ಮಡಿಕೇರಿ, NEWS DESK ಅ.8: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ (ಸಂಪುಟ ದರ್ಜೆ) ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಅಕ್ಟೋಬರ್ 9ರಂದು ಬೆಂಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರಿನಿಂದ ಬೆಳಗ್ಗೆ ನೆಲಮಂಗಲ, ಕುಣಿಗಲ್, ನಾಗಮಂಗಲ, ಕೃಷ್ಣರಾಜಪೇಟೆ, ಸಾಲಿಗ್ರಾಮ ಹಾಗೂ ಕುಶಾಲನಗರ ಮಾರ್ಗವಾಗಿ ಮಡಿಕೇರಿಗೆ ಆಗಮಿಸಲಿರುವ ಅವರು, ಬೆಳಗ್ಗೆ 11 ಗಂಟೆಗೆ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ನಡೆಯುವ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಹೆರವನಾಡಿನಲ್ಲಿ ನಿಂಗಪ್ಪನ ಕುಟುಂಬಸ್ಥರ ಐನ್ ಮನೆಗೆ ತೆರಳುವ ರಸ್ತೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 3.30ಕ್ಕೆ ಕಾರುಗುಂದದಲ್ಲಿ ಕೊಕ್ಕಂಡ ಕುಟುಂಬಸ್ಥರ ಐನ್ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ.
ಸಂಜೆ 4 ಗಂಟೆಗೆ ಕಾರುಗುಂದದಲ್ಲಿ ಗುಡ್ಡನ ಮನೆ, ಪುದಿಯತಂಡ ಮನೆ, ಕೊಡಗನ ಮನೆ, ತೇನನ ಮನೆ ಹಾಗೂ ಅಜ್ಜಟ್ಟಿರ ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ.
ಸಂಜೆ 4.45ಕ್ಕೆ ಬೆಟ್ಟಗೇರಿಯಲ್ಲಿ ಸಮುದಾಯ ಭವನ ನಿರ್ಮಾಣದ ಸ್ಥಳ ಪರಿಶೀಲನೆ ನಡೆಸಿ, ಬಳಿಕ ಸಾರ್ವಜನಿಕರೊಂದಿಗೆ ಸಭೆ ನಡೆಸಲಿದ್ದಾರೆ.
ಸಂಜೆ 6 ಗಂಟೆಗೆ ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ನಂತರದ ಕಾರ್ಯಕ್ರಮಗಳ ವಿವರಗಳನ್ನು ಬಳಿಕ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
















