Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕರ್ನಾಟಕದಲ್ಲಿ ಹಿಂಗಾರು ಮಳೆ ಕೊರತೆ ಸಾಧ್ಯತೆ: ರೈತರಿಗೆ ಎಚ್ಚರಿಕೆ*
  • *ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*
  • *ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*
  • *ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*
  • *ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*
  • *ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.3: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಕೊಡವ ಪ್ರದೇಶದಾದ್ಯಂತ ನಡೆಯುತ್ತಿರುವ ಜನಜಾಗೃತಿ ಕಾರ್ಯಕ್ರಮದ ಭಾಗವಾಗಿ ಅಕ್ಟೋಬರ್ 6ರಂದು ಬೆಳಗ್ಗೆ 10.30 ಗಂಟೆಗೆ ಬೇಂಗ್ ನಾಡಿನ ಚೇರಂಬಾಣೆಯಲ್ಲಿ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ. ಕೊಡವಲ್ಯಾಂಡ್‌ಗೆ ಸಂವಿಧಾನದ 244 ಮತ್ತು 371ನೇ ವಿಧಿ ಹಾಗೂ 5 ಮತ್ತು 6ನೇ ಶೆಡ್ಯೂಲ್ ಅಡಿಯಲ್ಲಿ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಕಲ್ಪಿಸಬೇಕು. ಕೊಡವ ಜನಾಂಗಕ್ಕೆ ಆದಿಮಸಂಜಾತ ಸಮುದಾಯವಾಗಿ ವಿಶೇಷ ಸಂವಿಧಾನಬದ್ಧ ಮಾನ್ಯತೆ ನೀಡಬೇಕು, ಕೊಡವರ ಪವಿತ್ರ ಗನ್-ತೋಕ್ ಆಚರಣೆಗೆ ಸಂವಿಧಾನದ 25, 26 ಮತ್ತು 28ನೇ ವಿಧಿಗಳ ಅಡಿಯಲ್ಲಿ ರಕ್ಷಣೆ ನೀಡಬೇಕು ಎಂದು ಕೊಡವ ಜನಜಾಗೃತಿ  ಮಾನವ ಸರಪಳಿ ಸಂದರ್ಭ ಆಗ್ರಹಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕೊಡವ ಜನಾಂಗಕ್ಕೆ ಪ್ರತ್ಯೇಕ ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರ, ಶಾಸ್ತ್ರೀಯ ಕೊಡವ ತಕ್ಕ್ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್‌ಗೆ ಸೇರ್ಪಡೆ, ಹಾಗೂ ಕೆಲದಿ/ಪಾಲೇರಿ ರಾಜರು ಮತ್ತು ಬ್ರಿಟಿಷರ ಕಾಲದಲ್ಲಿ ವಶಪಡಿಸಿಕೊಂಡ ವಂಶಪಾರಂಪರ್ಯ ಆಸ್ತಿಗಳನ್ನು ಕೊಡವರಿಗೆ ಮರಳಿಸಬೇಕು. 2027ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರನ್ನು ಪ್ರತ್ಯೇಕವಾಗಿ ದಾಖಲಿಸಿ, ಪ್ರತ್ಯೇಕ ‘ಕೋಡ್’ ಮತ್ತು ಕಾಲಂ ನೀಡಬೇಕು. 1871-72ರಿಂದ 1941ರವರೆಗಿನ ಜನಗಣತಿಗಳಲ್ಲಿ ಕೊಡವರನ್ನು ಪ್ರತ್ಯೇಕ ಜನಾಂಗೀಯ ಸಮುದಾಯವಾಗಿ ದಾಖಲಿಸಲಾಗಿತ್ತು. 1941ರ ನಂತರ ಕೊಡವರ ಗುರುತನ್ನು ದೊಡ್ಡ ಗುಂಪುಗಳೊಂದಿಗೆ ವಿಲೀನಗೊಳಿಸಲಾಯಿತು. 1956ರ ರಾಜ್ಯ ಮರುಸಂಘಟನಾ ಕಾಯ್ದೆಯ ಮೂಲಕ ಕೊಡಗು ಕರ್ನಾಟಕಕ್ಕೆ ವಿಲೀನಗೊಂಡಿರುವುದನ್ನೂ ಸಿಎನ್‌ಸಿ ಐತಿಹಾಸಿಕ ಅನ್ಯಾಯವೆಂದು ಆರೋಪಿಸಿದ್ದಾರೆ. ಕೊಡಗಿನಲ್ಲಿ ಭೂ ಪರಿವರ್ತನೆ, ಹೊರಗಿನ ಬಂಡವಾಳದ ಮೂಲಕ ದೊಡ್ಡ ಪ್ರಮಾಣದ ಭೂ ಖರೀದಿ, ಮೆಗಾ ಟೌನ್‌ಶಿಪ್‌ಗಳು, ಬೃಹತ್ ರೆಸಾರ್ಟ್‌ಗಳು ಮತ್ತು ಲೇಔಟ್‌ಗಳ ನಿರ್ಮಾಣದಿಂದ ಕಾವೇರಿ ನದಿ ಮೂಲಗಳು, ಕಾಫಿ ತೋಟಗಳು, ಕೃಷಿ ಪ್ರದೇಶ ಹಾಗೂ ಅರಣ್ಯ ಪ್ರದೇಶಗಳ ಮೇಲೆ ಪರಿಣಾಮ ಬೀರುತ್ತಿದೆ. ಇಂತಹ ಬೆಳವಣಿಗೆಗಳಿಂದ ಕೊಡಗಿನ ಜನಸಂಖ್ಯೆ, ಭೂ ಬಳಕೆ ಮತ್ತು ಪರಿಸರ ವ್ಯವಸ್ಥೆಯಲ್ಲಿ ಬದಲಾವಣೆ ಉಂಟಾಗುತ್ತಿದೆ. ಇದು ಆತಂಕಕಾರಿಯಾಗಿವುದರಿಂದ ಕೊಡವ ಜನಾಂಗ, ಕೊಡವಲ್ಯಾಂಡ್ ಮತ್ತು ಕೊಡವ ಗುರುತಿನ ರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕರ್ನಾಟಕದಲ್ಲಿ ಹಿಂಗಾರು ಮಳೆ ಕೊರತೆ ಸಾಧ್ಯತೆ: ರೈತರಿಗೆ ಎಚ್ಚರಿಕೆ*

ಅಕ್ಟೋಬರ್ 3, 2026

*ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*

ಅಕ್ಟೋಬರ್ 3, 2026

*ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*

ಅಕ್ಟೋಬರ್ 3, 2026

*ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*

ಅಕ್ಟೋಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK  ಅ.3: ಪ್ರಜಾ ಸೇವೆ ಅಭಿಯಾನದಲ್ಲಿ ಕೇವಲ ಅರ್ಜಿಗಳನ್ನು ಸ್ವೀಕರಿಸುವುದಷ್ಟೇ ಅಲ್ಲದೆ, ಅರ್ಜಿಗಳಲ್ಲಿರುವ ಸಮಸ್ಯೆ ಮತ್ತು ಬೇಡಿಕೆಗಳಿಗೆ…

*ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*

ಅಕ್ಟೋಬರ್ 3, 2026

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*

ಅಕ್ಟೋಬರ್ 3, 2026

*ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 3, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*

ಅಕ್ಟೋಬರ್ 3, 2026

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.