Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.4 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುರುಷ ಸಾಹಿತಿಗಳಿಗೆ ಮೀಸಲಾಗಿರುವ ಪ್ರತಿಷ್ಠಿತ **‘ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’**ಗೆ ಜಿಲ್ಲೆಯ ಹಿರಿಯ ಸಾಹಿತಿ ಹಾಗೂ ವಕೀಲರಾದ ಬಾಳೆಯಡ ಕಿಶನ್ ಪೂವಯ್ಯ ಅವರು ರಚಿಸಿರುವ ‘ರಾಜಕೀಯ ಮತ್ತು ಪ್ರಕೃತಿ’ ಕೃತಿ ಆಯ್ಕೆಯಾಗಿದೆ. ದೈನಿಕ ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿದ್ದ ದಿ. ಬಿ.ಎಸ್. ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಅವರ ಪುತ್ರರು ಸ್ಥಾಪಿಸಿರುವ ಈ ದತ್ತಿ ಪ್ರಶಸ್ತಿಯು ಪ್ರಸಕ್ತವಾಗಿ ಮೂರನೇ ಪ್ರಶಸ್ತಿಯಾಗಿದೆ. ಪ್ರಶಸ್ತಿಗಾಗಿ ಜಿಲ್ಲೆಯ ಪುರುಷ ಬರಹಗಾರರು ಸಲ್ಲಿಸಿದ್ದ ಕೃತಿಗಳನ್ನು ಜಿಲ್ಲೆಯ ಮೂವರು ಹಿರಿಯ ಸಾಹಿತಿಗಳು ಪ್ರತ್ಯೇಕವಾಗಿ ಪರಿಶೀಲಿಸಿ ಅಂಕಗಳನ್ನು ನೀಡಿದ್ದರು. ತೀರ್ಪುಗಾರರು ನೀಡಿದ ಅಂಕಗಳನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಮಿತಿ ಒಟ್ಟುಗೂಡಿಸಿದಾಗ, ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿ ಅತಿ ಹೆಚ್ಚು ಅಂಕಗಳನ್ನು ಪಡೆದು ಪ್ರಶಸ್ತಿಗೆ ಆಯ್ಕೆಯಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ. ವಕೀಲರು, ನೋಟರಿ ಹಾಗೂ ಸಾಹಿತಿಯಾಗಿರುವ ಕಿಶನ್ ಪೂವಯ್ಯ ಅವರು ತಮ್ಮ ರಚನಾತ್ಮಕ ಬರಹಗಳ ಮೂಲಕ ಜಿಲ್ಲೆಯ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಸಮಾಜದ ಹಿತಚಿಂತಕರಾಗಿರುವ ಅವರು ಹಲವು ಸಂಘ-ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರ ನೇರನುಡಿ, ಜಾತ್ಯತೀತ ಮನೋಭಾವ ಹಾಗೂ ಎಲ್ಲ ವರ್ಗದವರೊಂದಿಗೆ ಹೊಂದಿರುವ ಆತ್ಮೀಯ ಒಡನಾಟ ಅವರಿಗೆ ವಿಶೇಷ ಗೌರವ ತಂದುಕೊಟ್ಟಿದೆ. ಸಮಾಜದ ಆಗುಹೋಗುಗಳ ಕುರಿತು ಹಲವು ಲೇಖನಗಳನ್ನು ಬರೆದಿರುವ ಕಿಶನ್ ಪೂವಯ್ಯ ಅವರು ‘ವ್ಯಕ್ತಿ ಪರಿಚಯ ಮತ್ತು ಸಾಮಾಜಿಕ ಚಿಂತನೆ’ ಕೃತಿಯ ಮೂಲಕ ರಾಜಕಾರಣಿಗಳು, ವೈದ್ಯರು, ಚಿತ್ರಕಲಾವಿದರು, ಪತ್ರಕರ್ತರು, ಕ್ರೀಡಾಪಟುಗಳು, ಜನಪ್ರತಿನಿಧಿಗಳು, ಪೊಲೀಸರು ಹಾಗೂ ಸೈನಿಕರು ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಭಾವಿ ವ್ಯಕ್ತಿಗಳ ಸಾಧನೆಗಳನ್ನು ಪರಿಚಯಿಸಿದ್ದಾರೆ. ಕೊಡಗು ಜಿಲ್ಲಾ ವಕೀಲರ ಸಂಘ, ಮಡಿಕೇರಿಯ ಕಾವೇರಿ ಕೊಡವ ಕೇರಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ದಸರಾ ಸಮಿತಿ, ಕಾವೇರಿ ಭಕ್ತ ಮಂಡಳಿ ಹಾಗೂ ಕೂರ್ಗ್ ಹಾಕಿ ಅಸೋಸಿಯೇಷನ್ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ಬಾಳೆಯಡ ಕುಟುಂಬದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. *ದತ್ತಿ ಪ್ರಶಸ್ತಿಯ ಹಿಂದಿನ ಪುರಸ್ಕೃತರು* ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿಯ ಪ್ರಥಮ ಪ್ರಶಸ್ತಿಯನ್ನು ಜಿಲ್ಲೆಯ ಹಿರಿಯ ಸಾಹಿತಿ ನಾಗೇಶ್ ಕಾಲೂರು ಅವರು ‘ಶ್ರೀ ಕಾವೇರಿ ದರ್ಶನಂ – ಸಮಗ್ರ ಕಾವೇರಿ’ ಕೃತಿಗೆ ಪಡೆದಿದ್ದರು. ದ್ವಿತೀಯ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಹಾಗೂ ವೈದ್ಯರಾದ ಡಾ. ಕೆ.ಬಿ. ಸೂರ್ಯಕುಮಾರ್ ಅವರು ‘ವೈದ್ಯ ಕಂಡ ವಿಸ್ಮಯ’ ಕೃತಿಗೆ ಪಡೆದುಕೊಂಡಿದ್ದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಸಭೆಯಲ್ಲಿ ತೀರ್ಪುಗಾರರು ಕಳುಹಿಸಿದ್ದ ಅಂಕಪಟ್ಟಿಗಳನ್ನು ಪರಿಶೀಲಿಸಿ, ಅಂಕಗಳನ್ನು ಒಟ್ಟುಗೂಡಿಸಲಾಯಿತು. ಸಭೆಯಲ್ಲಿ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಾಸುರೈ ಉಪಸ್ಥಿತರಿದ್ದರು. ಮುಂದೆ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಾಳೆಯಡ ಕಿಶನ್ ಪೂವಯ್ಯ ಅವರಿಗೆ ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Related Posts

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.