಾಡಿನ ಜನತೆ ಪ್ರೋತ್ಸಾಹಿಸಿ ಗೆಲ್ಲಿಸಿಕೊಡಬೇಕು ಎಂದು ಅವರು ಮನವಿ ಮಾಡಿದರು.

ನಟ ಅಲ್ಲಾರಂಡ ವಿಠಲ್ ನಂಜಪ್ಪ ಮಾತನಾಡಿ, ಚಿತ್ರದ ಬಗ್ಗೆ ಆಸಕ್ತಿ ಹೊಂದಿರುವ ಸಮಾನ ಮನಸ್ಕರು ಒಗ್ಗೂಡಿ ಚಿತ್ರವನ್ನು ನಿರ್ಮಿಸಿದ್ದು, ಈ ಚಿತ್ರದ ಮೂಲಕ ಸಾಮರಸ್ಯದ ಸಂದೇಶವನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ ಎಂದರು. ಅಲ್ಲಾರಂಡ ಮುಕುಲ್ ನಂಜಪ್ಪ ಛಾಯಾಗ್ರಹಣ ನಿರ್ವಹಿಸಿದ್ದಾರೆ ಎಂದು ತಿಳಿಸಿದರು.

ಶೀಘ್ರದಲ್ಲೇ ಮಡಿಕೇರಿಯ ಗಾಂಧಿ ಭವನದಲ್ಲಿ ಚಿತ್ರದ ಪ್ರದರ್ಶನ ಆಯೋಜಿಸುವ ಉದ್ದೇಶವಿದೆ. ಅಲ್ಲದೆ ಗೋಣಿಕೊಪ್ಪಲು, ಸುಂಟಿಕೊಪ್ಪ ಹಾಗೂ ಮೈಸೂರು ಸೇರಿದಂತೆ ಕೆಲವು ಚಿತ್ರಮಂದಿರಗಳಲ್ಲಿ ಪ್ರದರ್ಶನಕ್ಕೆ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ಚಿತ್ರತಂಡ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಕಲಾವಿದರಾದ ಕಾಡ್ಯಮಾಡ ಸುಮನ್, ಮಿಟ್ಟು ರಂಜಿತ್ ಹಾಗೂ ಬರಹಗಾರ ರಂಜಿತ್ ಕವಲಪಾರ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, ಅ.2 NEWS DESK :: ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ…

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026

*ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*

ಅಕ್ಟೋಬರ್ 2, 2026

*ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*

ಅಕ್ಟೋಬರ್ 2, 2026

*ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*

ಅಕ್ಟೋಬರ್ 2, 2026

*ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 2, 2026

*ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.