ನಾಪೋಕ್ಲು, NEWS DESK ಅ.02: ಬೆಳಕು ಸಾಹಿತ್ಯ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಟ್ರಸ್ಟ್ ವತಿಯಿಂದ ನೀಡಲಾಗುವ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿಗೆ ಮಡಿಕೇರಿ ತಾಲೂಕಿನ ಹಳೇ ತಾಲೂಕು ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಭಾಗ್ಯವತಿ ಸಿ.ಜೆ. ಅವರನ್ನು ಆಯ್ಕೆ ಮಾಡಿ ಸನ್ಮಾನಿಸಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಅವರು ಸಲ್ಲಿಸುತ್ತಿರುವ ಅನನ್ಯ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ನ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ ತಿಳಿಸಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ 126ನೇ ಚಿಗುರು ಸಮ್ಮೇಳನದ ವೇದಿಕೆಯಲ್ಲಿ ಭಾಗ್ಯವತಿ ಸಿ.ಜೆ. ಅವರಿಗೆ ಪ್ರಶಸ್ತಿಯನ್ನು ಗೌರವಪೂರ್ವಕವಾಗಿ ಪ್ರದಾನ ಮಾಡಲಾಯಿತು.







