Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.4 : ಮಡಿಕೇರಿ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ 2026-27ನೇ ಸಾಲಿನ ರೋಟರೆಕ್ಟ್ ಕ್ಲಬ್‌ನ ಪದಗ್ರಹಣ ಸಮಾರಂಭ ನಡೆಯಿತು. ವಿದ್ಯಾರ್ಥಿನಿ ಅಶಿತಾ ಅಧ್ಯಕ್ಷೆಯಾಗಿ ಹಾಗೂ ಭೂಮಿಕಾ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ಹಸಿರು ಗಿಡಗಳಿಗೆ ನೀರುಣಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಲಾಯಿತು. ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷೆ ರೊ. ಪ್ರಮೀಳಾ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೋಟರಿ ಜಿಲ್ಲೆ 3181ರ ವಲಯ 6ರ ವಲಯ ಸೇನಾನಿ ಹಾಗೂ ಪದಗ್ರಹಣಾಧಿಕಾರಿ ರೋ.ವಸಂತ್ ಕುಮಾರ್ ಕೆ. ಅವರು ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಮಾತನಾಡಿದ ಅವರು, “ವಿಶಾಲವಾದ ಮರದಂತಿರುವ ರೋಟರಿ ಸಂಸ್ಥೆಯ ಒಂದು ಸಣ್ಣ ಚಿಗುರೇ ರೋಟರೆಕ್ಟ್ ಕ್ಲಬ್. ವಿದ್ಯಾರ್ಥಿಗಳು ರೋಟರೆಕ್ಟ್ ಕ್ಲಬ್ ಸೇರುವ ಮೂಲಕ ಉತ್ತಮ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು, ಮುಂದಿನ ದಿನಗಳಲ್ಲಿ ರೋಟರಿಯನ್‌ಗಳಾಗಿ ಗುರುತಿಸಿಕೊಳ್ಳಬೇಕು” ಎಂದು ಕರೆ ನೀಡಿದರು. ಅವಕಾಶಕ್ಕಾಗಿ ಕಾಯದೆ, ತಾವೇ ಅವಕಾಶಗಳನ್ನು ಸೃಷ್ಟಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ರೋಟರೆಕ್ಟರ್‌ಗಳಿಗೆ ಸಲಹೆ ನೀಡಿದರು. ರೋಟರಿ ವುಡ್ಸ್‌ನ ಸ್ಥಾಪಕ ಅಧ್ಯಕ್ಷ ರೊ. ಸಂಪತ್ ಕುಮಾರ್ ಅವರು ಮಾತನಾಡಿ, ರೋಟರೆಕ್ಟರ್‌ಗಳು ಸಣ್ಣ ಸಣ್ಣ ಪ್ರಾಜೆಕ್ಟ್‌ಗಳನ್ನು ಕೈಗೆತ್ತಿಕೊಳ್ಳುವತ್ತ ಗಮನಹರಿಸಬೇಕು. ಈ ನಿಟ್ಟಿನಲ್ಲಿ ಮಾತೃ ಸಂಸ್ಥೆಯಾದ ರೋಟರಿ ವುಡ್ಸ್ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದರು. ರೋಟರಿ ವುಡ್ಸ್‌ನ ನಿಕಟಪೂರ್ವ ಅಧ್ಯಕ್ಷ ರೊ. ಕಿರಣ್ ಕುಂದರ್ ಮಾತನಾಡಿ, ಕಳೆದ ಸಾಲಿನಲ್ಲಷ್ಟೇ ಆರಂಭಗೊಂಡಿರುವ ರೋಟರೆಕ್ಟ್ ಕ್ಲಬ್ ಹೆಚ್ಚಿನ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ರೋಟರಿ ಜಿಲ್ಲೆಯಲ್ಲಿ ಅತ್ಯುತ್ತಮ ರೋಟರೆಕ್ಟ್ ಕ್ಲಬ್ ಆಗಿ ಗುರುತಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ರೋಟರೆಕ್ಟ್ ಕುರಿತು ಸವಿಸ್ತಾರವಾಗಿ ತಿಳಿದುಕೊಂಡು ಸೇವಾ ಮನೋಭಾವ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ಜಿಲ್ಲೆ 3181ರ ರೋಟರೆಕ್ಟ್ ಜಿಲ್ಲಾ ಪ್ರತಿನಿಧಿ ರೋ. ಶ್ರೀರಕ್ಷಾ ಪ್ರಭಾಕರ್ ಅವರು ಕಾಲೇಜಿನ ರೋಟರೆಕ್ಟ್ ಕ್ಲಬ್‌ನ ಕಾರ್ಯಕ್ರಮಗಳನ್ನು ಪ್ರಶಂಸಿಸಿ, ರೋಟರೆಕ್ಟ್ ಹಾಗೂ ರೋಟರಿ ಕುರಿತು ಜ್ಞಾನವನ್ನು ಹೆಚ್ಚಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ತಾನು ರೋಟರೆಕ್ಟರ್ ಆಗಿ ಗುರುತಿಸಿಕೊಳ್ಳಲು ರೋಟರಿ ಕ್ಲಬ್ ಮಡಿಕೇರಿ ವುಡ್ಸ್ ನೀಡಿದ ಮಾರ್ಗದರ್ಶನವೇ ಕಾರಣ ಎಂದು ತಿಳಿಸಿ, ರೋಟರಿ ವುಡ್ಸ್‌ಗೆ ಕೃತಜ್ಞತೆ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ವೇಣುಗೋಪಾಲ್ ಮಾತನಾಡಿ, ರೋಟರಿ ವುಡ್ಸ್ ಸಹಯೋಗದಲ್ಲಿ ಕಾಲೇಜಿನಲ್ಲಿ ರೋಟರೆಕ್ಟ್ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಇದು ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ರೋಟರೆಕ್ಟ್ ಕ್ಲಬ್‌ನ ಎಲ್ಲಾ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ರೋಟರೆಕ್ಟ್ ಕ್ಲಬ್‌ನ ಸಮನ್ವಯಾಧಿಕಾರಿ ರೊ.ರಾಖಿ ಪೂವಣ್ಣ, ಅಧ್ಯಾಪಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರೋ.ಶ್ರೀರಕ್ಷಾ ಪ್ರಭಾಕರ್ ಅವರನ್ನು ರೋಟರಿ ವುಡ್ಸ್ ಅಧ್ಯಕ್ಷರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಇತ್ತೀಚೆಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ ಪಡೆದ ರೋ.ರಾಖಿ ಪೂವಣ್ಣ ಅವರನ್ನು ರೋಟರಿ ವುಡ್ಸ್ ವತಿಯಿಂದ ಸನ್ಮಾನಿಸಲಾಯಿತು. ರೋಟರಿ ವುಡ್ಸ್ ಕಾರ್ಯದರ್ಶಿ ರೋ. ಸ್ಮಿತಾ ಚೆಂಗಪ್ಪ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.