ವಿರಾಜಪೇಟೆ, NEWS DESK ಅ.06: ಕೊಡಗು ಜಿಲ್ಲೆ ಅನುದಾನ ರಹಿತ ಶಾಲೆಗಳ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಭೇಟಿಯಾಗಿ, ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ಪ್ರಮುಖ ವಿಚಾರಗಳ ಕುರಿತು ಚರ್ಚಿಸಲಾಯಿತು.
ಖಾಸಗಿ ಶಾಲೆಗಳಿಗೆ ಸಂಬಂಧಿಸಿದಂತೆ ಜಾರಿಯಲ್ಲಿರುವ ನಿಯಮಗಳು, ಮಾನ್ಯತೆ ನವೀಕರಣ ಪ್ರಕ್ರಿಯೆ ಹಾಗೂ ಶಾಲೆಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಶಾಸಕರೊಂದಿಗೆ ಸಮಗ್ರವಾಗಿ ಚರ್ಚೆ ನಡೆಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಕೊಡಗು ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ಕೊಟ್ರಂಗಡ ತಿಮ್ಮಯ್ಯ, ಉಪಾಧ್ಯಕ್ಷ ಮಣಿ ಮಹಮ್ಮದ್, ಕಾನೂನು ಸಲಹೆಗಾರ ಎಂ. ಎಸ್. ಪೂವಯ್ಯ, ಸದಸ್ಯರಾದ ಮದಂಡ ತಿಮ್ಮಯ್ಯ, ಶ್ವೇತಾ ಚಂಗಪ್ಪ, ಇಲಾಯಸ್ ಹಾಗೂ ನೀರನ್ ಉತ್ತಪ್ಪ ಉಪಸ್ಥಿತರಿದ್ದರು.








