
ಮೂರ್ನಾಡು ಅ.7 NEWS DESK : ಮೂರ್ನಾಡು ಎಜುಕೇಶನ್ ಸೊಸೈಟಿಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಅ.8ರಿಂದ 14ರವರೆಗೆ ‘ಯೂತ್ ಫಾರ್ ಭಾರತ್’ ವಿಶೇಷ ವಾರ್ಷಿಕ ಶಿಬಿರವನ್ನು ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ. ಅ.8ರಂದು ಅಪರಾಹ್ನ 3 ಗಂಟೆಗೆ ಮೂರ್ನಾಡು ಎಜುಕೇಶನ್ ಸೊಸೈಟಿಯ ಗೌರವ ಕಾರ್ಯದರ್ಶಿ ಪುದಿಯೊಕ್ಕಡ ಹರೀಶ್ ದೇವಯ್ಯ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ. ಗಣಪತಿ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಪಿ. ಮಹೇಶ್, ಮೂರ್ನಾಡು ಎಜುಕೇಶನ್ ಸೊಸೈಟಿಯ ನೆರವಂಡ ಜಯ ಮುತ್ತಪ್ಪ, ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಮೇಶ್ ಪಿ.ಆರ್., ಹಾಕತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಂದಿರ ತೇಜಸ್ ನಾಣಯ್ಯ, ಸಮೂಹ ಸಂಪನ್ಮೂಲ ವ್ಯಕ್ತಿ ಪಿ.ಆರ್. ಕಲ್ಪನಾ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವಿನುತ ಪಿ.ಆರ್., ಜ್ಞಾನಜ್ಯೋತಿ ಸ್ವ-ಸಹಾಯ ಸಂಘದ ಅಧ್ಯಕ್ಷೆ ಉಳುವಾರನ ಗೀತಾ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕ್ಕಿ ಹಾಗೂ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ರಶ್ಮಿ ಪಿ.ಎಚ್. ಅವರು ಭಾಗವಹಿಸಲಿದ್ದಾರೆ. ಮೂರ್ನಾಡು ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷ ಪಳಂಗಂಡ ವಿಠಲ್ ಪೂವಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ವರದಿ: ಟಿ.ಸಿ. ನಾಗರಾಜ್, ಮೂರ್ನಾಡು


















